ವಿಧಾನಸಭಾ ಚುನಾವಣೆ ಫಲಿತಾಂಶ ಹಿನ್ನಲೆ ಇಂದು ಸಂಜೆ 6 ರಿಂದ ಜಿಲ್ಲಾದ್ಯಂತ 144 ಸೆಕ್ಷನ್ ಜಾರಿ – ವಿಜಯೋತ್ಸವ,ಪಟಾಕಿ ಸಿಡಿಸಲು,ಬೈಕ್ ರ್‍ಯಾಲಿಗೆ ಇಲ್ಲ ಅವಕಾಶ
ನಾಳೆ ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯಲ್ಲಿ ಇಂದು ಸಂಜೆ 6 ಗಂಟೆಯಿಂದ 144 ಸೆಕ್ಷನ್ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ. ಮೇ 12ರ ಸಂಜೆ 6 ರಿಂದ ಮೇ14 ರ ರಾತ್ರಿ 10 ರವರೆಗೆ ಈ ಆದೇಶ ಜಾರಿಯಲ್ಲಿರಲಿದೆ. ವಿಜಯೋತ್ಸವ ಸಾರ್ವಜನಿಕವಾಗಿ ಐದಕ್ಕಿಂತ ಹೆಚ್ಚು ಮಂದಿ ಗುಂಪು ಸೇರುವುದು, ಸಾರ್ವಜನಿಕವಾಗಿ ಚೂರಿ ಇನ್ನಿತರ ಆಯುಧಗಳನ್ನು ತೆಗೆದುಕೊಂಡು ಹೋಗುವುದು, ಸಾರ್ವಜನಿಕ ಸಮಾರಂಭ ಪ್ರತಿಭಟನೆ ನಡೆಸುವುದು ಎಲ್ಲವನ್ನು ನಾಳೆ ಶಿವಮೊಗ್ಗ ಜಿಲ್ಲೆಯಾದ್ಯಂತ ಸಂಪೂರ್ಣ…