ಶಿವಮೊಗ್ಗ: ಕಾಲೇಜು ಕಾರ್ಯಕ್ರಮದ ಸಿದ್ಧತೆ ಪೂರ್ಣಗೊಳಿಸಿ ಮನೆಕಡೆ ಹೊರಟಿದ್ದ ವಿದ್ಯಾರ್ಥಿಯೊಬ್ಬ ಬೈಕ್ ಅಪಘಾತಕ್ಕೀಡಾಗಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ 60 ಅಡಿ ರಸ್ತೆಯಲ್ಲಿ ಸಂಭವಿಸಿದೆ.
ಮೃತ ವಿದ್ಯಾರ್ಥಿ ಗೌತಮ್ (21) ಎಂದು ಗುರುತಿಸಲಾಗಿದೆ.
ಬೆಳಗಿನ ಜಾವ 4 ಗಂಟೆ ಹೊತ್ತಿಗೆ ಈ ಘಟನೆ ಸಂಭವಿಸಿದೆ. ಕಾಲೇಜಿನ ಕಾರ್ಯಕ್ರಮದ ಸಿದ್ಧತೆ ಪೂರ್ಣಗೊಳಿಸಿ ಕಾಶಿಪುರದಲ್ಲಿರುವ ಮನೆಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ.
ನಡೆದಿದ್ದೇನು???
ಇವತ್ತು ಬೆಳಗ್ಗಿನ ಜಾವ ನಾಲ್ಕು ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ. ನಗರದ ಶುಭಮಂಗಳದ ಬಳಿಯಲ್ಲಿ ಗೌತಮ್ ತಮ್ಮ ಮನೆಗೆ ಹೋಗುತ್ತಿದ್ದ. ಈ ವೇಳೆ ಚಾಲುಕ್ಯ ಬಾರ್ ಸಮೀಪದ ಪುಟ್ಪಾತ್ ನಲ್ಲಿ, ಆತನ ಬೈಕ್ ಸ್ಕಿಡ್ ಆಗಿದೆ. ಪರಿಣಾಮ ಕೆಳಕ್ಕೆ ಬಿದ್ದ ಗೌತಮ್ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ್ಧಾನೆ..
ಮೃತ ಗೌತಮ್ ಶಿವಮೊಗ್ಗದ ನ್ಯಾಯಾದೀಶರೊಬ್ಬರ ಮಗ ಎಂಬುದು ತಿಳಿದುಬಂದಿದ್ದು, ಕಾಶೀಪುರದಲ್ಲಿ ಅವರ ನಿವಾಸವಿದ್ದು, ಮನೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಘಟನೆ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ತೆರಳಿದ್ದು ಮೃತದೇಹವನ್ನು ಶವಾಗಾರಕ್ಕೆ ಶಿಫ್ಟ್ ಮಾಡಲಾಗಿದೆ. ಇನ್ನೂ ವಿದ್ಯಾರ್ಥಿಯ ಸಾವಿಗೆ ಹಲವರು ಕಂಬನಿ ಮಿಡಿದಿದ್ದು, ಶವಾಗಾರದ ಬಳಿಯಲ್ಲಿ ಕುಟುಂಬಸ್ಥರ ಆಕ್ರಂಧನ ಮುಗಿಲುಮುಟ್ಟಿದೆ. 
 
                         
                         
                         
                         
                         
                         
                         
                         
                         
                        

