ತೀರ್ಥಹಳ್ಳಿ : ಇಲ್ಲಿನ ತೀರ್ಥಮತ್ತೂರಿನಲ್ಲಿ ಈಜಲು ಇಳಿದ ಇಬ್ಬರು ಪ್ರಾಧ್ಯಾಪಕರು ನೀರು ಪಾಲಾಗಿರುವ ಘಟನೆ ಇಂದು ನಡೆದಿದೆ.
ತೀರ್ಥಮತ್ತೂರು ಬಳಿ 8-10 ಜನ ಪ್ರಾಧ್ಯಾಪಕರು ತುಂಗ ನದಿಗೆ ಇಳಿದಾಗ ಓರ್ವ ಪ್ರಾಧ್ಯಾಪಕರು ನೀರು ಪಾಲಾಗಿದ್ದು ಅವರನ್ನು ರಕ್ಷಿಸಲು ಮತ್ತೋರ್ವ ಪ್ರಾಧ್ಯಾಪಕರು ಮುಂದಾಗಿದ್ದು ಅವರೂ ಸಹ ನೀರು ಪಾಲಾಗಿದ್ದಾರೆ.
ನಿಟ್ಟೆ ಕಾಲೇಜಿನ ಪ್ರಾಧ್ಯಾಪಕರಾದ ಪುನೀತ್ ಮತ್ತು ಬಾಲಾಜಿ ನೀರುಪಾಲಾದ ದುರ್ಧೈವಿಗಳಾಗಿದ್ದಾರೆ.
ದಕ್ಷಿಣ ಕನ್ನಡದ ನಿಟ್ಟೆ ಕಾಲೇಜಿನ 8 ರಿಂದ ಹತ್ತು ಜನ ಪ್ರಾಧ್ಯಾಪಕರು ತೀರ್ಥಮತ್ತೂರಿನ ಯೋಗ ನರಸಿಂಹ ಮಠಕ್ಜೆ ಆಗಮಿಸಿದ್ದರು. ಇಂದು ಮುಂಜಾನೆ ತುಂಗಾ ನದಿಗೆ ಸ್ನಾನಕ್ಕೆ ಇಳಿದಿದ್ದಾರೆ.ಈ ಸಂಧರ್ಭದಲ್ಲಿ ಇಬ್ವರು ನೀರು ಪಾಲಾಗಿದ್ದಾರೆ. ಓರ್ವನ ಮೃತ ದೇಹ ಪತ್ತೆಯಾಗಿದ್ದು ಮತ್ತೋರ್ವರ ಮೃತದೇಹ ಶೋಧ ಕಾರ್ಯ ಮುಂದುವರೆದಿದೆ.
ಅಗ್ನಿಶಾಮಕ ದಳದಿಂದ ಶೋಧ ಕಾರ್ಯ ನಡೆಯುತ್ತಿದೆ.ತೀರ್ಥಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್