ಶಿವಮೊಗ್ಗ : ಅಕ್ಕಿ ವಿತರಣೆ ರಾಜ್ಯ ಸರ್ಕಾರದ ಜವಾಬ್ದಾರಿ, ಎಲ್ಲಿಯಾದರೂ ಖರೀದಿ ಮಾಡಿ ಕೊಡಲಿ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರಕ್ಕೆ ಒತ್ತಾಯ ಮಾಡಿದ್ದಾರೆ.
ಅಕ್ಕಿ ವಿತರಣೆ ಗೊಂದಲ ವಿಚಾರವಾಗಿ ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ಕಿ ವಿತರಣೆ ವಿಚಾರದಲ್ಲಿ ಕಾಂಗ್ರೆಸ್ ಉದ್ದೇಶಪೂರ್ವಕವಾಗಿ ಗೊಂದಲ ಸೃಷ್ಟಿಸುತ್ತಿದೆ. ಈಗಾಗಲೇ ಕೇಂದ್ರ ಸರ್ಕಾರ 5 ಕೆಜಿ ಅಕ್ಕಿ ಉಚಿತವಾಗಿ ಕೊಡುತ್ತಿದೆ. ಹೆಚ್ಚುವರಿಯಾಗಿ ಅಕ್ಕಿ ಕೊಡಲು ಕೇಂದ್ರ ಒಪ್ಪಿರಲಿಲ್ಲ. ಅದು ರಾಜ್ಯ ಸರ್ಕಾರದ ಜವಾಬ್ದಾರಿ, ಎಲ್ಲಿಯಾದ್ರೂ ಖರೀದಿ ಮಾಡಿ ಕೊಡಲಿ ಎಂದು ಕಿಡಿಕಾರಿದರು.
ಈ ವಿಚಾರದಲ್ಲಿ ಮೋದಿ ಸರ್ಕಾರವನ್ನು ಧೂಷಣೆ ಮಾಡುವುದು ಸರಿಯಲ್ಲ ಎಂದ ಅವರು ಸದನ ಆರಂಭವಾಗುವುದರೊಳಗೆ ವಿಪಕ್ಷ ನಾಯಕನ ಆಯ್ಕೆಯಾಗಲಿದೆ. ಅದರಲ್ಲಿ ಯಾವುದೇ ವಿಶೇಷವಿಲ್ಲ ಎಂದರು.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್