ಶಿವಮೊಗ್ಗ ಹೊರವಲಯದಲ್ಲಿ ರಸ್ತೆ ಅಪಘಾತ ಸಂಭವಿಸಿ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ.
 ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರನ್ನ ಚಲಾಯಿಸಿಕೊಂಡು ಬಂದ ವ್ಯಕ್ತಿ ಸಾವನ್ನಪ್ಪಿದ್ದಾನೆ.ಸೋಮವಾರ ಸಂಜೆ ಸುಮಾರು 4-45 ರ ವೇಳೆಗೆ ಶಿವಮೊಗ್ಗದಿಂದ ಹೊನ್ನಾಳಿ ತಾಲೂಕಿನ ಸುಂಕದಕಟ್ಟೆ ಗ್ರಾಮಕ್ಕೆ ಕಿಯಾ ಕಾರಿನಲ್ಲಿ ಏಕಾಂಗಿಯಾಗಿ ಚಲಾಯಿಸಿಕೊಂಡು ಬರುತ್ತಿದ್ದ ಶರತ್ ಮರಕ್ಕೆ ಡಿಕ್ಕಿ ಹೊಡೆದಿದ್ದಾನೆ.
ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರು ನುಜ್ಜುಗುಜ್ಜಾಗಿದೆ. 29 ವರ್ಷದ ಯುವಕ ಶರತ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.
ಘಟನೆ ಶಿವಮೊಗ್ಗ ಗ್ರಾಮಾಂತರ ಪೊಲೀಸ್ಠಾಣ ವ್ಯಾಪ್ತಿಯಲ್ಲಿ ನಡೆದಿದೆ. ಸ್ಥಳಕ್ಕೆ ಪೊಲೀಸರು ಧಾವಿಸಿದ್ದಾರೆ. ಘಟನೆ ತಾಲೂಕಿನ ಹೊಳೆಹಟ್ಟಿ ಗ್ರಾಮದಲ್ಲಿ ನಡೆದಿದೆ.
 
                         
                         
                         
                         
                         
                         
                         
                         
                         
                        