ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದಲ್ಲಿ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಮೃತಪಟ್ಟಿದ್ದಾರೆ.
ಶಿವಕುಮಾರ್ (56) ಮೃತ ದುರ್ದೈವಿ. ಪೊಲೀಸರು ಹಿಟ್ ಅಂಡ್ ರನ್ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ಶಿವಕುಮಾರ್ ಅವರು ಆನಂದಪುರದಿಂದ ಹೊರಟು ಯಡೆಹಳ್ಳಿಯ ಪೆಟ್ರೋಲ್ ಬಂಕ್ನಿಂದ ಸ್ವಲ್ಪವೇ ದೂರದಲ್ಲಿದ್ದ ತಮ್ಮ ಮನೆಗೆ ತೆರಳುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಕೆಳಗೆ ಬಿದ್ದ ಶಿವಕುಮಾರ್ ಗಂಭೀರ ಗಾಯಗೊಂಡಿದ್ದರು.
ಸ್ಥಳೀಯರು ಗಾಯಗೊಂಡಿದ್ದ ಶಿವಕುಮಾರ್ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಘಟನೆ ನಡೆದ ಬಳಿಕ ಕಾರು ಚಾಲಕ ಸ್ಥಳದಿಂದ ಪರಾರಿ ಆಗಿದ್ದು, ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.