ಎಲ್ಲಾ ಐದು ಗ್ಯಾರಂಟಿಗಳನ್ನು ಅಧಿಕೃತವಾಗಿ ಘೋಷಿಸಿದ ಸಿಎಂ ಸಿದ್ದರಾಮಯ್ಯ : ಗ್ಯಾರೆಂಟಿ ಪಡೆಯಲು ಏನು ಮಾಡಬೇಕು? ಯಾರಿಗೆಲ್ಲ ಸಿಗಲಿದೆ ಉಚಿತ ಯೋಜನೆ!!! ಇಲ್ಲಿದೆ ಸಂಪೂರ್ಣ ಮಾಹಿತಿ|congress


ಕಾಂಗ್ರೆಸ್ ಪಕ್ಷ ಚುನಾವಣೆ ವೇಳೆ ಘೋಷಿಸಿದ ಐದು ಗ್ಯಾರೆಂಟಿಯನ್ನು ಜಾರಿಗೊಳಿಸುವ ಘೋಷಣೆ ಮಾಡಿದೆ. ಮಹತ್ವದ ಸಂಪುಟ ಸಭೆ ನಡೆಸಿದ ಸಿದ್ದರಾಮಯ್ಯ ಸರ್ಕಾರ, 5 ಗ್ಯಾರೆಂಟಿ ಯೋಜನೆ ಜಾರಿಗೊಳಿಸಿದೆ. ಐದು ಯೋಜನೆಗಳು ಮಹಿಳೆಯರ ಬಸ್ ಪ್ರಯಾಣ ಜೂನ್ 11 ರಿಂದ ಆರಂಭಗೊಂಡರೆ, ಇತರ ನಾಲ್ಕು ಯೋಜನೆಗಳು ಜುಲೈ 1 ರಿಂದ ಆರಂಭಗೊಳ್ಳುತ್ತಿದೆ.



ಗ್ಯಾರೆಂಟಿ ಯೋಜನೆ ಜಾರಿ ಕುರಿತು ಸುದ್ದಿಗೋಷ್ಠಿ ನಡೆಸಿದ ಸಿದ್ದರಾಮಯ್ಯ, ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. ಇದೇ ವೇಳೆ ಗ್ಯಾರೆಂಟಿ ಯೋಜನೆ ಪಡೆಯಲು ಅರ್ಹರು ಯಾವ ದಾಖಲೆ ನೀಡಬೇಕು ಅನ್ನೋ ಮಾಹಿತಿಯನ್ನು ಸಿದ್ದರಾಮಯ್ಯ ನೀಡಿದ್ದಾರೆ.

ಯೋಜನೆ ಲಾಭ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹರು ಅರ್ಜಿ ಹಾಕಬೇಕು. ಜೊತೆಗೆ ಬ್ಯಾಂಕ್ ಖಾತೆ, ಆಧಾರ್ ಕಾರ್ಡ್ ಲಿಂಕ್ ಸೇರಿದಂತೆ ಇತರ ತಾಂತ್ರಿಕ ಪ್ರಕ್ರಿಯೆಗಳು ನಡೆಯಲಿದೆ. ಅರ್ಜಿಗಳನ್ನು ಪರಿಶೀಲನೆ ನಡೆಸಿ ಅರ್ಹರನ್ನು ಆಯ್ಕೆ ಮಾಡಲಾಗುತ್ತದೆ. ಬಳಿಕ ಉಚಿತ ಯೋಜನೆಗಳ ಲಾಭ ಸಿಗಲಿದೆ. ಹೀಗಾಗಿ ಮಹಿಳೆಯರ ಉಚಿತ ಬಸ್ ಪ್ರಯಾಣ ಇದೇ ತಿಂಗಳ 11 ರಿಂದ ಜಾರಿಯಾಗಲಿದೆ. ಆದರೆ ಇತರ ಯೋಜನೆಗಳಿಗೆ ಬ್ಯಾಂಕ್ ಖಾತೆ, ಆಧಾರ್ ಕಾರ್ಡ್ ಸೇರಿದಂತೆ ಇತರ ದಾಖಲೆಗಳ ಅವಶ್ಯಕತೆ ಇರುವುದರಿಂದ ಜುಲೈ ತಿಂಗಳಿನಿಂದ ಜಾರಿಯಾಗುತ್ತಿದೆ.



ಜುಲೈ 1 ರಿಂದ ಬಿಪಿಎಲ್​ ಮತ್ತು ಅಂತ್ಯೋದಯ ಕಾರ್ಡ್​ದಾರರಿಗೆ ‘ಅನ್ನಭಾಗ್ಯ’ ಯೋಜನೆಯಡಿ 10 ಕೆಜಿ ಅಕ್ಕಿ ವಿತರಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಸುದೀರ್ಘ ಸಮಾಲೋಚನೆ ಮಾಡಿದ್ದೇವೆ. ಜಾತಿಧರ್ಮ ಭೇದವಿಲ್ಲದೆ ಕೊಡ್ತೀವಿ. ಈ ಆರ್ಥಿಕ ವರ್ಷದಲ್ಲೇ ಕೊಡ್ತೀವಿ. ಕೆಲ ತಾಂತ್ರಿಕ ಸಮಸ್ಯೆ ಇರುವುದರಿಂದ ಅರ್ಜಿ ಆಹ್ವಾನಿಸಿ ಪ್ರಕ್ರಿಯೆಗಳನ್ನು ನಡೆಸುತ್ತೇವೆ ಎಂದಿದ್ದಾರೆ.

1. ಗೃಹಜ್ಯೋತಿ 200 ಯುನಿಟ್ ವರೆಗೆ ಉಚಿತ ವಿದ್ಯುತ್


ಯಾರು ಎಷ್ಟು ವಿದ್ಯುತ್ ಬಳಸ್ತಾರೆ ಎಂಬುದನ್ನು 12 ತಿಂಗಳ ಸರಾಸರಿ ವಿದ್ಯುತ್ ಬಳಕೆ ಆಧರಿಸಿ, ಅದರ ಮೇಲೆ ಶೇ.10 ರಷ್ಟರವರೆಗಿನ ವಿದ್ಯುತ್ ಉಚಿತ. ಜು.1 ರಿಂದ ಆಗಸ್ಟ್ ವರಗಿನ ಖರ್ಚಿಗೆ ಇದು ಲೆಕ್ಕ. ಜುಲೈನಿಂದ ಮಾಡಿರುವ ಖರ್ಚಿನ ಬಿಲ್ ಆಗಸ್ಟ್ ನಲ್ಲಿ ಬರಲಿದೆ. ಜುಲೈವರೆಗಿನ ಬಾಕಿ ಉಳಿಸಿಕೊಂಡವರಿಗೆ ಸಮಯ ಕೊಡುತ್ತೇವೆ ಅವರೇ ಕಟ್ಟಬೇಕು. ಸರ್ಕಾರ ಕಟ್ಟಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

2. ಗೃಹಲಕ್ಷ್ಮೀ 

ಬ್ಯಾಂಕ್ ಖಾತೆ, ಆಧಾರ್ ವಿಲೀನ ಪ್ರಕ್ರಿಯೆ ಆಗಬೇಕಿದೆ. ಸಾಫ್ಟ್ವೇರ್ ಅಭಿವೃದ್ಧಿಪಡಿಸಬೇಕಿದೆ. ಮನೆಯ ಒಡತಿ ಖಾತೆಗೆ ಮಾಸಿಕ 2 ಸಾವಿರ ರೂ. ಜಮೆ ಮಾಡಲಾಗುತ್ತದೆ. ಜೂ.15 ರಿಂದ ಜು.15 ರೊಳಗೆ ಆನ್ ಲೈನ್ ಅಲ್ಲಿ ಅರ್ಜಿ ಹಾಕಬೇಕು. ಬಿಪಿಎಲ್, ಎಪಿಎಲ್ ಎಲ್ಲರೂ ಅರ್ಜಿ ಹಾಕಬಹುದು. 18 ವರ್ಷ ತುಂಬಿದವರು. ಜು.15 ರಿಂದ ಆ.15 ರವರೆಗೆ ಪ್ರಕ್ರಿಯೆ ನಡೆಸಿ, ಆ.15 ರಿಂದ ಜಾರಿಗೆ ಬರಲಿದೆ. ಇದಕ್ಕೆ ಬೇರಾವುದೇ ಷರತ್ತುಗಳಿಲ್ಲ. ಸಾಮಾಜಿಕ ಭದ್ರತಾ ಸೇವೆಗಳಡಿ ಪಿಂಚಣಿಯ ಜೊತೆಗೆ ಇದೂ ಸಿಗಲಿದೆ. ಸರ್ಕಾರದ ನಿವೃತ್ತ ನೌಕರರ ಪಿಂಚಣಿ ಪಡೆಯುತ್ತಿರುವವರಿಗೆ ಇಲ್ಲ. ಮನೆಯ ಯಜಮಾನಿ ಯಾರು ಅನ್ನೋದನ್ನು ಕುಟುಂಬ ನಿರ್ಧರಿ ಅರ್ಜಿ ಹಾಕಬೇಕು. ಅರ್ಹ ಫಲಾನುಭವಿಗಳಿಗೆ ಆಗಸ್ಟ್ 15 ರಿಂದ 2,000 ರೂಪಾಯಿ ಜಮೆ ಆಗಲಿದೆ.



3. ಅನ್ನಭಾಗ್ಯ

ಕೇಂದ್ರ ಸರ್ಕಾರ ಅಕ್ಕಿಯನ್ನು 5 ಕೆ.ಜಿ.ಗೆ ಇಳಿಸಿದ್ದಾರೆ. 10 ಕೆ.ಜಿ. ಆಹಾರಧಾನ್ಯ ಕೊಡುವುದಾಗಿ ನಾವೀಗ ಹೇಳಿದ್ದೆವು. ಈಗಾಗಲೇ ಆಹಾರಧಾನ್ಯ ಸರಬರಾಜಾಗಿದ್ದು, ದಾಸ್ತಾನು ಇಲ್ಲ. ಹೀಗಾಗಿ ಜು.1 ರಿಂದ ಬಿಪಿಎಲ್ + ಅಂತ್ಯೋದಯ ಅನ್ನ ಕಾರ್ಡುದಾರರಿಗೆ ತಲಾ 10 ಕೆ.ಜಿ. ಅಕ್ಕಿ. ನ್ಯಾಫೆಡ್, ಕೇಂದ್ರ, ಎನ್ ಸಿಸಿ ಎಫ್ ಎಲ್ಲಿಂದಲಾದರೂ ಸರಿ ತಂದುಕೊಡುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

4. ಶಕ್ತಿ 

ಸಮಾಜದಲ್ಲಿ ಶೇ.50 ರಷ್ಟು ಮಹಿಳೆಯರಿದ್ದಾರೆ. ಸ್ಥಾನಮಾನ ಪರಿಗಣಿಸದೆ ವಿದ್ಯಾರ್ಥಿನಿಯರನ್ನೂ ಒಳಗೊಂಡಂತೆ ಕರ್ನಾಟಕದ ಎಲ್ಲ ಮಹಿಳೆಯರಿಗೆ ಜೂ.11 ರಿಂದ ರಾಜ್ಯದೊಳಗೆ ಸರ್ಕಾರದ ಸಾಮಾನ್ಯ ಬಸ್, ಎಕ್ಸ್ ಪ್ರೆಸ್, (ಎಸಿ, ನಾನ್ ಎಸಿ ಸ್ಲೀಪರ್, ಲಕ್ಸ್ಯುರಿ ಬಸ್ ಬಿಟ್ಟು) ಉಚಿತ ಪ್ರಯಾಣ. ಕೆಎಸ್‌ಆರ್ಟಿಸಿಯಲ್ಲಿ ಶೇ.50 ರಷ್ಟು ಆಸನ ಮೀಸಲು. ಹೆಣ್ಣು ಮಕ್ಕಳಿಲ್ಲದಿದ್ದರೆ, ಗಂಡಸರು ಕುಳಿತು ಹೋಗಬಹುದು.ಬಿಎಂಟಿಸಿಯಲ್ಲೂ ಮಹಿಳೆಯರಿಗೂ ಉಚಿತ ಪ್ರಯಾಣ ಕಲ್ಪಿಸಲಾಗಿದೆ. ಆದರೆ ಇಲ್ಲಿ ರಿಸರ್ವೇಶನ್ ಇರುವುದಿಲ್ಲ ಎಂದು ಸಿದ್ದಾರಾಮಯ್ಯ ಹೇಳಿದ್ದಾರೆ.

5. ಯುವನಿಧಿ

 2022-23 ರಲ್ಲಿ ತೇರ್ಗಡೆ ಹೊಂದಿದ ವೃತ್ತಿಶಿಕ್ಷಣವೂ ಸೇರಿ ಎಲ್ಲ ಪದವೀಧರರು ನೋಂದಣಿ ಮಾಡಿಕೊಂಡ ದಿನದಿಂದ 24 ತಿಂಗಳ(2 ವರ್ಷ)ವರೆಗೆ ಪ್ರತಿ ತಿಂಗಳು 3 ಸಾವಿರ ರೂ., ಡಿಪ್ಲೊಮಾ ಪದವೀಧರರಿಗೆ 1,500 ರೂಪಾಯಿ. ಅಷ್ಟರೊಳಗೆ ಉದ್ಯೋಗ ಪಡೆದವರು ಘೋಷಿಸಿಕೊಳ್ಳಬೇಕು. ಯುವಕ, ಯುವತಿ + ತೃತೀಯಲಿಂಗಿಗಳಿಗೂ ಅನ್ವಯ. 2022-23ರಲ್ಲಿ ತೇರ್ಗಡೆ ಹೊಂದಿದವರು ಈ ಯೋಜನೆಯ ಲಾಭ ಪಡೆಯಲು ಅರ್ಜಿ ಹಾಕಬೇಕು. ನಿರುದ್ಯೋಗ ಯುವಕ-ಯವತಿಗೆ 2 ವರ್ಷ ಹಣ ಜಮೆ ಆಗಲಿದೆ. ಈ ಯೋಜನೆ ಲಾಭ ಪಡೆಯುವ ನಡುವೆ ಉದ್ಯೋಗ ಗಿಟ್ಟಿಸಿಕೊಂಡ ವ್ಯಕ್ತಿಗೆ ಈ ಯೋಜನೆ ಮುಂದುವರಿಯುವುದಿಲ್ಲ.




ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟಕ್ಕೆ ಹೊಸನಗರ ತಾಲ್ಲೂಕು ವಕೀಲರ ಸಂಘದ ಸಂಪೂರ್ಣ ಬೆಂಬಲ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟಕ್ಕೆ ಹೊಸನಗರ ತಾಲ್ಲೂಕು ವಕೀಲರ ಸಂಘದ ಸಂಪೂರ್ಣ ಬೆಂಬಲ Hosanagara Taluk Advocates Association extends…

4 hours ago

ಅಕ್ರಮ ಬಂದೂಕಿನಿಂದ ಬೀದಿ ನಾಯಿಯ ಬರ್ಬರ ಹತ್ಯೆ – ಆರೋಪಿ ಅರೆಸ್ಟ್!

ಅಕ್ರಮ ಬಂದೂಕಿನಿಂದ ಬೀದಿ ನಾಯಿಯ ಬರ್ಬರ ಹತ್ಯೆ - ಆರೋಪಿ ಅರೆಸ್ಟ್! Sagar police arrested a man accused…

4 hours ago

ಉಚಿತ ಸೆಲ್‌ಫೋನ್ ರಿಪೇರಿ ತರಬೇತಿ: ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನ

ಉಚಿತ ಸೆಲ್‌ಫೋನ್ ರಿಪೇರಿ ತರಬೇತಿ: ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನ Free 31-day mobile phone repair training for…

4 hours ago

ಹೊಸನಗರದಲ್ಲಿ ನಾಳೆ ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆ, ಬಹಿರಂಗ ಸಭೆ

ಹೊಸನಗರದಲ್ಲಿ ನಾಳೆ ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆ, ಬಹಿರಂಗ ಸಭೆ Farmers and agricultural workers will hold a…

4 hours ago

ಸಾಗರ: ಕಸ್ತೂರಿ ರಂಗನ್ ವರದಿ ವಿರುದ್ಧ ರೈತರ ಆಕ್ರೋಶ; ಬ್ಯಾರಿಕೇಡ್ ಕಿತ್ತೆಸೆದು ಪ್ರತಿಭಟನೆ

ಸಾಗರ: ಕಸ್ತೂರಿ ರಂಗನ್ ವರದಿ ವಿರುದ್ಧ ರೈತರ ಆಕ್ರೋಶ; ಬ್ಯಾರಿಕೇಡ್ ಕಿತ್ತೆಸೆದು ಪ್ರತಿಭಟನೆ Farmers staged a massive protest…

13 hours ago

ಇಂಡಿಯಾ ಪೋಸ್ಟ್‌ನಲ್ಲಿ 25,000ಕ್ಕೂ ಹೆಚ್ಚು ಹುದ್ದೆ: 10ನೇ ತರಗತಿ ಪಾಸಾದವರಿಗೆ ಅವಕಾಶ, ಪರೀಕ್ಷೆ ಇಲ್ಲದೆ ನೇಮಕಾತಿ

ಇಂಡಿಯಾ ಪೋಸ್ಟ್‌ನಲ್ಲಿ 25,000ಕ್ಕೂ ಹೆಚ್ಚು ಹುದ್ದೆ: 10ನೇ ತರಗತಿ ಪಾಸಾದವರಿಗೆ ಅವಕಾಶ, ಪರೀಕ್ಷೆ ಇಲ್ಲದೆ ನೇಮಕಾತಿ India Post GDS…

13 hours ago