ಕೋಣಂದೂರು ಬಳಿ ಬಸ್ ಬೈಕ್ ಅಪಘಾತ!!!! ಓರ್ವನಿಗೆ ಗಂಭೀರ ಗಾಯ
 ತೀರ್ಥಹಳ್ಳಿ ತಾಲೂಕಿನ ಕೋಣಂದೂರು ಸಮೀಪದ ಸುರಾನಿ ಬಳಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಬೈಕ್ ಸವಾರನಿಗೆ ಗಂಭೀರ ಗಾಯವಾಗಿದೆ.
 ಕೋಣಂದೂರಿನಿಂದ ತೀರ್ಥಹಳ್ಳಿ ಕಡೆಗೆ ಬರುತ್ತಿದ್ದ ರಾಜಲಕ್ಷ್ಮಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಬೈಕ್ ಸವಾರನಿಗೆ ಗಂಭೀರ ಗಾಯವಾಗಿದೆ.
 ಗಾಯಾಳುವಿಗೆ  ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿ ಹೆಚ್ಚಿನ ಚಿಕಿತ್ಸೆಗೆ ತೀರ್ಥಹಳ್ಳಿಯ ಜಯಚಾಮರಾಜೇಂದ್ರ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ.
 ಬೈಕ್ ಸವಾರನ ಬಗ್ಗೆ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ
  


