POSTMAN NEWS

ನೈಜ ಸುದ್ದಿ ನೇರ ಬಿತ್ತರ..

ಹೊಸನಗರ ಮತ್ತು ತೀರ್ಥಹಳ್ಳಿ ವ್ಯಾಪ್ತಿಯಲ್ಲಿ ಅಕ್ರಮ ಮರಳು ಧಂಧೆಕೋರರಿಗೆ ಬಿಸಿ ಮುಟ್ಟಿಸಿದ ಪೊಲೀಸ್ – 14 ವಾಹನ ವಶಕ್ಕೆ

ಹೊಸನಗರ ಹಾಗೂ ತೀರ್ಥಹಳ್ಳಿ ತಾಲ್ಲೂಕಿನ ಪೊಲೀಸ್ ಠಾಣೆ ವ್ಯಾಪ್ತಿಯ 14 ಕಡೆಗಳಲ್ಲಿ ದಾಳಿ ಅಕ್ರಮ ಮರಳು ಸಾಗಾಟ ಮತ್ತು ಸಂಗ್ರಹಣೆ ಸ್ಥಳಗಳ ಮೇಲೆ ದಾಳಿ ನಡೆಸಿದ್ದು 14 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

ಎಸ್.ಪಿ. ಜಿ.ಕೆ.ಮಿಥುನ್ ಕುಮಾರ್, ಹೆಚ್ಚುವರಿ ಎಸ್.ಪಿ. ಅನಿಲ್ ಕುಮಾರ್ ಭೂಮರಡ್ಡಿ, ತೀರ್ಥಹಳ್ಳಿ ಡಿವೈಎಸ್.ಪಿ ಗಜಾನನ ವಾಮನ ಸುತರ ಮೇಲ್ವಿಚಾರಣೆಯಲ್ಲಿ ಕಾರ್ಯಾಚರಣೆ ಕೈಗೊಳ್ಳಲಾಗಿದೆ. 

ಹೊಸನಗರ ವೃತ್ತದ ಪಿಐ ಗಿರೀಶ್, ಪಿಎಸ್ಐ ನೀರಜ್ ನರಲಾರ ನೇತೃತ್ವದ ತಂಡವು ಕಾರ್ಯಾಚರಣೆ ನಡೆಸಿ ಹೊಸನಗರ ಠಾಣಾ ವ್ಯಾಪ್ತಿಯ 4 ಕಡೆಗಳಲ್ಲಿ ದಾಳಿ ನಡೆಸಲಾಗಿದೆ.

ಮಾಳೂರು ವೃತ್ತದ ಪಿಐ ಪ್ರವೀಣ್ ನೀಲಮ್ಮನವರ್, ಪಿಎಸ್ಐ ನವೀನ್ ಮಠಪತಿ ನೇತೃತ್ವದ ತಂಡ ಮಾಳೂರು ಠಾಣಾ ವ್ಯಾಪ್ತಿಯ 4 ಕಡೆಗಳಲ್ಲಿ ದಾಳಿ ನಡೆಸಲಾಗಿದೆ.

ಆಗುಂಬೆ ಪೊಲೀಸ್ ಠಾಣೆಯ ಪಿಎಸ್ಐ ಶಿವಕುಮಾರ್ ನೇತೃತ್ವದ ತಂಡವು ಆಗುಂಬೆ ಠಾಣಾ ವ್ಯಾಪ್ತಿಯ 2 ಕಡೆಗಳಲ್ಲಿ ದಾಳಿ ಮಾಡಿದೆ.

ತೀರ್ಥಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ಸಾಗರ್ ಅತ್ತರ್ ವಾಲ ನೇತೃತ್ವದ ತಂಡವು ತೀರ್ಥಹಳ್ಳಿ ಠಾಣಾ ವ್ಯಾಪ್ತಿಯ 4 ಕಡೆಗಳಲ್ಲಿ ಸೇರಿ ತೀರ್ಥಹಳ್ಳಿ ಉಪ ವಿಭಾಗದಲ್ಲಿ ಒಟ್ಟು 14 ಕಡೆಗಳಲ್ಲಿ ಅಕ್ರಮ ಮರಳು ಸಂಗ್ರಹಣೆ ಮತ್ತು ಸಾಗಾಟ ಮಾಡುತ್ತಿದ್ದ ಸ್ಥಳಗಳ ಮೇಲೆ ದಾಳಿ ನಡೆಸಿ ಮರಳು ತುಂಬಿದ 14 ವಾಹನಗಳನ್ನು ವಶಕ್ಕೆ ಪಡೆದು ಮುಂದಿನ ಕ್ರಮಕ್ಕಾಗಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಹಸ್ತಾಂತರಿಸಲಾಗಿದೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.