Headlines

ಭೀಕರ ರಸ್ತೆ ಅಪಘಾತ – ಬಾಲಕಿ ಸ್ಥಳದಲ್ಲಿಯೇ ಸಾವು|Accident

ಶಿವಮೊಗ್ಗದ ಗ್ರಾಮಾಂತರ ವ್ಯಾಪ್ತಿಯ ಪಿಳ್ಳಂಗೆರೆ ಬಳಿಯಲ್ಲಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿ ಶಾಲಾ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ನಡೆದಿದೆ. ಹೊಳೆಹೊನ್ನೂರು ಕಡೆಯಿಂದ ಶಿವಮೊಗ್ಗಕ್ಕೆ ಬೈಕ್ ನಲ್ಲಿ ಬರುತ್ತಿದ್ದ ಬೈಕ್ ಗೆ ಶಿವಮೊಗ್ಗದಿಂದ ಹೊಳೆಹೊನ್ನೂರು ಕಡೆ ಹೋಗುತ್ತಿದ್ದ ಟಿಪ್ಪರ್ ಲಾರಿ ಮುಖಾಮುಖಿ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ಬೈಕ್ ನ ಹಿಂಬದಿಯಲ್ಲಿ ಕುಳಿತಿದ್ದ ಐಶ್ವರ್ಯ (15) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಬಾಲಕಿಯ ತಲೆಯ ಮೇಲೆ ಟಿಪ್ಪರ್ ಲಾರಿಯ ಚಕ್ರ ಹರಿದ ಪರಿಣಾಮ ಬಾಲಕಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ.ಬೈಕ್ ಚಲಾಯಿಸುತಿದ್ದ ಬಾಲಕಿಯ ತಂದೆಗೂ ಗಾಯಗಳಾಗಿದ್ದು…

Read More

ಮಕ್ಕಳಿಗೆ ಸಿಹಿ ನೀಡುವ ಮೂಲಕ ಮೇ 31ರಿಂದ ಶಾಲೆ ಆರಂಭ: ಸಚಿವ ಮಧು ಬಂಗಾರಪ್ಪ

ರಾಜ್ಯದ 2023-24 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲೆ ಮೇ 31 ರಿಂದ ಆರಂಭವಾಗಲಿದ್ದು, ಮಕ್ಕಳಿಗೆ ಸಿಹಿ ನೀಡುವ ಮೂಲಕ ಮೇ 31 ರಿಂದ ಆರಂಭವಾಗಲಿದೆ. ಈ ಬಗ್ಗೆ ಪ್ರಾಥಮಿಕ ಮತ್ತು ಫ್ರೌಢ ಶಿಕ್ಷಣ ಇಲಾಖೆ ನೂತನ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ. ಮಧು ಬಂಗಾರಪ್ಪ ಅವರು ಶಾಲಾ ಆರಂಭದ ಬಗ್ಗೆ ಫೇಸ್‌ ಬುಕ್‌ ನಲ್ಲಿ ಪೋಸ್ಟ್ ಹಾಕಿ, ಶುಭಾಶಯ ತಿಳಿಸಿದ್ದಾರೆ. ಶಾಲೆಯಲ್ಲಿ ಪೂರಕ ಸಿದ್ಧತೆಗಳು ಇಂದಿನಿಂದಲೇ ಆರಂಭಗೊಂಡಿವೆ. ಆರೋಗ್ಯಕರ ವಾತಾವರಣದಲ್ಲಿ ಖುಷಿಯ ಕಲಿಕೆ ನಿಮ್ಮದಾಗಲಿ….

Read More

ಶಿವಮೊಗ್ಗ ಬಿಜೆಪಿ ಶಾಸಕರ ಕಚೇರಿ ಉದ್ಘಾಟನೆ ವೇದಿಕೆಯಲ್ಲಿ ಕಾಣಿಸಿಕೊಂಡ ಸಿಎಂ ಸಿದ್ದರಾಮಯ್ಯ ಫೋಟೋ!!|BJP

ಶಿವಮೊಗ್ಗ ನಗರ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಶಾಸಕ ಚನ್ನಬಸಪ್ಪನವರ ನೂತನ ಕಚೇರಿ ಉದ್ಘಾಟನೆಯ ವೇದಿಕೆ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ, ಮಾಜಿ ಸಿಎಂಗಳಾದ ಬಿ ಎಸ್ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರ ಫೋಟೊದ ಸಾಲಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ಫೋಟೊ ರಾರಾಜಿಸಿದೆ. ಬಿಜೆಪಿಯ ಬಲಪಂಥಿಯ ಸಿದ್ದಾಂತವನ್ನು ವಿರೋಧಿಸುತ್ತಾ ಬಂದಿರುವ ಸಿದ್ದರಾಮಯ್ಯನವರು ಬಿಜೆಪಿಯ ಶಾಸಕರ ಕಚೇರಿ ಉದ್ಘಾಟನೆಯ ವೇದಿಕೆ ಕಾರ್ಯಕ್ರಮದಲ್ಲಿ ರಾರಾಜಿಸಿದ್ದು ವಿಶೇಷ ಜೊತೆಗೆ ಕುತೂಹಲಕ್ಕೂ ಕಾರಣವಾಗಿದೆ. ಶಾಸಕರಾಗುವ ಮುನ್ನ ಸಿದ್ದರಾಮಯ್ಯನವರ ವಿರುದ್ಧ ಹಲವು ಬಾರಿ ಹರಿಹಾಯ್ದಿದ್ದ ಚನ್ನಬಸಪ್ಪನವರು,…

Read More

ಸಚಿವರ ಪ್ರಮಾಣವಚನ ಬೆನ್ನಲ್ಲೇ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ..??? ಇಲ್ಲಿದೆ ಸಂಪೂರ್ಣ ಮಾಹಿತಿ|Cabinet

ಕರ್ನಾಟಕ ರಾಜ್ಯ ಸರ್ಕಾರದ 24 ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜಭವನದ ಗಾಜಿನಮನೆಯಲ್ಲಿ ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್​, ಸ್ಪೀಕರ್​ ಯು ಟಿ ಖಾದರ್​ ಅವರ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಚಿವರಿಗೆ ಈ ರೀತಿಯಾಗಿ ಖಾತೆ ಹಂಚಿಕೆ ಮಾಡಲಾಗಿದೆ ಎನ್ನಲಾಗುತಿದ್ದು ಆ ಪಟ್ಟಿ ಇಲ್ಲಿದೆ. ಯಾರಿಗೆ ಯಾವ್ಯಾವ ಜವಾಬ್ದಾರಿ..? ಸಿದ್ದರಾಮಯ್ಯ -ಹಣಕಾಸು, DPAR ಮತ್ತು ಗುಪ್ತಚರ ಇಲಾಖೆ ಡಿ.ಕೆ.ಶಿವಕುಮಾರ್ -ಬೆಂಗಳೂರು ನಗರಾಭಿವೃದ್ಧಿ, ಜಲಸಂಪನ್ಮೂಲ ಡಾ.ಜಿ.ಪರಮೇಶ್ವರ್ -ಗೃಹ ಸಚಿವ…

Read More

ಶಿವಮೊಗ್ಗ ಮೂಲದ ಮಹಿಳೆ ನಾಪತ್ತೆ|missing

ಶಿವಮೊಗ್ಗ ಮೂಲದ ಕೆ.ಶುಭಾ ಎಂಬವರು ಉಡುಪಿಯಿಂದ ಬೆಂಗಳೂರಿಗೆ ಹೋಗುತ್ತೇನೆ ಎಂದು ಹೇಳಿ ಹೋದವರು ನಾಪತ್ತೆಯಾಗಿದ್ದಾರೆ.   ಈಕೆ ಬಹರೈನ್‌ನಲ್ಲಿ ಕೆಲಸ ಮಾಡಿಕೊಂಡಿದ್ದರು. ಅಲ್ಲಿಂದ ತಮ್ಮ ಗಂಡನ ಮನೆ ಇರುವ ಉಡುಪಿ ಜಿಲ್ಲೆಯ ಗೋಪಾಲಪುರಕ್ಕೆ ಬಂದಿದ್ದರು. ಆನಂತರ ಬೆಂಗಳೂರಿಗೆ ಹೋಗುವುದಾಗಿ ಹೇಳಿ ಹೋಗಿದ್ದಾರೆ ಆ ಬಳಿಕ ನಾಪತ್ತೆಯಾಗಿದ್ದಾರೆ.  ಇವರ ಗುರುತು 5 ಅಡಿ ಎತ್ತರ, ಸಪೂರ ಶರೀರ, ಎಣ್ಣೆಗಪ್ಪು ಮೈಬಣ್ಣ, ಕೋಲು ಮುಖ ಹೊಂದಿದ್ದು ಕನ್ನಡ, ಮರಾಠಿ, ಇಂಗ್ಲಿಷ್ ಹಾಗೂ ಹಿಂದಿ ಭಾಷೆ ಮಾತ ನಾಡುತ್ತಾರೆ.  ಇವರ ಬಗ್ಗೆ ಮಾಹಿತಿ…

Read More

ಹೊಸನಗರ : ಉರುಳಿಗೆ ಸಿಲುಕಿ ಚಿರತೆ ಸಾವು..!|leopard

ಹೊಸನಗರ : ಉರುಳಿಗೆ ಸಿಲುಕಿ ಚಿರತೆ ಸಾವು ! ಹೊಸನಗರ: ತಾಲೂಕಿನಲ್ಲಿ ನಗರ ಹೋಬಳಿ ವ್ಯಾಪ್ತಿಯ ಅಂಡಗದೋದೂರು ಗ್ರಾಮದ ಸರ್ವೆ ನಂಬರ್ 64 ರಲ್ಲಿ 4-5 ವರ್ಷ ಪ್ರಾಯದ ಗಂಡು ಚಿರತೆ ಕಾಡು ಪ್ರಾಣಿಗಳ ಬೇಟೆಗೆ ಹಾಕಿದ್ದ ಉರುಳಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಸಾರ್ವಜನಿಕರು ನೀಡಿದ ಮಾಹಿತಿ ಮೇರೆಗೆ ಸ್ಥಳಕ್ಕೆ ಶುಕ್ರವಾರ ನಗರ ವಲಯ ಅರಣ್ಯ ಅಧಿಕಾರಿ ಸಂಜಯ್ ಭೇಟಿ ನೀಡಿ ಪರಿಶೀಲನೆ ನಡೆಸಿ, ಜಿಲ್ಲಾ ವನ್ಯಜೀವಿ ಸಂರಕ್ಷಣ ವಿಭಾಗದ ವೈದ್ಯರನ್ನು ಸ್ಥಳಕ್ಕೆ ಕರೆಸಿ ಮೃತ…

Read More

BSNL ನೆಟ್‌ವರ್ಕ್ ಇಲ್ಲದೆ ಗ್ರಾಹಕರ ಪರದಾಟ – ರಿಪ್ಪನ್‌ಪೇಟೆ BSNL ಕಛೇರಿಯಲ್ಲಿ ಸಿಬ್ಬಂದಿಗಳೇ ಇಲ್ಲಾ…!!!!

ಹೊಸನಗರ : ಅತಿ ಹೆಚ್ಚು ಗ್ರಾಹಕರನ್ನು ಹೊಂದಿರುವ ಹೊಸನಗರ ತಾಲೂಕಿನಲ್ಲಿ ಬಿಎಸ್‌ಎನ್ಎಲ್ ಸಂಪರ್ಕ ವ್ಯವಸ್ಥೆ ಸಂಪೂರ್ಣ ಹಾಳಾಗಿದ್ದು, ಕಳೆದ 10 ದಿನಗಳಿಂದ ನೆಟ್‌ವರ್ಕ್ ಇಲ್ಲದೆ ಗ್ರಾಹಕರು ಪರದಾಡುವಂತಾಗಿದೆ. ಇಡೀ ಹೊಸನಗರ ತಾಲೂಕಿನಲ್ಲಿ ಬಿಎಸ್‌ಎನ್‌ಎಲ್ ಸಂಪರ್ಕ ವ್ಯವಸ್ಥೆ ಹದಗೆಟ್ಟಿರುವುದರಿಂದ ಗ್ರಾಹಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈಗಾಗಲೇ ನೂರಾರು ರೂಪಾಯಿ ಕರೆನ್ಸಿ ಹಾಕಿಸಿಕೊಂಡಿರುವ ಗ್ರಾಹಕರಿಗೆ ತಮ್ಮ ದಿನನಿತ್ಯದ ವ್ಯವಹಾರ ಮಾಡಲು ಕಿರಿಕಿರಿ ಅನುಭವಿಸುತ್ತಿದ್ದಾರೆ.ಹಣ ಪಾವತಿ ವ್ಯವಸ್ಥೆ ಮೊಬೈಲ್‌ನಲ್ಲಿ ಬಂದ ಮೇಲಂತೂ ಸಾರ್ವಜನಿಕರು ಹಣವನ್ನು ಇಟ್ಟುಕೊಳ್ಳುವುದೇ ಕಡಿಮೇಯಾಗುತ್ತಿದೆ. ಇಂತಹ ಸಂದರ್ಭದಲ್ಲಿ ವ್ಯವಹಾರ…

Read More

ತಮ್ಮಡಿಕೊಪ್ಪ ನಾಗ ಕ್ಷೇತ್ರದಲ್ಲಿ ಆಶ್ಲೇಷ ಬಲಿ ಪೂಜೆ – ಪಿಯುಸಿಯಲ್ಲಿ ರಾಜ್ಯಕ್ಕೆ ಎರಡನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿಗೆ ಸನ್ಮಾನ|Puc

ರಿಪ್ಪನ್ ಪೇಟೆ : ಇಲ್ಲಿಗೆ ಸಮೀಪದ ಅರಸಾಳು  ಗ್ರಾಮ ಪಂಚಾಯತಿ ವ್ಯಾಪ್ತಿಯ ತಮಡಿಕೊಪ್ಪ ಗ್ರಾಮದ ಶ್ರೀ ಗುರು ಕರಿಬಸವೇಶ್ವರ, ಬಾಲಸುಬ್ರಹ್ಮಣ್ಯ ಸ್ವಾಮಿ, ನಾಗದೇವತೆ ಮತ್ತು ನಾಗ ಕ್ಷೇತ್ರ ದೇವಸ್ಥಾನದಲ್ಲಿ ವಿಶೇಷ ಆಶ್ಲೇಷ ಬಲಿ ಪೂಜೆ ಸಂಪನ್ನಗೊಂಡಿತು.  ತೀರ್ಥಹಳ್ಳಿ ತಾಲ್ಲೂಕು  ಮಲ್ಲೇಸರ ಗ್ರಾಮದ ನಾಗರಾಜ ಮತ್ತು ಅನುಸೂಯ ದಂಪತಿಗಳ ಪುತ್ರಿಯಾದ ಕುಮಾರಿ ಅನ್ವಿತಾ ಇವರು ಇತ್ತೀಚೆಗೆ ನೆಡೆದ ದ್ವಿತೀಯ ಪಿ ಯು ಸಿ ಪರೀಕ್ಷೆ ಯಲ್ಲಿ ಕಾಮರ್ಸ್ ವಿಭಾಗ ದಲ್ಲಿ ರಾಜ್ಯಕ್ಕೆ  ದ್ವಿತೀಯ ಸ್ಥಾನ ಪಡೆದು ಶಿವಮೊಗ್ಗ ಜಿಲ್ಲೆಗೆ…

Read More

ಖಾಸಗಿ ವೀಡಿಯೋ ಚಿತ್ರಿಸಿ ಮಹಿಳೆಗೆ ಬ್ಲ್ಯಾಕ್ ಮೇಲ್ – ಪ್ರಕರಣ ದಾಖಲು|cybercrime

ಶಿವಮೊಗ್ಗ : ಮಹಿಳೆಯೊಬ್ಬಳ ಅಶ್ಲೀಲ ವಿಡಿಯೋ ಮತ್ತು ಚಿತ್ರಗಳನ್ನು ಮೊಬೈಲ್ ನಲ್ಲಿ ಚಿತ್ರಿಸಿ ತನ್ನ ಬಳಿ ಬರುವಂತೆ ಬ್ಲ್ಯಾಕ್ ಮೇಲ್ ಮಾಡಿ, ಮಹಿಳೆಯ ಸಂಬಂಧಿಕರಿಗೆ ಆ ಖಾಸಗಿ ಫೋಟೊ, ವಿಡಿಯೋಗಳನ್ನು ಶೇರ್ ಮಾಡಿದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ವ್ಯಕ್ತಿಯು ಮಹಿಳೆಯೊಂದಿಗೆ ಸಲುಗೆಯಿಂದ ವರ್ತಿಸಿದ್ದು, ಬೆಂಗಳೂರಿನಲ್ಲಿದ್ದಾಗ ಮಹಿಳೆಯ ಖಾಸಗಿ ಫೋಟೊ ಮತ್ತು ವಿಡಿಯೋಗಳನ್ನು ಚಿತ್ರೀಕರಿಸಿದ್ದ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಮಹಿಳೆಯು ಶಿವಮೊಗ್ಗದಲ್ಲಿ ವಾಸವಿದ್ದು ಆಕೆಗೆ ಕರೆ ಮಾಡಿ ತನ್ನೊಂದಿಗೆ ಬಂದಿರುವಂತೆ ಒತ್ತಡ ಹೇರುತ್ತಿದ್ದ. ಇಲ್ಲದ್ದಿದ್ದರೆ ಸಂಬಂಧಿಕರಿಗೆ ಖಾಸಗಿ…

Read More

ಪ್ರಯಾಣಿಕರಿದ್ದ ಬೋಗಿಗಳನ್ನು ಬಿಟ್ಟು ಮುಂದಕ್ಕೆ ಚಲಿಸಿದ ತಾಳಗುಪ್ಪ-ಬೆಂಗಳೂರು ರೈಲು|Train

ಶಿವಮೊಗ್ಗ ತಾಳಗುಪ್ಪ-ಬೆಂಗಳೂರು ರೈಲಿನ ಇಂಜಿನ್​ ಇವತ್ತು ಭದ್ರಾವತಿ ಸಮೀಪ  ಬೋಗಿಗಳಿಂದ ಕಳಚಿಕೊಂಡು ಮುಂದಕ್ಕೆ ಹೋಗಿತ್ತು. ಭದ್ರಾವತಿ ತಾಲೂಕು ಕಡದಕಟ್ಟೆ ರೈಲ್ವೆ ಲೆವೆಲ್ ಕ್ರಾಸಿಂಗ್ ಸಮೀಪದ ಬಿಳಕಿ ಪ್ರದೇಶದಲ್ಲಿ ಈ ಘಟನೆ ಇಂದು ಬೆಳಗ್ಗೆ ಸಂಭವಿಸಿದೆ.  ತಾಳಗುಪ್ಪ – ಬೆಂಗಳೂರು ಇಂಟರ್ ಸಿಟಿ ಎಕ್ಸ್’ಪ್ರೆಸ್ ರೈಲು, (20652 – Talguppa Bangalore Intercity Sf Express) ನ ಇಂಜಿನ್ – ಬೋಗಿಗಳ ನಡುವೆ ಸಂಪರ್ಕ ಕಳೆದುಕೊಂಡಿದ್ದರಿಂದ ಘಟನೆ ಸಂಭವಿಸಿದೆ.  ಘಟನೆಯಿಂದ ಕೆಲ ಸಮಯ ಪ್ರಯಾಣಿಕರು ಗೊಂದಲಕ್ಕೊಳಗಾಗಿದ್ದರು. ತಾಳಗುಪ್ಪದಿಂದ ಶಿವಮೊಗ್ಗ…

Read More