BSNL ನೆಟ್‌ವರ್ಕ್ ಇಲ್ಲದೆ ಗ್ರಾಹಕರ ಪರದಾಟ – ರಿಪ್ಪನ್‌ಪೇಟೆ BSNL ಕಛೇರಿಯಲ್ಲಿ ಸಿಬ್ಬಂದಿಗಳೇ ಇಲ್ಲಾ…!!!!

ಹೊಸನಗರ : ಅತಿ ಹೆಚ್ಚು ಗ್ರಾಹಕರನ್ನು ಹೊಂದಿರುವ ಹೊಸನಗರ ತಾಲೂಕಿನಲ್ಲಿ ಬಿಎಸ್‌ಎನ್ಎಲ್ ಸಂಪರ್ಕ ವ್ಯವಸ್ಥೆ ಸಂಪೂರ್ಣ ಹಾಳಾಗಿದ್ದು, ಕಳೆದ 10 ದಿನಗಳಿಂದ ನೆಟ್‌ವರ್ಕ್ ಇಲ್ಲದೆ ಗ್ರಾಹಕರು ಪರದಾಡುವಂತಾಗಿದೆ. ಇಡೀ ಹೊಸನಗರ ತಾಲೂಕಿನಲ್ಲಿ ಬಿಎಸ್‌ಎನ್‌ಎಲ್ ಸಂಪರ್ಕ ವ್ಯವಸ್ಥೆ ಹದಗೆಟ್ಟಿರುವುದರಿಂದ ಗ್ರಾಹಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಈಗಾಗಲೇ ನೂರಾರು ರೂಪಾಯಿ ಕರೆನ್ಸಿ ಹಾಕಿಸಿಕೊಂಡಿರುವ ಗ್ರಾಹಕರಿಗೆ ತಮ್ಮ ದಿನನಿತ್ಯದ ವ್ಯವಹಾರ ಮಾಡಲು ಕಿರಿಕಿರಿ ಅನುಭವಿಸುತ್ತಿದ್ದಾರೆ.ಹಣ ಪಾವತಿ ವ್ಯವಸ್ಥೆ ಮೊಬೈಲ್‌ನಲ್ಲಿ ಬಂದ ಮೇಲಂತೂ ಸಾರ್ವಜನಿಕರು ಹಣವನ್ನು ಇಟ್ಟುಕೊಳ್ಳುವುದೇ ಕಡಿಮೇಯಾಗುತ್ತಿದೆ. ಇಂತಹ ಸಂದರ್ಭದಲ್ಲಿ ವ್ಯವಹಾರ ಮಾಡಲು ಕಷ್ಟವಾಗಿ ಜಗಳದಂತಹ ಘಟನೆಗಳು ಕೂಡ ಪ್ರತಿದಿನ ನಡೆಯುತ್ತಲೇ ಇವೆ. ಜೊತೆಗೆ ಮಕ್ಕಳು ಕೂಡ ತಮ್ಮ ವ್ಯಾಸಂಗವನ್ನು ಮೊಬೈಲ್‌ನಲ್ಲಿ ಕಲಿಯುವುದರಿಂದ ಆನ್‌ಲೈನ್ ಕ್ಲಾಸುಗಳಿಗೂ ತೊಂದರೆಯಾಗಿದೆ.ಅಷ್ಟೇ ಅಲ್ಲ, ಸರ್ಕಾರದ ದಾಖಲೆಗಳನ್ನು ಪಡೆಯಲು ಹೋದಾಗ ಸರ್ವರ್ ಇಲ್ಲ ಎಂಬ ಸಾಮಾನ್ಯ ಉತ್ತರ ಕಂಡುಬರುತ್ತಿದೆ.

ಹೊಸನಗರ ಭಾಗದಲ್ಲಿ ಮುಳುಗಡೆ ಸಂತ್ರಸ್ತರೇ ಹೆಚ್ಚು ಇರುವುದರಿಂದ ಮತ್ತು ಅವರೆಲ್ಲರೂ ಸಾಮಾನ್ಯವಾಗಿ ಬಿಎಸ್‌ಎನ್‌ಎಲ್ ಗ್ರಾಹಕರೇ ಆಗಿರುವುದರಿಂದ ಎಲ್ಲಾ ರೀತಿಯ ವ್ಯವಸ್ಥೆಗೆ ಕಷ್ಟಕರವಾಗಿದೆ. ಈ ಬಗ್ಗೆ ಅಧಿಕಾರಿಗಳನ್ನು ಕೇಳಿದರೆ ಹಾರಿಕೆಯ ಉತ್ತರ ಕೊಡುತ್ತಾರೆ. ಈಗಾಗಲೇ ಬಿಎಸ್‌ಎನ್‌ಎಲ್ ಸಂಸ್ಥೆ ಮುಚ್ಚುವ ಹಂತಕ್ಕೆ ಬಂದಿದ್ದು, ಕೇಂದ್ರ ಸರ್ಕಾರ ಕೂಡ ಈ ಬಗ್ಗೆ ನಿರ್ಲಕ್ಷ್ಯ ವಹಿಸಿದೆ. ಇದರೆ ಟೆಲಿಕಾಂ ಸಂಸ್ಥೆಗಳು 5ಜಿ’ ಸೇವೆ ಆರಂಭಿಸಿದ್ದರೂ ಕೂಡ ಬಿಎಸ್‌ಎನ್‌ಎಲ್ ಮಾತ್ರ ಇನ್ನೂ 4ಜಿ ಸೇವೆಯನ್ನೇ ಆರಂಭಿಸಿಲ್ಲ ಎಂದು ಗ್ರಾಹಕರು ದೂರುತ್ತಾರೆ.

ರಿಪ್ಪನ್‌ಪೇಟೆ BSNL ಕಛೇರಿಯಲ್ಲಿ ಸಿಬ್ಬಂದಿಗಳೇ ಇಲ್ಲಾ…
ಹೊಸನಗರ ತಾಲೂಕಿನ ಪ್ರಮುಖ ಪಟ್ಟಣವಾದ ರಿಪ್ಪನ್‌ಪೇಟೆಯಲ್ಲಿ BSNL ನೆಟ್ವರ್ಕ್ ಬಗ್ಗೆ ಏನಾದರೂ ಮಾಹಿತಿಗಾಗಿ ಅಥವಾ ಸಿಮ್ ಪಡೆಯಲು,ಬದಲಾಯಿಸಲು ಕಛೇರಿಗೆ ಹೋದರೆ ಸಿಬ್ಬಂದಿಗಳೇ ಇರುವುದಿಲ್ಲ.ಈ ಬಗ್ಗೆ ಶಿವಮೊಗ್ಗದ ಪ್ರಮುಖ ಕಛೇರಿಯಲ್ಲಿ ಪ್ರಶ್ನಿಸಿದರೆ ರಿಪ್ಪನ್‌ಪೇಟೆ ಕಛೇರಿಯಲ್ಲಿ ಪ್ರಸ್ತುತ ಯಾವುದೇ ಸಿಬ್ಬಂದಿಗಳಿಲ್ಲ ಎಂಬ ಉತ್ತರ ಬರುತ್ತದೆ.ಹಾಗಾದರೆ BSNL ಗ್ರಾಹಕರು ಸಿಮ್ ಬದಲಾಯಿಸಲು , ರೀಚಾರ್ಜ್ ಮಾಡಲು ಶಿವಮೊಗ್ಗದ ಕಛೇರಿಗೆ ಎಡತಾಕಬೇಕಿದೆ.

ಕೋಟ್ಯಂತರ ರೂ ವೆಚ್ಚ ಮಾಡಿ ಕಛೇರಿಗಳನ್ನು ನಿರ್ಮಿಸಿ ಒಬ್ಬ ಸಿಬ್ಬಂದಿಗಳನ್ನು ನೇಮಿಸಲು ಸಾಧ್ಯವಾಗದೇ ಇರುವುದನ್ನು ನೋಡಿದರೆ BSNL ಇಲಾಖೆಯಲ್ಲಿರುವ ಬಿಳಿಯಾನೆಯಂತಹ ಅಧಿಕಾರಿಗಳ ಮೇಲೆ ಖಾಸಗಿ ದೂರವಾಣಿ ಕಂಪನಿಗಳು ಯಾವ ರೀತಿಯ ಪ್ರಭಾವ ಬೀರಿರಬಹುದು ಎಂದು ಅಂದಾಜಿಸಬಹುದಾಗಿದೆ.

ಒಟ್ಟಾರೆಯಾಗಿ ಚುನಾವಣೆಗೆ ಮುಂಚೆ ಈ ಭಾಗದ ನೆಟ್‌ವರ್ಕ್ ಸಮಸ್ಯೆ ಬಗೆಹರಿಸುವುದಾಗಿ ಎಲ್ಲಾ ಪಕ್ಷದ ಅಭ್ಯರ್ಥಿಗಳು ತಿಳಿಸಿದ್ದರು. ಈಗ ಈ ಕ್ಷೇತ್ರದಿಂದ ಆಯ್ಕೆಯಾದ ಬೇಳೂರು ಗೋಪಾಲಕೃಷ್ಣ ಅವರು ಈ ಬಗ್ಗೆ ಸಮಸ್ಯೆಯನ್ನು ಬಗೆಹರಿಸುವುದಾಗಿ ತಿಳಿಸಿದ್ದಾರೆ. ಈ ಕೂಡಲೇ ಹೊಸನಗರ ಸೇರಿದಂತೆ ಸಾಗರ ಹಾಗೂ ಅನೇಕ ಸುತ್ತಮುತ್ತಲ ಗ್ರಾಮಗಳಲ್ಲಿ ನೆಟ್‌ವರ್ಕ್ ತೊಂದರೆಯನ್ನು ಬಗೆಹರಿಸಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

12 hours ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

12 hours ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

12 hours ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

17 hours ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

19 hours ago

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

1 day ago