ರಾಜ್ಯಾದ್ಯಂತ ಮೇ 10ರಂದು ವಿಧಾನಸಭಾ ಚುನಾವಣೆ ನಡೆಯಲಿದ್ದು ಮತದಾನಕ್ಕೆ ಅಗತ್ಯವಾದ ವಿದ್ಯುನ್ಮಾನ ಮತಯಂತ್ರ (ಇವಿಎಂ) ಸೇರಿ ವಿವಿಧ ವಸ್ತುಗಳ ಜತೆಗೆ ಸಿಬ್ಬಂದಿಯನ್ನು ಮತಗಟ್ಟೆಗಳಿಗೆ ನಿಯೋಜಿಸಲು ಸೋಮವಾರ ಆಯಾ ಕ್ಷೇತ್ರಗಳಲ್ಲಿ ಸೋಮವಾರ ಮಸ್ಟರಿಂಗ್ ಕಾರ್ಯ ನಡೆದಿದೆ.
ಈ ನಡುವೆ ಮದ್ಯ ಸೇವನೆ ಶಂಕೆ ಮೇರೆಗೆ ಇಬ್ಬರು ಸಿಬ್ಬಂದಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಿರುವುದು ಜಿಲ್ಲೆಯಲ್ಲಿ ನಡೆದಿದೆ.
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಮಸ್ಟರಿಂಗ್ ಕೇಂದ್ರಕ್ಕೆ ಆಗಮಿಸಿದ್ದ ಇಬ್ಬರು ಚುನಾವಣಾ ಸಿಬ್ಬಂದಿಯನ್ನು ವೈದ್ಯಕೀಯ ಪರೀಕ್ಷೆಗೆ ರವಾನೆ ಮಾಡಲಾಗಿದೆ.
ಒಬ್ಬರು ತೋಟಗಾರಿಕೆ ಇಲಾಖೆಯ ಸಿಬ್ಬಂದಿ,ಇನ್ನೂಬ್ಬರು ಶಿಕ್ಷಕರಾಗಿದ್ದಾರೆ ಎಂದು ತಿಳಿದು ಬಂದಿದ್ದು ಇಬ್ಬರು ಪಾನಮತ್ತರಾಗಿ ಕರ್ತವ್ಯಕ್ಕೆ ಹಾಜರಾಗಿದ್ದರೆ ಎಂಬ ಆರೋಪ ಕೇಳಿ ಬಂದಿದೆ.
ಸಿಬ್ಬಂದಿ ಮದ್ಯ ಸೇವನೆ ಮಾಡಿರುವ ಅನುಮಾನ ಬಂದ ಹಿನ್ನೆಲೆಯಲ್ಲಿ ಖಚಿತಪಡಿಸಿಕೊಳ್ಳಲು ಅವರನ್ನು ವೈದ್ಯಕೀಯ ತಪಾಸಣೆಗೆ ಕಳುಹಿಸಲಾಗಿದೆ.