ಕುಟುಂಬದವರೊಂದಿಗೆ ಆಗಮಿಸಿ ಮತ ಚಲಾಯಿಸಿದ ಬೇಳೂರು ಗೋಪಾಲಕೃಷ್ಣ|election
ಸಾಗರ : ಸಾಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ ರವರು ಬೇಳೂರು ಸರ್ಕಾರಿ ಶಾಲೆಗೆ ಆಗಮಿಸಿ ಕುಟುಂಬದ ಜೊತೆ ಬಂದು ಮತ ಚಲಾಯಿಸಿದರು. ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸುತ್ತಿರುವ ಶಾಸಕ ಬೇಳೂರು ಗೋಪಾಲಕೃಷ್ಣ ಇಂದು ತಮ್ಮ ಪತ್ನಿ ರಂಜಿತರಾಧ ಮತ್ತು ಕುಟುಂಬದ ಸದಸ್ಯರೊಂದಿಗೆ ಬೇಳೂರು ಸರ್ಕಾರಿ ಶಾಲೆಯ ಮತ ಗಟ್ಟೆಗೆ ಆಗಮಿಸಿ, ಮತದಾನ ಮಾಡಿದರು. ಈ ಸಂಧರ್ಭದಲ್ಲಿ ಮಾತನಾಡಿ ಪ್ರತಿಯೊಬ್ಬರು ಕೂಡ ತಪ್ಪದೆ ಮತ ಚಲಾಯಿಸಿ ಎಂದು ಮನವಿ ಮಾಡಿದರು.