w
Headlines
Home » ಬಸ್ಸು ಮತ್ತು ಕಾರಿನ ನಡೆವೆ ಭೀಕರ ಅಪಘಾತ – ಓರ್ವ ಗಂಭೀರ|accident

ಬಸ್ಸು ಮತ್ತು ಕಾರಿನ ನಡೆವೆ ಭೀಕರ ಅಪಘಾತ – ಓರ್ವ ಗಂಭೀರ|accident

ಬಸ್ಸಿಗೆ ಡಿಕ್ಕಿ ಹೊಡೆದ ಕಾರು – ಒಬ್ಬರಿಗೆ ಗಂಭೀರ ಗಾಯ
 

ಶಿವಮೊಗ್ಗ : ಗಾಜನೂರು ಸಮೀಪ ಕಾರು ಮತ್ತು ಬಸ್‌ ಮುಖಾಮುಖಿ ಡಿಕ್ಕಿಯಾಗಿವೆ. ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆಗೆ ತೆರಳುತ್ತಿದ್ದ ಕಾರು, ತೀರ್ಥಹಳ್ಳಿಯಿಂದ ಶಿವಮೊಗ್ಗ ಕಡೆಗೆ ಬರುತ್ತಿದ್ದ ಖಾಸಗಿ ಬಸ್‌ ಮಧ್ಯೆ ಅಪಘಾತವಾಗಿದೆ.

ಗಾಜನೂರಿನ ಮೊರಾರ್ಜಿ ಶಾಲೆ ಬಳಿ ಓವರ್‌ ಟೇಕ್‌ ಮಾಡುವಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಎದುರಿನಿಂದ ಬರುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದಿದೆ ಎಂದು ಆರೋಪಿಸಲಾಗಿದೆ.

ಕಾರಿನಲ್ಲಿದ್ದ ನಾಲ್ವರ ಪೈಕಿ ಒಬ್ಬರಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದೆ. ಮೂವರಿಗೆ ಸಣ್ಣಪುಟ್ಟ ಗಾಯವಾಗಿದೆ. ಎಲ್ಲರನ್ನು ಶಿವಮೊಗ್ಗದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ವರದಿ : ಅಕ್ಷಯ್ ಕುಮಾರ್

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.