ಶಿವಮೊಗ್ಗ ಜಿಲ್ಲೆಯ ಚೋರಡಿ ಸಮೀಪ ಭಾನುವಾರ ಸಂಜೆ ವಾಹನಕ್ಕೆ ಡಿಕ್ಕಿಯಾಗಿ ಜಿಂಕೆಯೊಂದು ಸಾವಿಗೀಡಾದ ಘಟನೆ ನಡೆದಿದೆ.
ಬಿ.ಹೆಚ್.ರಸ್ತೆಯ ಕುಮದ್ವತಿ ಸೇತುವೆಗೆ ಅನತಿ ದೂರದಲ್ಲಿಯೇ ಈ ಘಟನೆ ನಡೆದಿದೆ.
ಸಾಗರದಿಂದ ಶಿವಮೊಗ್ಗ ಕಡೆ ಬರುತಿದ್ದ ಇನ್ನೋವಾ ಕಾರಿಗೆ ವೇಗವಾಗಿ ರಸ್ತೆ ದಾಟುತಿದ್ದ ಗಂಡು ಜಿಂಕೆಯೊಂದು ಡಿಕ್ಕಿ ಹೊಡೆದಿದೆ. ಚಾಲಕನ ಗಮನಕ್ಕೆ ಬಾರದೆ ಏಕಾಏಕಿ ರಸ್ತೆ ದಾಟಿದ ಜಿಂಕೆ ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂ ಆಗಿದೆ. ತಲೆಗೆ ತೀವ್ರ ಪೆಟ್ಟು ಬಿದ್ದ ಜಿಂಕೆ ಸ್ಥಳದಲ್ಲಿಯೇ ಸಾವಿಗೀಡಾಗಿದೆ.
ಸ್ಥಳಕ್ಕೆ ಬಂದು ಮಹಜರು ನಡೆಸಿರುವ ಅರಣ್ಯ ಇಲಾಖೆ ಸಿಬ್ಬಂದಿ ದೂರು ದಾಖಲಿಸಿಕೊಂಡಿದ್ದಾರೆ.
 
                         
                         
                         
                         
                         
                         
                         
                         
                         
                        