ಸಿದ್ದರಾಮಯ್ಯರ ಜನಪ್ರಿಯತೆ ಹಾಗೂ ಡಿಕೆಶಿ ರವರ ಪರಿಶ್ರಮದಿಂದ ಕಾಂಗ್ರೆಸ್ ಅಧಿಕಾರಕ್ಕೇರಿದೆ – ಬಂಡಿ ರಾಮಚಂದ್ರ

ಡಿಕೆಶಿ ಜನ್ಮದಿನಾಚರಣೆ ಮತ್ತು ಬೇಳೂರು ಗೆಲುವಿಗೆ ಕಾರ್ಯಕರ್ತರಿಗೆ ಮತದಾರರಿಗೆ ಆಭಿನಂದನೆ’’

ರಿಪ್ಪನ್‌ಪೇಟೆ : ಸಿದ್ದರಾಮಯ್ಯರವರ ಜನಪ್ರಿಯತೆ ಹಾಗೂ ಡಿ ಕೆ ಶಿವಕುಮಾರ್ ರವರ ರವರ ಶ್ರಮದಿಂದ ಪಕ್ಷ ಅಧಿಕಾರಕ್ಕೇರಿದೆ ಎಂದು ಜಿಪಂ ಮಾಜಿ ಸದಸ್ಯ ಬಂಡಿ ರಾಮಚಂದ್ರ ಹೇಳಿದರು.

ಅವರು ಇಂದು ಪಟ್ಟಣದ ಕಾಂಗ್ರೆಸ್ ಕಛೇರಿಯಲ್ಲಿ ಆಯೋಜಿಸಿದ್ದ ಕಾರ್ಯಕರ್ತರು ಹಾಗೂ ಮತದಾರರಿಗೆ ಕೃತಜ್ಞತಾ ಸಭೆಯಲ್ಲಿ ಭಾಗವಹಿಸಿ ನಂತರ ಪತ್ರೀಕಾ ಗೋಷ್ಠಿಯಲ್ಲಿ ಮಾತನಾಡಿ ರಾಜ್ಯದಲ್ಲಿ ಕಳೆದ ಹತ್ತು ವರ್ಷಗಳಿಂದ ಅಡಳಿತ ನಡೆಸಿದ ಬಿಜೆಪಿ ಭ್ರಷ್ಟಾಸರ್ಕಾರವನ್ನು ಕಿತ್ತು ಹಾಕುವುದೇ ನಮ್ಮ ಕಾಂಗ್ರೆಸ್ ಗುರಿಯಾಗಿದೆ ಆ ನಿಟ್ಟಿನಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಹಲವು ಜನಹಿತ ಪ್ರಣಾಳಿಕೆಯನ್ನು ಘೋಷಿಸುವ ಮೂಲಕ ನಿರೀಕ್ಷೆಗೂ ಮೀರಿದ ಸ್ಪಷ್ಟ ಬಹುಮತದೊಂದಿಗೆ ಪಕ್ಷವನ್ನು ಗೆಲಿಸುವಲ್ಲಿ ಯಶಸ್ವಿಯಾಗಿದ್ದು ನಮ್ಮ ಕಾರ್ಯಕರ್ತರು ಮತ್ತು ಮತದಾರರು ಹಗಲಿರುಳು ಶ್ರಮಿಸಿದ್ದರ ಪ್ರತಿಫಲವೇ ಕಾಂಗ್ರೆಸ್ ಪಕ್ಷದ ಗೆಲುವಿಗೆ ಕಾರಣವಾಗಿದೆ,ಇನ್ನೂ ಮುಂದೆ ಮೈಮರೆಯದೆ ಪಕ್ಷದ ಸಂಘಟನೆಯೊಂದಿಗೆ ಮತದಾರರ ಪ್ರೀತಿ ವಿಶ್ವಾಸವನ್ನು ಬೆಳಸಿಕೊಂಡು ಸರ್ಕಾರದ ಜನಪರ ಕಾರ್ಯಕ್ರಮಗಳನ್ನು ತಲುಪಿಸುವ ನಿಟ್ಟಿನಲ್ಲಿ ಸಹಕಾರಿಯಾಗುವಂತೆ ಜಿ.ಪಂ ಮಾಜಿ ಸದಸ್ಯ ಬಂಡಿ ರಾಮಚಂದ್ರ ಕಾರ್ಯಕರ್ತರಿಗೆ ಹುರಿದುಂಬಿಸಿ ಅಭಿನಂದಿಸಿದರು.

ಕಾಂಗ್ರೆಸ್ ಪಕ್ಷ ಅಭಿವೃದ್ಧಿ ಆಧಾರದಲ್ಲಿ ಮತ ಕೇಳಿದ್ದರೇ ಬಿಜೆಪಿ ಪಕ್ಷ ಹಲಾಲ್ – ಹಿಜಾಬ್ ನಂತಹ ಕೋಮು ಧೃವೀಕರಣದ ಆಧಾರದಲ್ಲಿ ಮತ ಕೇಳಿತ್ತು ಆ ಹಿನ್ನಲೆಯಲ್ಲಿ ರಾಜ್ಯದ ಪ್ರಜ್ಞಾವಂತ ಜನ ಕಾಂಗ್ರೆಸ್ ಪಕ್ಷವನ್ನು ಆಯ್ಕೆ ಮಾಡಿದ್ದಾರೆ.ಬಿಜೆಪಿ ಪಕ್ಷ ನೀಡಿದ್ದ ಎಲ್ಲಾ ತರಹದ ಕಿರುಕುಳಗನ್ನು ಅನುಭವಿಸಿದ್ದ ಡಿ ಕೆ ಶಿವಕುಮಾರ್ ಇಂದು ಸತತ ಪರಿಶ್ರಮದಿಂದ ಕಾಂಗ್ರೆಸ್ ಸರ್ಕಾರ ಬಂದಿದೆ ಎಂದರು.

ರಿಪ್ಪನ್‌ಪೇಟೆ ಕಾಂಗ್ರೆಸ್ ಘಟಕದ ಅಧ್ಯಕ್ಷ ಅಶೀಫ್‌ ಭಾಷಾ ಮಾತನಾಡಿ ಸಾಗರ ಕ್ಷೇತ್ರದಲ್ಲಿ ದ್ವೇಷ ಸೋತು ಪ್ರೀತಿ ಗೆದ್ದಿದೆ,ಮಾಜಿ ಸಚಿವ ಕಾಗೋಡು ತಿಮ್ಮಪ್ಪನವರ ಸೋಲನ್ನು ಈ ಚುನಾವಣೆಯಲ್ಲಿ ಬೆಳೂರು ಗೋಪಾಲಕೃಷ್ಣ ರವರನ್ನು ಗೆಲ್ಲಿಸುವ ಮೂಲಕ ತಿರಿಸಿಕೊಂಡಿದ್ದೇವೆ ಎಂದರು.

ರಿಪ್ಪನ್‌ಪೇಟೆಯ ಎಲ್ಲಾ ಏಳೂ ಬೂತ್ ಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಲೀಡ್ ದೊರಕಿದೆ ಈ ಗೆಲುವು ಬೇಳೂ ಗೆಲುವಲ್ಲ ಪ್ರತಿಯೊಬ್ಬ ಕಾರ್ಯಕರ್ತನ ಗೆಲುವು ಎಂದು ಹೇಳಿ ರಿಪ್ಪನ್‌ಪೇಟೆಯಲ್ಲಿನ ಹಲವು ಮೂಲಭೂತ ಸಮಸ್ಯೆಗಳಾದ ನಾಲ್ಕು ರಸ್ತೆಗಳನ್ನು ಡಬಲ್ ರಸ್ತೆ ಮಾಡುವ ಮೂಲಕ ಡಿವೈಡರ್ ಅಳವಡಿಕೆ ಮತ್ತು ಸುಸಜ್ಜಿತ ಸರ್ಕಾರಿ ಆಸ್ಪತ್ರೆ ಕಟ್ಟಡ ಹಾಗೂ ಬಸ್ ನಿಲ್ದಾಣದ ಬಗ್ಗೆ ಪ್ರಥಮ ಅಧ್ಯತೆ ನೀಡುವುದು ಮತ್ತು ಬೇಳೂರು ಗೋಪಾಲಕೃಷ್ಣರಿಗೆ ಮಂತ್ರಿ ಸ್ಥಾನ ಕಲ್ಪಿಸುವಂತೆ ಸಹ ಈ ಸಭೆಯಲ್ಲಿ ಕಾಂಗ್ರೆಸ್ ಮುಖಂಡರಿಗೆ ಮನವಿ ಮೂಲಕ ಆಗ್ರಹಿಸಿದರು.

ಇದೇ ಸಂಧರ್ಭದಲ್ಲಿ  ಕೆಪಿಸಿಸಿ ರಾಜ್ಯಾಧ್ಯಕ್ಷ  ಡಿ.ಕೆ.ಶಿವಕುಮಾರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು.

ಈ ಅಭಿನಂದನಾ ಕೃತಜ್ಞತಾ ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಮೀರ್ ಹಂಜಾ ,ಎಂ ಎಂ ಪರಮೆಶ್, ಡಿ.ಈ.ಮಧುಸೂಧನ್, ರವೀಂದ್ರಕೆರೆಹಳ್ಳಿ, ರಮೆಶ್ ಫ್ಯಾನ್ಸಿ, ಉಲ್ಲಾಸ ತೆಂಕೋಲ್, ಗಣಪತಿ ಗವಟೂರು,ಆರ್.ಎಸ್.ಶಂಶುದ್ದೀನ್, ಧನಲಕ್ಷಿö್ಮ, ಶ್ರೀಧರ, ಉಮೇಶ್,ನಾಗೇಂದ್ರ,ಮಂಜುನಾಥ ಮಳವಳ್ಳಿ,ನವೀನ್ ಕೆರೆಹಳ್ಳಿ, ಹಾಗೂ ಇನ್ನಿತರರಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…

1 day ago

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…

1 day ago

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…

1 day ago

ಹುಂಚ ಆಸ್ಪತ್ರೆಯ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ

ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…

1 day ago

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…

1 day ago

ಬೀದಿ ನಾಯಿಗಳ ದಾಳಿಗೆ ಆರು ಕುರಿ ಮರಿಗಳು ಸಾವು

ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…

2 days ago