ಆಸ್ಪತ್ರೆಯ ನಿರ್ಲಕ್ಷವೋ.. ಬಡ ಕುಟುಂಬದ ದುರಂತವೋ..?ಇಂಜೆಕ್ಷನ್ ನೋವಿನಿಂದ ಕಾಲು ಕಳೆದುಕೊಳ್ಳುವ ಭೀತಿಯಲ್ಲಿ ಬಾಲಕಿ.!!!!|Nagara

ಆಸ್ಪತ್ರೆಯ ನಿರ್ಲಕ್ಷವೋ.. ಬಡ ಕುಟುಂಬದ ದುರಂತವೋ..?
ಕಾಲು ಕಳೆದುಕೊಳ್ಳುವ ಭೀತಿಯಲ್ಲಿ ಬಾಲೆ.!!!!
ವರದಿ : ರವಿ ಬಿದನೂರು

ಹೊಸನಗರ: ಆಕೆಗಿನ್ನು 7 ವರ್ಷ. ಮನೆಯಂಗಳದಲ್ಲಿ ಆಟ ಆಡಿಕೊಂಡಿದ್ದ ಬಾಲಕಿ ಇದೀಗ ಕಾಲನ್ನೇ ಕಳೆದುಕೊಳ್ಳುವ ಭೀತಿಗೆ ಸಿಲುಕಿದ್ದಾಳೆ. ಇದು ಹೆತ್ತಕರುಳಿಗೆ ಬೆಂಕಿ ಇಟ್ಟಂತಾಗಿದೆ.


ಹೌದು ಇದು ಮೂಡುಗೊಪ್ಪ ಗ್ರಾಪಂ, ಬೈಸೆ ಗ್ರಾಮದ ಸುಳುಗೋಡಿನ ಬಡ ಕುಟುಂಬದ ರೋಧನ ಇದು. ಅಂಬಿಕಾ ಮತ್ತು ಸುಂದರ ದಂಪತಿಗಳ ಮಗಳು ಶ್ರವಂತಿಯ ಇಂದಿನ ಧಾರುಣ ಸ್ಥಿತಿ ಮುಂದೇನು ಅನ್ನುವ ಪ್ರಶ್ನೆ ಹುಟ್ಟುಹಾಕಿದೆ.

ಏನಿದು ಘಟನೆ:

ಅಂಬಿಕಾ ಸುಂದರ ರವರ ಮಗಳು ಶ್ರವಂತಿ ಎರಡನೇ ತರಗತಿ ಓದುತ್ತಿದ್ದಾಳೆ. ಆಕೆಗೆ ಮೇ.29 ರಂದು ಜ್ವರ ಕಾಣಿಸಿಕೊಂಡಿದ್ದು ರಾತ್ರಿ ನಗರ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದುಕೊಂಡು ಬಂದಿದ್ದಾರೆ. ವೈದ್ಯರು ಆರೋಗ್ಯ ತಪಾಸಣೆಯ ಬಳಿಕ ಮಗುವ ಸೊಂಟಕ್ಕೆ ಇಂಜೆಕ್ಷನ್ ನೀಡಿದ್ದಾರೆ. ಬಳಿಕ ಬಾಲಕಿ ಕಾಲು ಊರಲು ಸಾಧ್ಯವಾಗದೇ.. ಅಮ್ಮ ಇರುವೆ ಹರಿದ ಹಾಗೆ ಆಗುತ್ತದೆ ಎಂದು ರೋಧಿಸಿದ್ದಾಳೆ. ಇದು ಸರಿಯಾಗುತ್ತದೆ ಎಂದು ವೈದ್ಯರು ಹೇಳಿದ ಮನೆಗೆ ಕರೆದುಕೊಂಡು ಬಂದೆವು ಎಂದು ಪೋಷಕರು ತಿಳಿಸಿದ್ದಾರೆ.




ಕಾಲು ಸ್ವಾಧೀನ ಕಳೆದುಕೊಂಡಿತೇ?

ಆಸ್ಪತ್ರೆಯಿಂದ ಮನೆಗೆ ಬಂದು ರಾತ್ರಿ ಕಳೆದು ಬೆಳಗಾದರೂ.. ಬಾಲಕಿ ಕಾಲು ಊರಲು ಕೇಳುತ್ತಿಲ್ಲ. ಒಂದೇ ಸಮನೇ ರೋದನ. ಇದರಿಂದ ಆತಂಕಗೊಂಡ ತಂದೆತಾಯಿ ಮತ್ತೆ ಆಸ್ಪತ್ರೆಗೆ ಮಗಳನ್ನು ಕರೆತಂದಿದ್ದಾರೆ. ವೈದ್ಯರ ಸೂಚನೆ ಮೇರೆಗೆ ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ 5 ದಿನ ಚಿಕಿತ್ಸೆ ನೀಡಲಾಗಿತ್ತು. ಆದರೂ ಬಾಲಕಿ ಶ್ರವಂತಿಯ ಕಾಲಿನಲ್ಲಿ ಯಾವುದೇ ಚೇತರಿಕೆ ಕಂಡಿಲ್ಲ. ಮತ್ತೆ ನಗರ ಆಸ್ಪತ್ರೆಗೆ ಬಂದ ಪೋಷಕರು ವೈದ್ಯರಲ್ಲಿ ಮಗಳ ಭವಿಷ್ಯದ ಬಗ್ಗೆ ಅಲವತ್ತುಕೊಂಡಿದ್ದಾರೆ. ಮತ್ತೆ ವೈದ್ಯರ ಸೂಚನೆ ಮೇರೆಗೆ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ 4 ದಿನ ಚಿಕಿತ್ಸೆ ಕೊಡಿಸಲಾಗಿದೆ. ಆದರೂ ಫಲಕಾರಿಯಾಗದೇ ಬಡ ಕುಟುಂಬ ಚಿಂತೆಗೀಡಾಗಿದೆ.

ಕಮರಿದ ಬಾಲಕಿಯ ಶಿಕ್ಷಣ:

ಜೂನ್.1 ರಿಂದ ಶಾಲೆ ಆರಂಭವಾಗಿದೆ. ಬೈಸೆ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ  2ನೇ ತರಗತಿ ಉತ್ತೀರ್ಣಗೊಂಡು ಖುಶಿಯಿಂದ ಶಾಲೆಗೆ ಹೋಗುವ ತಯಾರಿಯಲ್ಲಿದ್ದ ಶ್ರವಂತಿ ನಡೆಯಲಾಗದೇ ಮನೆಯಲ್ಲೇ ಕೂರುವಂತಾಗಿದೆ.

ಸರ್ಕಾರಿ ಆಸ್ಪತ್ರೆ ಬಗ್ಗೆ ಆರೋಪ:

ನಲಿದಾಡಿಕೊಂಡಿದ್ದ ಮಗಳು ಶ್ರವಂತಿಗೆ ಜ್ವರ ಬಂದಿದ್ದು ನಿಜ. ಆಸ್ಪತ್ರೆಗೆ ಹೋಗಿದ್ದು ನಿಜ. ವೈದ್ಯರು ಸ್ಪಂದಿಸಿ ಚಿಕಿತ್ಸೆ ನೀಡಿದ್ದರು. ಆಸ್ಪತ್ರೆಗೆ ಒಳ ಹೋಗುವಾಗ ನಡೆದುಕೊಂಡು ಹೋಗಿದ್ದ ಬಾಲಕಿ ವಾಪಾಸು ಬರುವಾಗ ನಡೆಯುತ್ತಿರಲಿಲ್ಲ. ಅವರು ನೀಡಿದ ಇಂಜೆಕ್ಷನ್ ಯಾವುದು, ಚಿಕಿತ್ಸೆ ಹೇಗೆ ಮಾಡಿದ್ದಾರೆ ನಮಗೆ ಗೊತ್ತಿಲ್ಲ. ಆದರೆ ನಂತರ ಬಾಲಕಿಯ ಒಂದು ಕಾಲು ಸ್ವಾಧೀನ ಇಲ್ಲ ಎಂದು ಪೋಷಕರು ಗೋಳಿಡುತ್ತಿದ್ದಾರೆ.




ನಿರ್ಲಕ್ಷ ಮಾಡಿಲ್ಲ:

ಬಾಲಕಿ ಶ್ರವಂತಿಗೆ ಜ್ವರ ಬಂದು ಆಸ್ಪತ್ರೆಗೆ ಕರೆದುಕೊಂಡು ಬಂದಾಗ ಸ್ಪಂದಿಸಿ ಚಿಕಿತ್ಸೆ ನೀಡಲಾಗಿದೆ. ಕಾರ್ಯನಿರ್ವಹಣೆಯಲ್ಲಿ‌ ನಿರ್ಲಕ್ಷ ತೋರಿಲ್ಲ. ಆದರೆ ಕಾಲಿನ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ ಎಂಬುದು ಗೊತ್ತಿಲ್ಲ. ಆದರೆ ಬಾಲಕಿಯ ಚಿಕಿತ್ಸೆಗೆ ಮಾನವೀಯ ನೆಲೆಯಲ್ಲಿ ಸ್ಪಂದಿಸಲಾಗುತ್ತಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ನಾನು ಟೀಚರ್ ಆಗಬೇಕು:

ನಾನು ಶಾಲೆಗೆ ಹೋಗಬೇಕು. ಓದಬೇಕು.. ಓದಿ ಟೀಚರ್ ಆಗಬೇಕು ಎಂದು ಎಳೆಯ ವಯಸ್ಸಲ್ಲೇ ಹೊಂಗನಸು ಹೊತ್ತ ಶ್ರವಂತಿ.. ಶಾಲೆಗೆ ಹೋಗಲಾಗದೇ 21 ದಿನಗಳಾಗಿವೆ. ನನಗೆ ಸ್ಕೂಲಿಗೆ ಹೋಗ್ಲಿಕ್ಕೆ ಆಗುತ್ತಿಲ್ಲ ಎಂದು ಹೇಳುವಾಗ ಆ ಪುಟ್ಟ ಕಣ್ಣುಗಳಲ್ಲಿ ನೀರು ಜಿನುಗುವಾಗ ಮನ ಕಲಕುತ್ತದೆ.

ಕೆಲಸಕ್ಕೆ ಹೋಗುತ್ತಿಲ್ಲ.. ನಮ್ಮ ಬಳಿ ಹಣವಿಲ್ಲ..!

ಮಗಳು 22 ದಿನದಿಂದ ಮನೆಯಲ್ಲಿದ್ದಾಳೆ. ಕೂಲಿನಾಲಿ ಮಾಡಿದರೇ ಮಾತ್ರ ನಮ್ಮ ಸಂಸಾರ ನಡೆಯಬೇಕು. ಆದರೆ ಮಗಳನ್ನು ಬಿಟ್ಟು ಕೂಲಿಗೆ ಹೋಗಲಾಗುತ್ತಿಲ್ಲ. ದೊಡ್ಡ ಆಸ್ಪತ್ರೆಗೆ ತೋರಿಸೋಣ ಅಂದರೆ ನಮ್ಮ‌ ಬಳಿ ಹಣವಿಲ್ಲ. ಈಗಾಗಲೇ ಸ್ವಸಹಾಯ ಸಂಘಗಳಲ್ಲಿ ಸಾಲ ಮಾಡಿಕೊಂಡಿದ್ದೇವೆ ಎಂದು‌ ಬಡಕುಟುಂಬ ಕಣ್ಣೀರಲ್ಲಿ ಕೈತೊಳೆಯುತ್ತಿದೆ.

ಪುಟ್ಟ ಬಾಲಕಿಯ ಬದುಕಿನ ದುರಂತಕ್ಕೆ ವೈದ್ಯರು ನೀಡಿದ ಚಿಕಿತ್ಸೆಯ ಕಾರಣವೋ..? ಬಡವರ ಮೇಲೆಯೇ ವಿಧಿಯ ಅಟ್ಟಹಾಸವೋ ಗೊತ್ತಿಲ್ಲ.. ಹೊಂಗನಸಿನ ಶ್ರವಂತಿ ಬದುಕಿಗೆ ಕೊಳ್ಳಿ ಇಟ್ಟಿರುವುದು ಸತ್ಯ.  ಬಾಲಕಿಯ ಬದುಕು ಮೂರಾಬಟ್ಟೆ ಆಗುವ ಮುನ್ನ ಸರ್ಕಾರ ಗಮನಹರಿಸಿ, ಬಾಲಕಿಯ ಭವಿಷ್ಯಕ್ಕೆ ನೀರೆರೆಯ ಬೇಕಿದೆ.


  • ನಮಗೆ ಇಬ್ಬರು ಹೆಣ್ಣುಮಕ್ಕಳು ಕಿರಿಯ ಮಗಳು ಶ್ರವಂತಿಗೆ‌ ಜ್ವರ ಬಂದಿದ್ದು ನಗರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದೆವು. ವೈದ್ಯರು ಸ್ಪಂದಿಸಿ ಚಿಕಿತ್ಸೆ ನೀಡಿದ್ದಾರೆ. ಆದರೆ ಆ ಬಳಿಕ ನನ್ನ ಮಗಳ ಕಾಲಿನ ಸ್ವಾಧೀನ ತಪ್ಪಿದೆ. ಇಲ್ಲಿ ಯಾರು ತಪ್ಪು ಮಾಡಿದ್ದಾರೋ ಗೊತ್ತಿಲ್ಲ. ನಮ್ಮ ಮಗಳ ಕಾಲು ಮೊದಲಿನಂತಾಗಬೇಕು.
ಅಂಬಿಕಾ ಮತ್ತು ಸುಂದರ್, ತಂದೆ ತಾಯಿ

  • ಬಾಲಕಿಯನ್ನು ಚಿಕಿತ್ಸೆಗೆ ಕರೆದುಕೊಂಡು ಬಂದಾಗ ಚಿಕಿತ್ಸೆ ನೀಡಲಾಗಿದೆ. ಕರ್ತವ್ಯದಲ್ಲಿ ಲೋಪವಾಗಲಿ.. ನಿರ್ಲಕ್ಷವಾಗಲಿ ತೋರಿಲ್ಲ. ಆದರೂ ಮಾನವೀಯತೆಯಲ್ಲಿ ಬಾಲಕಿಯ ಚಿಕಿತ್ಸೆಗೆ ಕೂಡ ಸ್ಪಂದಿಸಲಾಗಿದೆ.
ಡಾ.ಜಿ.ಬಿ.ಮುರಳಿ
ವೈದ್ಯಾಧಿಕಾರಿ, ನಗರ ಸರ್ಕಾರಿ ಸಂಯುಕ್ತ ಆಸ್ಪತ್ರೆ







ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಈದ್ ಮಿಲಾದ್ ಮೆರವಣಿಗೆಯಲ್ಲಿ ಮಾದಕ ವ್ಯಸನ ವಿರುದ್ಧ ಸಮರ: ‘ಗಾಂಜಾ ಬೇಡ ಬ್ರೋ’ ಅಭಿಯಾನಕ್ಕೆ ಭರ್ಜರಿ ಸ್ಪಂದನೆ

ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…

7 hours ago

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…

1 day ago

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ!

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…

1 day ago

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…

1 day ago

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…

2 days ago

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ​ಮಾನವೀಯತೆಯೆಂಬುದು ಕೇವಲ…

2 days ago