ಅಪ್ರಾಪ್ತನಿಗೆ ಬೈಕ್ ಕೊಟ್ಟ ತಪ್ಪಿಗೆ ಬೈಕ್ ಮಾಲೀಕನಿಗೆ 20 ಸಾವಿರ ರೂ. ದಂಡ
ತೀರ್ಥಹಳ್ಳಿ : ಹೆಲ್ಮೆಟ್ ಧರಿಸದೆ, ಡ್ರೈವಿಂಗ್ ಲೈಸೆನ್ಸ್ ಇಲ್ಲದೆ ಬೈಕ್ ಸವಾರಿ ಮಾಡುತ್ತಿದ್ದ ಅಪ್ರಾಪ್ತ ಯುವಕನ ಪ್ರಕರಣದಲ್ಲಿ ನ್ಯಾಯಾಲಯ ಬೈಕ್ ಮಾಲೀಕನಿಗೆ 20 ಸಾವಿರ ರೂ. ದಂಡ ವಿಧಿಸಿದೆ.
17 ವರ್ಷದ ಯುವಕ ಹೆಲ್ಮೆಟ್ ಧರಿಸದೆ, ಲೈಸೆನ್ಸ್ ಇಲ್ಲದೆ ಬೈಕ್ ಚಲಾಯಿಸುತ್ತಿದ್ದ.
ತೀರ್ಥಹಳ್ಳಿ ಪೊಲೀಸರು ಸೋಮವಾರ ತಪಾಸಣೆ ಮಾಡುವಾಗ ಯುವಕ ಸಿಕ್ಕಿಬಿದ್ದಿದ್ದಾನೆ. ಕೊನೆಗೆ ಸಂಚಾರ ನಿಯಮ ಉಲ್ಲಂಘನೆ, ಅಪ್ರಾಪ್ತ ಯುವಕನಿಗೆ ಬೈಕ್ ನೀಡಿದ ತಪ್ಪಿಗೆ ಮಾಲೀಕ ಕಳ್ಳಿಗದ್ದೆ ಗ್ರಾಮದ ಪ್ರಮೋದ್ (25) ಎಂಬಾತನ ಮೇಲೆ ದೋಷಾರೋಪಣ ಪಟ್ಟಿ ಸಲ್ಲಿಸಲಾಗಿತ್ತು.
ತೀರ್ಥಹಳ್ಳಿಯ ಜೆಎಂಎಫ್‌ಸಿ ನ್ಯಾಯಾಲಯ ಬೈಕ್ ಮಾಲೀಕ ಪ್ರಮೋದ್‌ಗೆ 20 ಸಾವಿರ ರೂ. ದಂಡ ವಿಧಿಸಿದೆ.


