ಅರಣ್ಯಪ್ರದೇಶದಲ್ಲಿ ಅರೆಬರೆ ಸುಟ್ಟು ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ !
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ತ್ಯಾಗರ್ತಿ ಸಮೀಪದ ಬೆಳಂದೂರು ಚೆನ್ನಾಪುರ ಗ್ರಾಮದ ಅರಣ್ಯ ಪ್ರದೇಶದಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಅರೆಬರೆ ಸುಟ್ಟು ಕೊಳೆತ ಸ್ಥಿತಿಯಲ್ಲಿ ಗುರುವಾರ ಸಂಜೆ ಪತ್ತೆಯಾಗಿರುವ ಘಟನೆ ನಡೆದಿದೆ.
ಮೃತನನ್ನು ಬೆಳಂದೂರು ಗ್ರಾಮದ ಬತ್ತಿ ರಮೇಶಪ್ಪ(55) ಎಂದು ಗುರುತಿಸಲಾಗಿದೆ.
ಬೆಳಂದೂರು ಗ್ರಾಮದ ಬತ್ತಿ ರಮೇಶಪ್ಪ ಎಂಬ ವ್ಯಕ್ತಿ ಕಳೆದ ೪ ದಿನಗಳಿಂದ ಕಾಣೆಯಾಗಿದ್ದು ಎಲ್ಲಾ ಕಡೆ ಹುಡುಕಿ ಸಂಬಂಧಿಕರ ಮನೆಗೆ ಹೋಗಿರಬಹುದು ತಿರುಗಿ ಬರುತ್ತಾರೆ ಎಂದುಕೊಂಡಿದ್ದರು.
ಚೆನ್ನಾಪುರ ಗ್ರಾಮದ ವ್ಯಕ್ತಿಯೊಬ್ಬರು ಕಳೆದು ಹೋಗಿದ್ದ ಆಕಳು ಕರು ಅರಣ್ಯದಲ್ಲಿ ಹುಡುಕುತ್ತಿದ್ದಾಗ ಮೃತದೇಹ ಕಂಡುಬಂದಿದೆ.
ಮೃತಶರೀರ ಹಾಗೂ ಸುತ್ತಮುತ್ತಲೂ ಕರಕಲು ಸ್ಥಿತಿಯಲ್ಲಿದ್ದುದರಿಂದ ಸಿಡಿಲು ಬಡಿದು ಮೃತಪಟ್ಟಿರಬಹುದೆಂದು ಗ್ರಾಮಸ್ಥರು ಶಂಕಿಸಿದ್ದು ಮರಣೋತ್ತರ ವರದಿ ಹಾಗೂ ಪೋಲಿಸ್ ತನಿಖೆಯಿಂದ ಸತ್ಯಾಂಶ ಹೊರಬರಬೇಕಾಗಿದೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್