Headlines

ತೀರ್ಥಹಳ್ಳಿ : ಅಶ್ಲೀಲ ವೀಡಿಯೋ ವೈರಲ್ ಪ್ರಕರಣ – ಯುವಕನ ಬಂಧನ|Arrested

ತೀರ್ಥಹಳ್ಳಿ : ಹಲವು ಯುವತಿಯರ ಜೊತೆಗೆ ಸಲುಗೆಯಿಂದ ಇದ್ದು, ವಿಡಿಯೋಗಳನ್ನು ರೆಕಾರ್ಡ್‌ ಮಾಡಿ ವೈರಲ್‌ ಮಾಡಿದ ಆರೋಪ ಸಂಬಂಧ ಯುವಕನ ವಿರುದ್ಧ ಪ್ರಕರಣ ದಾಖಲಾಗುತ್ತಿದೆ. ಈ ಸಂಬಂಧ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ಸ್ಪಷ್ಟನೆ ನೀಡಿದ್ದಾರೆ.

ತೀರ್ಥಹಳ್ಳಿಯ ಎಬಿವಿಪಿ ಸಂಘಟನೆಯ ನಾಯಕ ಕೆಲವು ಯುವತಿಯರ ಜೊತೆಗೆ ಸಲುಗೆಯಿಂದ ಇರುವ ವಿಡಿಯೋಗಳು ವೈರಲ್‌ ಆಗಿತ್ತು. ಇದರ ಬೆನ್ನಿಗೆ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಜಿಲ್ಲಾ ರಕ್ಷಣಾಧಿಕಾರಿ ವಾಟ್ಸಪ್‌ ಮೂಲಕ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದಾರೆ.

ಸಾಮಾಜಿಕ ಜಾಲತಾಣ ಬಳಕೆದಾರರಿಗೆ ಖಾಕಿ ವಾರ್ನಿಂಗ್‌

ವಿಡಿಯೋ ವೈರಲ್‌ ಬೆನ್ನಿಗೆ ಶಿವಮೊಗ್ಗದ ಸಿಇಎನ್‌ ಪೊಲೀಸ್‌ ಠಾಣೆ ಎಚ್ಚರಿಕೆ ಸಂದೇಶ ಪ್ರಕಟಿಸಿದೆ. ಅಶ್ಲೀಲ ಫೋಟೊ, ವಿಡಿಯೋಗಳನ್ನು ವಾಟ್ಸಪ್‌ ಮತ್ತು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡುತ್ತಿರುವುದು ಗೊತ್ತಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಈ ರೀತಿ ಷೇರ್‌ ಮಾಡುವುದು ಮತ್ತು ಸ್ಟೋರ್‌ ಮಾಡುವುದು ಮಾಹಿತಿ ತಂತ್ರಜ್ಞಾನ ಕಾಯ್ದೆ 67 (E) ಅಡಿ ಶಿಕ್ಷಾರ್ಹ ಅಪರಾಧ. ಆರೋಪ ಸಾಬೀತಾದರೆ 5 ವರ್ಷದವರೆಗೆ ಜೈಲು ಮತ್ತು ದಂಡ ವಿಧಿಸಲಾಗುತ್ತದೆ ಎಂದು ಎಚ್ಚರಿಸಲಾಗಿದೆ. ಈ ಕುರಿತು ಗ್ರೂಪ್‌ ಅಡ್ಮಿನ್‌ಗಳು ಕೂಡ ಎಚ್ಚರ ವಹಿಸಬೇಕು ಎಂದು ಸೂಚಿಸಲಾಗಿದೆ.

About The Author

Leave a Reply

Your email address will not be published. Required fields are marked *