ಆಯನೂರಿನ ನವರತ್ನ ಬಾರ್ ನಲ್ಲಿ ನಡೆದಿದ್ದ ಕೊಲೆ ಪ್ರಕರಣ ಸಂಬಂಧ, ಆರೋಪಿಗಳನ್ನ ಬಂಧಿಸಲು ತೆರಳಿದ್ದ ಪೊಲೀಸರ ಮೇಲೆಯೇ ಆರೋಪಿ ಸತೀಶ್ ಹಲ್ಲೆ ಮಾಡಲು ಮುಂದಾಗಿದ್ಧಾನೆ. ಈ ವೇಳೆ ಪೊಲೀಸರು ರಕ್ಷಣಾತ್ಮಕವಾಗಿ ಆತನ ಕಾಲಿಗೆ ಗುಂಡು ಹೊಡೆದಿದ್ಧಾರೆ.
ಸತೀಶ್ ನನ್ನು ಬಂಧಿಸಲು ತೆರಳಿದ್ದ ಸಂದರ್ಭದಲ್ಲಿ ಆತ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ. ಈ ವೇಳೆ ಎಸ್ಐ ರಾಜು ರೆಡ್ಡಿಯವರು ಆರೋಪಿ ಕಾಲಿಗೆ ಗುಂಡು ಹೊಡೆದು ಆತನನ್ನ ಬಂಧಿಸಿದ್ದಾರೆ.
ನಿನ್ನೆ ಮಧ್ಯರಾತ್ರಿ ನಡೆದಿದ್ದ ಕೊಲೆ ಸಂಬಂಧ ಆರೋಪಿ ಸತೀಶ್ನನ್ನ ಬಂಧಿಸಲು ಪಿಎಸ್ಐ ರಾಜುರೆಡ್ಡಿ ಹಾಗೂ ಪ್ರವೀಣ್ ಹಾಗೂ ಶಿವರಾಜ್ ಎಂಬಿಬ್ಬರು ಸಿಬ್ಬಂದಿ ತೆರಳಿದ್ದರು. ಈ ವೇಳೆ ಆರೋಪಿ ಸತೀಶ್ ಪೊಲೀಸರ ಮೇಲೆ ಚಾಕುವಿನಿಂದ ಅಟ್ಯಾಕ್ ಮಾಡಲು ಪ್ರಯತ್ನಿಸಿದ್ದಾನೆ.
ಎಚ್ಚರಿಕೆ ನೀಡಿ ಗಾಳಿಯಲ್ಲಿ ಗುಂಡು ಹೊಡೆದ ಹೊರತಾಗಿಯು ಸತೀಶ್ ದಾಳಿಗೆ ಮುಂದಾದಾಗ ಪಿಎಸ್ಐ ರವರು ಆತನ ಕಾಲಿಗೆ ಗುಂಡು ಹಾರಿಸಿದ್ಧಾರೆ. ಘಟನೆಯಲ್ಲಿ ಓರ್ವ ಸಿಬ್ಬಂದಿಗೆ ಗಾಯವಾಗಿದ್ದು, ಅವರನ್ನ ಹಾಗೂ ಆರೋಪಿ ಸತೀಶ್ನನ್ನ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.