POSTMAN NEWS

ನೈಜ ಸುದ್ದಿ ನೇರ ಬಿತ್ತರ..

ರಿಪ್ಪನ್‌ಪೇಟೆ – ಅಕ್ರಮ ಮರಳು ಸಾಗಿಸುತಿದ್ದ ಎರಡು ಟಿಪ್ಪರ್ ಲಾರಿ ವಶಕ್ಕೆ|illegal mining

ರಿಪ್ಪನ್‌ಪೇಟೆ : ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಅಕ್ರಮ ಮರಳು ಸಾಗಿಸುತಿದ್ದ ಎರಡು ಟಿಪ್ಪರ್ ಲಾರಿಯನ್ನು ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ

ಖಚಿತ ಮಾಹಿತಿ ದೊರೆತ ಹಿನ್ನಲೆಯಲ್ಲಿ ಬುಧವಾರ ಬೆಳಿಗ್ಗೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಅಕ್ರಮ ಮರಳು ಸಾಗಿಸುತಿದ್ದ ಒಂದು ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ.

ಅರಸಾಳು ಗ್ರಾಮದ ಬಳಿ ಅಕ್ರಮವಾಗಿ ಮರಳು ಸಾಗಿಸುತಿದ್ದ ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ.

ಇಂದು ಬೆಳಿಗ್ಗೆ ಹೊಸನಗರ – ಶಿವಮೊಗ್ಗ ರಸ್ತೆಯಲ್ಲಿ ಗಸ್ತು ತಿರುಗುತಿದ್ದಾಗ ಅದೇ ಸಂಸ್ಥೆಯ ಮತ್ತೊಂದು ಲಾರಿ ಅಕ್ರಮವಾಗಿ ಮರಳು ಸಾಗಿಸುತಿದ್ದು ಅದನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು KA 14 B 6972 ಮತ್ತು KA 70 3695 ನೋಂದಣಿ ಸಂಖ್ಯೆಯ ಎರಡು ಟಿಪ್ಪರ್ ವಾಹನಗಳನ್ನು ವಶಪಡಿಸಿಕೊಂಡು ರಿಪ್ಪನ್‌ಪೇಟೆ ಪೊಲೀಸ್  ಠಾಣೆಗೆ ಹಸ್ತಾಂತರಿಸಿದ್ದಾರೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.