AAP | ಭ್ರಷ್ಟಾಚಾರ ಮುಕ್ತ ಆಡಳಿತಕ್ಕೆ ಆಮ್ ಆದ್ಮಿ ಪಕ್ಷವನ್ನು ಬೆಂಬಲಿಸಿ – ಸಂಸ್ಥಾಪಕ ಸದಸ್ಯ ಶಹನವಾಜ್ ಹಿಂದೂಸ್ಥಾನಿ

ರಿಪ್ಪನ್‌ಪೇಟೆ : ದೆಹಲಿಯ ಅರವಿಂದ್ ಕೇಜ್ರಿವಾಲ್ ಸರ್ಕಾರ ನೀಡಿರುವ ಉನ್ನತಮಟ್ಟದ ಶಿಕ್ಷಣ ವ್ಯವಸ್ಥೆ,ಉಚಿತ ನೀರಿನ ವ್ಯವಸ್ಥೆ,ಉಚಿತ ವಿದ್ಯುತ್,ಆರೋಗ್ಯ ವ್ಯವಸ್ಥೆಯನ್ನು ಕರ್ನಾಟಕದ ಜನಸಾಮಾನ್ಯರು ಬಯಸುತಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಸಂಸ್ಥಾಪಕ ಸದಸ್ಯ ಹಾಗೂ ಸ್ಟಾರ್ ಕ್ಯಾಂಪೇನರ್ ಶಹನವಾಜ್ ಹಿಂದೂಸ್ಥಾನಿ ಹೇಳಿದರು.




ರಿಪ್ಪನ್‌ಪೇಟೆ ಪಟ್ಟಣದಲ್ಲಿ ಸಾಗರ ಕ್ಷೇತ್ರದ ಆಪ್ ಅಭ್ಯರ್ಥಿ ಕೆ ದಿವಾಕರ್ ಪರ ಮತಯಾಚನೆ ನಡೆಸಿ ಎಎಪಿ ಕಛೇರಿಯಲ್ಲಿ ಅಯೋಜಿಸಲಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಭಾರತದೇಶದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದ್ದು ಅದರಲ್ಲಿಯೂ ಕರ್ನಾಟಕದಲ್ಲಿ ಇನ್ನೂ ಹೆಚ್ಚಾಗಿದೆ ಎಂಬ ಬಗ್ಗೆ ಮಾಧ್ಯಮಗಳಲ್ಲಿ ಬರುತ್ತಿರುವ ವರದಿಗಳು ಹೇಳುತ್ತಿವೆ ಅದನ್ನು ತಡೆಯುವ ನಿಟ್ಟಿನಲ್ಲಿ ನಮ್ಮ ಎಎಪಿ ಪಕ್ಷಕ್ಕೆ ಒಂದು ಅವಕಾಶ ಮಾಡಿಕೊಡಿ ದೆಹಲಿಯಂತೆ ಕರ್ನಾಟಕದಲ್ಲಿ ಬದಲಾವಣೆ ಮಾಡಿ ಮತದಾರರ ಮನ ಗೆಲ್ಲುವುದಾಗಿ ಹೇಳಿದರು.


ಜನರ ತೆರಿಗೆ ಹಣವನ್ನು ಸದ್ಬಳಕೆ ಮಾಡುವ ಮೂಲಕ ಆಮ್ ಆದ್ಮಿ ಪಕ್ಷ ದೆಹಲಿ ಹಾಗೂ ಪಂಜಾಬ್ ನಲ್ಲಿ ಜನರಿಗೆ ಉಚಿತ ವಿದ್ಯುತ್ ,ನೀರು ಮತ್ತು ಶಿಕ್ಷಣ,ಔಷದಿ ನೀಡುತ್ತದೆ.ದೆಹಲಿಯ ಸರ್ಕಾರಿ ಶಾಲೆಗಳು ಹೈಟೆಕ್ ರೂಪದಲ್ಲಿದ್ದು ಇಲ್ಲಿ ಶಿಕ್ಷಣದ ಜೊತೆ ಸಂಸ್ಕಾರವನ್ನು ಕಲಿಸಲಾಗುತ್ತಿದೆ.

22222

ಕರ್ನಾಟಕದಲ್ಲಿ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದಲ್ಲಿ ಉಚಿತ ವಿದ್ಯುತ್, ನೀರು ಉತ್ತಮ ಆಸ್ಪತ್ರೆಯ ವ್ಯವಸ್ಥೆ ಹಾಗೂ ಉತ್ತಮ ಗುಣಮಟ್ಟದ ಶಿಕ್ಷಣಕ್ಕಾಗಿ ಸರ್ಕಾರಿ ಶಾಲೆಗಳನ್ನು ನಿರ್ಮಿಸಲಾಗುತ್ತದೆ.


ರಾಜ್ಯಕ್ಕೆ ಬೆಳಕು ನೀಡುವ ಉದ್ದೇಶದಿಂದ ಹೊಸನಗರ ಹಾಗೂ ಸಾಗರ ತಾಲೂಕಿನ ಜನತೆ ತಮ್ಮ ಸರ್ವಸ್ವವನ್ನೂ ಕಳೆದುಕೊಂಡಿದ್ದಾರೆ ಅವರಿಗೆ ಭೂಮಿಯ ಹಕ್ಕು ನೀಡುವಲ್ಲಿ ಎಲ್ಲಾ ಪಕ್ಷಗಳು ಎಡವಿದೆ ಎಂದರು.

ಈ ಭಾರಿಯ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಎಎಪಿ ಪಕ್ಷಕ್ಕೊಂದು ಅವಕಾಶ ಮಾಡಿಕೊಡುವಂತೆ ಮತದಾರ ಪ್ರಭುಗಳು ಮನಸ್ಸು ಮಾಡಿ ನಿಷ್ಟಾವಂತ ಮತ್ತು ಸಜ್ಜನ ವ್ಯಕ್ತಿತ್ವದ ಸಾಗರ-ಹೊಸನಗರ ಕ್ಷೇತ್ರದ ಎಎಪಿ ಅಭ್ಯರ್ಥಿ ಕೆ.ದಿವಾಕರ್ ಬೆಂಬಲಿಸಿ ಎಂದು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷರಾದ ಕಿರಣ್ , ಮುಖಂಡರಾದ ಸಂತೋಷ್ , ಹಸನಬ್ಬ ,ಹನೀಫ್, ರಾಜು ಚನ್ನಕೊಪ್ಪ,ಕುಕ್ಕಳಲೇ ಈಶ್ವರಪ್ಪ,ಕ್ರಾಂತಿ ಹಾಗೂ
ಇನ್ನಿತರ ಪಕ್ಷದ ಮುಖಂಡರು ಹಾಜರಿದ್ದರು.












ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

13 hours ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

13 hours ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

13 hours ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

18 hours ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

20 hours ago

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

2 days ago