ಕೇಂದ್ರ ಬಿಜೆಪಿ ಸರ್ಕಾರ ಜನಪರ ಕಾಳಜಿ ಹೊಂದಿಲ್ಲ‌ ; ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಆರೋಪ|kimmane

ಹೊಸನಗರ: ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯನ್ನು ಈಡೇರಿಸಲು ಅಕ್ಕಿ ಪೂರೈಕೆಗೆ ಕೇಂದ್ರ ಸರ್ಕಾರ ಒಲವು ತೋರದಿರುವುದು, ರಾಜ್ಯದ ಜನತೆಗೆ ಬಿಜೆಪಿ ಮಾಡುತ್ತಿರುವ ಅನ್ಯಾಯವಾಗಿದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹೇಳಿದರು.

ಅವರು ಇಲ್ಲಿನ ಗಾಂಧಿ ಮಂದಿರದಲ್ಲಿ ಶನಿವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ರಾಜ್ಯ ಸರ್ಕಾರ ಅಕ್ಕಿ ಕೇಳುತ್ತಿರುವುದು ಕಾಂಗ್ರೆಸ್ ಪಕ್ಷಕ್ಕಲ್ಲ, ಬದಲಾಗಿ ರಾಜ್ಯದ ಬಡ ಜನತೆಗೆ ಪಡಿತರ ವಿತರಣೆ ಮಾಡುವ ಉದ್ದೇಶಕ್ಕೆ ಎನ್ನುವುದನ್ನು ರಾಜ್ಯ ಬಿಜೆಪಿ ಮುಖಂಡರು ಅರಿಯಲಿ. ಇಲ್ಲಸಲ್ಲದ ಹೇಳಿಕೆ ನೀಡುತ್ತಿರುವ ಬಿಜೆಪಿ ನಾಯಕರಿಗೆ ಜನತೆಯ ಹಿತ ಬೇಕಿಲ್ಲ. ರಾಜಕಾರಣದಲ್ಲಿ ತಮ್ಮ ಹಿತ ಕಾಯ್ದುಕೊಳ್ಳುವುದೊಂದೆ ಇವರ ಉದ್ದೇಶವಾಗಿದೆ ಎಂದು ಆರೋಪಿಸಿದರು.

ಅಕ್ಕಿ ನೀಡಲು ಕೇಂದ್ರ ಒಪ್ಪದಿದ್ದಲ್ಲಿ ಅದು ದೇಶದ ಏಕತೆಗೆ ಧಕ್ಕೆ ತರಲಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಡುವೆ ಹೊಂದಾಣಿಕೆ ಇರಬೇಕು. ನಾಳೆ ಪ್ರತ್ಯೇಕ ರಾಜ್ಯದ ಪ್ರಸ್ತಾಪ ಏಳಬಹುದು. ಜನಾಂದೋಲನ ಆಗಬಹುದು. ಇದನ್ನು ಕೇಂದ್ರ ಸರ್ಕಾರ ಅರಿಯಬೇಕು. ರಾಜ್ಯದ ಸಚಿವರೊಬ್ಬರು 3 ದಿನ ದೆಹಲಿಯಲ್ಲಿ ಕಾದರೂ ಕೇಂದ್ರ ಸಚಿವರು ಭೇಟಿಗೆ ಅವಕಾಶ ನೀಡಿಲ್ಲ. ರಾಜಕೀಯ ಕಾರಣಕೋಸ್ಕರ ಕೇಂದ್ರ ಇಂತಹ ನೀತಿಯನ್ನು ಅನುಸರಿಸಿದರೆ ಅದು ಬಿಜೆಪಿಗೆ ಮಾರಕ ಆಗಲಿದೆ ಎಂದು ಹೇಳಿದರು.

ಆಶ್ವಾಸನೆ ನೀಡಿದ್ದ ಎಲ್ಲಾ ಗ್ಯಾರಂಟಿಗಳನ್ನೂ ಜಾರಿಗೆ ತರಲಾಗುವುದು. ಯಾವುದೇ ಅನುಮಾನ ಬೇಡ. ಎರಡ್ಮೂರು ತಿಂಗಳುಗಳ ಸಮಯಾವಕಾಶ ಅಗತ್ಯವಿದೆ. 9 ವರ್ಷದ ಹಿಂದೆ ಪ್ರಧಾನಿ ಮೋದಿ ಪ್ರಸ್ತಾಪಿಸಿದ್ದ ಕಪ್ಪುಹಣ ಮರಳಿ ತರುವ ಆಶ್ವಾಸನೆ ಇನ್ನೂ ಈಡೇರಿಲ್ಲ. 2 ಕೋಟಿ ಉದ್ಯೋಗ ಮರೀಚಿಕೆಯಾಗಿದೆ. ಇಲ್ಲಿ ನೋಡಿದರೆ, ಬೆಳಗಾಗುವುದರೊಳಗೆ ಆಶ್ವಾಸನೆಗಳನ್ನು ಈಡೇರಿಸಲಿ ಎಂದು ಬಿಜೆಪಿ ನಾಯಕರು ಒತ್ತಡ ಹಾಕುತ್ತಿರುವುದು ಹಾಸ್ಯಾಸ್ಪದ ಎಂದರು.

ಬಿಜೆಪಿಯವರಿಗೆ ರೈತರ, ಬಡವರ ಕಷ್ಟದ ಅರಿವಿಲ್ಲ. ಇವರ‍್ಯಾರು ರೈತ ಕುಟುಂಬದಿಂದ ಬಂದಿಲ್ಲ. ಹಸಿದವರ ಕಷ್ಟ ಇವರಿಗೇನು ಗೊತ್ತು. ಶಕ್ತಿ ಯೋಜನೆಯಡಿ ಈಗ ಮಹಿಳೆಯರು ಇಷ್ಟು ದೊಡ್ಡ ಸಂಖ್ಯೆಯಲ್ಲಿ ಉಚಿತ ಪ್ರಯಾಣವನ್ನು ಬಳಸಿಕೊಳ್ಳುತ್ತಿರುವುದು, ಇದರ ಅಗತ್ಯತೆ ಹಾಗೂ ವಾಸ್ತವ ಸಂಗತಿಯನ್ನು ಬೆಳಕಿಗೆ ತಂದಿದೆ ಎಂದು ಸರಕಾರದ ಗ್ಯಾರಂಟಿ ಯೋಜನೆಗಳನ್ನು ಸಮರ್ಥಿಸಿಕೊಂಡರು.

ಒಂದು ವೇಳೆ 10 ಕೆ.ಜಿ ಅಕ್ಕಿ ವಿತರಿಸಲು ರಾಜ್ಯ ವಿಫಲವಾದಲ್ಲಿ ಇದಕ್ಕೆ ಕೇಂದ್ರ ಸರ್ಕಾರ ಹೊಣೆ ಆಗಲಿದೆಯೇ ? ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಕೇಂದ್ರಕ್ಕೆ ಬೇಡಿಕೆ ಇಟ್ಟಿದ್ದೇವೆ. ರಾಷ್ಟ್ರಹಿತವನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಆಡಳಿತ ನಡೆಸಬೇಕು. ಒಂದು ವೇಳೆ ಕೇಂದ್ರ ಅಕ್ಕಿ ನೀಡದಿದ್ದರೂ, ಪರ್ಯಾಯ ವ್ಯವಸ್ಥೆ ಮಾಡಲಿದ್ದೇವೆ. ಕೊಂಚ ಕಾಲಾವಕಾಶ ಬೇಕಾಗಬಹುದು ಎಂದರು. ಬಿಜೆಪಿಯ ಇಂತಹ ಜನವಿರೋಧ ಧೋರಣೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸುವುದು ಅನಿವಾರ‍್ಯವಾಗಲಿದೆ ಎಂದರು.

‘ಗ್ಯಾರಂಟಿ ವಿಳಂಬ’ ಹಿನ್ನಲೆಯಲ್ಲಿ ರಾಜ್ಯದ ಜನರನ್ನು ದಿಕ್ಕು ತಪ್ಪಿಸುತ್ತಿರುವ ಬಿಜೆಪಿ ಕ್ರಮವನ್ನು ವಿರೋಧಿಸಿ, ಕೇಂದ್ರ ಸರ್ಕಾರ ನೀಡಿದ್ದ ಭರವಸೆಗಳನ್ನು ಕೂಡಲೇ ಜಾರಿಗೊಳಿಸುವಂತೆ ಒತ್ತಾಯಿಸಿ ಜುಲೈ 8ರಂದು ತೀರ್ಥಹಳ್ಳಿಯಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಈ ಸಭೆಯಲ್ಲಿ ಸಚಿವ ಮಧು ಬಂಗಾರಪ್ಪ ಸೇರಿದಂತೆ ಪಕ್ಷದ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ ಎಂದರು.

ಗೋಷ್ಠಿಯಲ್ಲಿ ಪಕ್ಷದ ಪ್ರಮುಖರಾದ ಬಿ.ಜಿ.ನಾಗರಾಜ್, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯರಾದ ಚಂದ್ರಮೌಳಿಗೌಡ, ಎರಗಿ ಉಮೇಶ್, ಶ್ರೀನಿವಾಸ್ ಕಾಮತ್, ಮಹಾಬಲರಾವ್, ಅಶ್ವಿನಿಕುಮಾರ್, ಕರುಣಾಕರ ಶೆಟ್ಟಿ, ಹಾಲಗದ್ದೆ ಉಮೇಶ, ಬೃಂದಾವನ ಪ್ರವೀಣ್, ಜಯನಗರ ಗುರು, ಎಂ.ಪಿ ಸುರೇಶ್, ಪ್ರಭಾಕರ್, ಹರಿದ್ರಾವತಿ ಅಶೋಕ ಗೌಡ, ಮತ್ತಿತರರು ಇದ್ದರು.

________________________________________________

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ

ರಿಪ್ಪನ್‌ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ “ಕೊಟ್ಟ ಮಾತಿನಂತೆ ವಿದ್ಯುತ್ ದೀಪ ಅಳವಡಿಸಿದ್ದೇನೆ” —…

16 hours ago

ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ

ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ Ripponpete celebrates the 59th annual Ganapati festival with…

18 hours ago

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

2 days ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

2 days ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

2 days ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

3 days ago