ಹಾಲಪ್ಪನವರಿಗೆ ಬೆಂಬಲಿಸಿ ಪಕ್ಷ ದ್ರೋಹ ಮಾಡುವ ನೀಚ ವ್ಯಕ್ತಿತ್ವದ ವ್ಯಕ್ತಿ ನಾನಲ್ಲ – ಕಾಗೋಡು ತಿಮ್ಮಪ್ಪ|congress

ಹಾಲಪ್ಪನವರಿಗೆ ಬೆಂಬಲಿಸಿ ಪಕ್ಷ ದ್ರೋಹ ಮಾಡುವ ನೀಚ ವ್ಯಕ್ತಿತ್ವದ ವ್ಯಕ್ತಿ ನಾನಲ್ಲ – ಕಾಗೋಡು ತಿಮ್ಮಪ್ಪ

ರಿಪ್ಪನ್‌ಪೇಟೆ : ಕಾಗೋಡು ತಿಮ್ಮಪ್ಪನವರು ನನಗೆ ಅಶೀರ್ವಾದ ಮಾಡಿ ಬಾಹ್ಯ ಬೆಂಬಲ ನೀಡಿದ್ದಾರೆಂದು ಬಹಿರಂಗವಾಗಿ ಹೇಳಿಕೆ ನೀಡುತ್ತಿರುವ ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪನವರದು ಮೂರ್ಖತನದ ಪರಮಾವಧಿ  ಎಂದು ಹೇಳಿ ಅಂತಹ ಕೀಳು ಮಟ್ಟದ ವ್ಯಕ್ತಿತ್ವ  ನನ್ನದಲ್ಲ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ತೀವ್ರ ತರವಾಗಿ ಖಂಡಿಸಿದರು.




ಹೆದ್ದಾರಿಪುರದಲ್ಲಿ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾಧ್ಯಮದವರೊಂದಿ ಮಾತನಾಡಿ ಈ ಭಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜನಬೆಂಬಲ ವ್ಯಕ್ತಪಡಿಸುತ್ತಿದ್ದು ಬಿಜೆಪಿಯವರು ಸುಳ್ಳು ಅಪಪ್ರಚಾರದಲ್ಲಿ ತೊಡಗಿಕೊಂಡು ಮತದಾರರನ್ನು ದಿಕ್ಕು ತಪ್ಪಿಸುವ ಕೆಲಸದಲ್ಲಿ ನಿರತರಾಗಿದ್ದಾರೆಂದು ಆಕ್ರೋಶಪಡಿಸಿದರು.

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಬಜಗಂದ ದಳ ನಿಷೇದದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು ರಾಜ್ಯಾಂಗ ಬದ್ದವಾಗಿ ಕಾನೂನು ಕ್ರಮ ಕೈಗೊಳ್ಳಬೇಕೇ ಹೊರತು ಏಕಾಏಕಿ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಹೇಳಿ ಈ ಬಗ್ಗೆ ಪಕ್ಷ ತಿರ್ಮಾನಿಸಲಿದೆ ಎಂದರು.


ತಮ್ಮ ಮಗಳು ಬಿಜೆಪಿ ಸೇರ್ಪಡೆ ವಿಚಾರದಲ್ಲಿ ತಮ್ಮದೊಂದಿಗೆ ಚರ್ಚಿಸಿದ್ದಾರೆಂದು ಹೇಳುತ್ತಿದ್ದಾರೆಂದು ಕೇಳಲಾದ ಪ್ರಶ್ನೆಗೆ ಉತ್ತರಿಸಿ ನಾನು ಸಮಾಜವಾದಿ ಸಿದ್ದಾಂತದಿಂದ ಬೆಳದು ಬಂದತಂಹ ವ್ಯಕ್ತಿ ಈ ರೀತಿಯಲ್ಲಿ ನಾನು ಪಕ್ಷ ಸೇರುವುದಾಗಿ ಎಲ್ಲಿಯೂ ನನ್ನೊಂದಿಗೆ ಚರ್ಚಿಸಿಲ್ಲ ಮಕ್ಕಳು ಬೆಳದು ನಿಂತಮೇಲೆ ನಿರ್ಧಾರ ಅವರಿಗೆ ಬಿಟ್ಟವಿಚಾರವಾಗಿದೆ ಎಂದು ಹೇಳಿ ಈ ಭಾರಿ 100 ಕ್ಕೇ 100 ರಷ್ಟು ಕಾಂಗ್ರೇಸ್ ಪಕ್ಷದ ಅಧಿಕೃತ ಅಭ್ಯರ್ಥಿ ಗೋಪಾಲಕೃಷ್ಣರಿಗೆ ನನ್ನ ಸಂಪೂರ್ಣ ಬೆಂಬಲವಿರುತ್ತದೆಂದು ಹೇಳಿದರು.




ನನ್ನ ಅರೋಗ್ಯ ಸಮಸ್ಯೆಯಿಂದಾಗಿ ಬಿರುಸಾಗಿ ಪ್ರಚಾರ ಕೈಗೊಳ್ಳುತ್ತಿಲ್ಲ ಎಂದು ಹೇಳಿ ಮತದಾರರು ಈ ಭಾರಿ ನನ್ನ ಅಳಿಯ ಗೋಪಾಲಕೃಷ್ಣರಿಗೆ ಬೆಂಬಲಿಸಿ ಪ್ರಚಂಡ ಬಹುಮತದಿಂದ ಗೆಲ್ಲಿಸಿಕೊಂಡುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ನ್ಯಾಯವಾದಿ ಭೋಜಪ್ಪ,ಬಂಡಿ ರಾಮಚಂದ್ರ,ವಾಸಪ್ಪಗೌಡ,ಕಲ್ಲೂರು ತೇಜಮೂರ್ತಿ, ಎನ್.ಚಂದ್ರೇಶ್,ಗಣೇಶ್‌ರಾವ್ ಕೆರೆಹಳ್ಳಿ,ಇನ್ನಿತರರು ಹಾಜರಿದ್ದರು.













ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಮೂವರು ಆರೋಪಿಗಳು ಪೊಲೀಸರ ಬಲೆಗೆ

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a…

18 hours ago

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ Six people were arrested for…

18 hours ago

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ South Western Railway extends temporary stoppages…

20 hours ago

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ Tourist bus and fish transport goods vehicle…

20 hours ago

ಬೈಕ್ ಸವಾರನ ಮೇಲೆ ಮುಸಿಯ ದಾಳಿ; ಗಂಭೀರ ಗಾಯ

ಬೈಕ್ ಸವಾರನ ಮೇಲೆ ಮುಸಿಯ ದಾಳಿ; ಗಂಭೀರ ಗಾಯ A bike rider was seriously injured after a…

20 hours ago

ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ

ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…

1 day ago