ಅನಾಥ ಮಹಿಳೆಗೆ ಬಾಳು ಕೊಟ್ಟ ಯುವಕನಿಗೆ ಬರೋಬ್ಬರಿ ಏಳು ವರ್ಷಗಳ ನಂತರ ಬಿಗ್ ಶಾಕ್|cheating

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನಲ್ಲಿ ಮಹಿಳೆಯೊಬ್ಬಳ ಟ್ರ್ಯಾಪ್​ನಲ್ಲಿ ಸಿಲುಕಿದ ಯುವಕನೊಬ್ಬ ಇದೀಗ ತನಗಾದ ಮೋಸದ ಬಗ್ಗೆ ಕೋರ್ಟ್​ ಮೆಟ್ಟಿಲೇರಿದ್ದಷ್ಟೆ ಅಲ್ಲದೆ ಈ ಸಂಬಂಧ ಪೇಪರ್​ ಟೌನ್​ ಪೊಲೀಸ್ ಸ್ಠೇಷನ್​ನಲ್ಲಿ ದೂರು ನೀಡಿದ್ಧಾರೆ. ಆತ ದಾಖಲಿಸಿದ ದೂರು ದಾಖಲಾದ ಎಫ್​ಐಆರ್​ ಪ್ರಕಾರ, ನಡೆದಿದ್ದಿಷ್ಟು!




2015 ರಲ್ಲಿ ಭದ್ರಾವತಿ ತಾಲ್ಲೂಕಿನ ಗ್ರಾಮವೊಂದರ ಕಾಳಿಂಗೇಶ್ವರ ದೇವಾಲಯದಲ್ಲಿ ಯುವಕನೊಬ್ಬ ಮದುವೆಯಾಗಿದ್ದರು. ಅನಾಥ ಹುಡುಗಿಯನ್ನು ಯಾವುದೇ ಡಿಮ್ಯಾಂಡ್ ಇಲ್ಲದೇ ಮದುವೆಯಾದ ಯುವಕ, ಮದುವೆ ಖರ್ಚನ್ನ ಕೂಡ ಖುದ್ಧಾಗಿ ವ್ಯಯಿಸಿದ್ರು. ಆದರೆ ಅನಾಥಳು ಎಂದು ಹೇಳಿ ಮದುವೆಯಾದ ಯುವತಿಯ ವರ್ತನೆ ಮದುವೆಯಾದ ಮೇಲೆ ಬದಲಾಗಿದೆ.  ಅತ್ತೆಯೊಂದಿಗೆ  ಜಗಳ ತೆಗೆಯುತ್ತಿದ್ದ ಆಕೆ, ಅತ್ತೆ ಮೇಲೆ ಹಲ್ಲೆ ಮಾಡಲು ಆರಂಭಿಸಿದ್ದಳಂತೆ.

ಈ ಮಧ್ಯೆ ಪತ್ನಿ ಇಬ್ಬರು ಮಕ್ಕಳನ್ನು ಕರೆದುಕೊಂಡು ಬಂದು ತನ್ನ ಅಕ್ಕನ ಮಕ್ಕಳು ಎಂದು ಗಂಡನಿಗೆ ಪರಿಚಯ ಮಾಡಿದ್ಧಾಳೆ. ಆನಂತರ ಕೆಲದಿನಗಳ ನಂತರ ಪತಿಗೆ ಒಂದೊಂದೆ ಅನುಮಾನಗಳು ಆರಂಭವಾಗಿದೆ. ಅದರ ನಡುವೆ ಮಹಿಳೆ ತನಗೆ ಅಪೆಂಡಿಕ್ಸ್​ ಆಪರೇಷನ್ ಆಗುವಾಗ , ಸಂತಾನ ಹರಣ ಚಿಕಿತ್ಸೆ ಆಗಿದೆ ತನಗೆ ಎಂದು ಹೇಳಿದ್ದಾಳೆ. ಇದನ್ನ ಕೇಳಿದ ಯುವಕ , ತನಗೆ ಗೊತ್ತಿರುವ ಡಾಕ್ಟರ್​ನ್ನ ಸಂಪರ್ಕಿಸಿದ್ಧಾನೆ.ಅಲ್ಲಿ ಆಕೆಯನ್ನು ಪರೀಕ್ಷೆಗೆ ಒಳಪಡಿಸಿ, ಮಕ್ಕಳಾಗುವಂತೆ ಚಿಕಿತ್ಸೆ ಕೊಡಿಸಿ ಎಂದಿದ್ಧಾನೆ. ಆದರೆ ವೈದ್ಯರು ಇರುವ ವಿಚಾರ ಹೇಳಿದ್ದು, ಆಕೆಗೆ ಅದಾಗಲೇ ಮಕ್ಕಳಾಗಿದ್ದು, ಆಕೆಯೇ ಸಂತಾನಹರಣ ಚಿಕಿತ್ಸೆಗೆ ಒಳಗಾಗಿದ್ದಾಳೆ ಎಂದು ತಿಳಿಸಿದ್ದಾರೆ.




ಇನ್ನೂ ಈ ಬಗ್ಗೆ ಯುವಕ , ಮಹಿಳೆಯನ್ನು ಪ್ರಶ್ನಿಸಿದ್ಧಾನೆ. ಅಷ್ಟೆ ಅಲ್ಲದೆ, ಆಕೆಯ ಪೂರ್ವ ಪರ ವಿಚಾರಸಿದ್ದಾನೆ. ಆಗ ಅಕ್ಕನ ಮಕ್ಕಳು ಎಂದು ಕರೆದುಕೊಂಡು ಬಂದವರು, ಈಕೆಯದ್ದೆ ಮಕ್ಕಳು ಎಂಬುದು ಗೊತ್ತಾಗಿದೆ.  ತನ್ನ ಬಂಡವಾಳ ಆಚೆ ಬರುತ್ತೆ ಎಂಬ ಭಯದಲ್ಲಿ ಮಹಿಳೆ ತಾನು ಕರೆದುಕೊಂಡು ಬಂದ ತನ್ನ ಮಗಳ ಜೊತೆ ಯುವಕನಿಗೆ ಸಂಬಂಧ ಕಲ್ಪಿಸಿ ಮಾತನಾಡಿ, ಬೆದರಿಕೆ ಹಾಕಿದ್ಧಾಳೆ.

ಅಂತಿಮವಾಗಿ ಬೇಸತ್ತ ಯುವಕ ಕೋರ್ಟ್​ನಲ್ಲಿ ಪಿಸಿಆರ್​ ಸಲ್ಲಿಸಿ ತನಗೆ ನ್ಯಾಯಕೊಡಿಸಿ ಅಂಗಲಾಚಿ, ಎಂದು ತನಗೆ ಲಭ್ಯವಿರುವ ಸಾಕ್ಷ್ಯಗಳನ್ನ ಒದಗಿಸಿದ್ದಾನೆ. ಕೋರ್ಟ್​ ಸೂಚನೆಯಂತೆ ಪೇಪರ್​ ಟೌನ್​ ಪೊಲೀಸ್ ಸ್ಟೇಷನ್​ನಲ್ಲಿ ಎಫ್ಐಆರ್ ದಾಖಲಾಗಿದೆ.





ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…

1 hour ago

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…

1 hour ago

ಈದ್ ಮಿಲಾದ್ ಮೆರವಣಿಗೆಯಲ್ಲಿ ಮಾದಕ ವ್ಯಸನ ವಿರುದ್ಧ ಸಮರ: ‘ಗಾಂಜಾ ಬೇಡ ಬ್ರೋ’ ಅಭಿಯಾನಕ್ಕೆ ಭರ್ಜರಿ ಸ್ಪಂದನೆ

ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…

8 hours ago

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…

1 day ago

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ!

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…

1 day ago

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…

2 days ago