ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪೊಲೀಸ್ ಸ್ಟೇಷನ್ ಒಂದರಲ್ಲಿ ಅಪ್ತಾಪ್ತೆಯೊಬ್ಬಳನ್ನ ಅಡ್ಡಗಟ್ಟಿ ಫೋನ್ ನಂಬರ್ ಕೇಳಿ ಕಿರುಕುಳ ನೀಡಿದ ಆರೋಪ ಸಂಬಂಧ ಕೇಸ್ ದಾಖಲಾಗಿದ್ದು ಇಬ್ಬರು ಆರೋಪಿಗಳನ್ನ ವಶಕ್ಕೆ ಪಡೆಯಲಾಗಿದೆ.
ಕೇರಳದಲ್ಲಿ ಓದುತ್ತಿರುವ ಅಪ್ರಾಪ್ತೆಯೊಬ್ಬರು ಹೊಸನಗರ ತಾಲ್ಲೂಕಿನ ಗ್ರಾಮವೊಂದರಲ್ಲಿರುವ ತಮ್ಮ ಅಜ್ಜಿ ಮನೆಗೆ ಬಂದಿದ್ದಾರೆ. ಕಳೆದ ಭಾನುವಾರ ಚರ್ಚ್ವೊಂದರಲ್ಲಿ ಪ್ರಾರ್ಥನೆ ಮುಗಿಸಿ ವಾಪಸ್ ಆಗುವಾಗ ಇಬ್ಬರು ಆಕೆಯನ್ನು ಎರಡು ಬಾರಿ ಅಡ್ಡಗಟ್ಟಿ ಮೊಬೈಲ್ ನಂಬರ್ ಕೇಳಿದ್ಧಾರೆ.
ಅಲ್ಲದೆ ಬೈಕ್ನಲ್ಲಿ ಬಂದ ಆರೋಪಿಗಳು ಬಾಲಕಿಯನ್ನು ಹಿಂಬಾಲಿಸಿ ಕಿರುಕುಳ ನೀಡಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ.
ಈ ಸಂಬಂಧ ತಾಲ್ಲೂಕಿನ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಇಬ್ಬರು ಆರೋಪಿಗಳನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್