ಶಿವಮೊಗ್ಗ : ವಿದ್ಯುತ್ ದರ ಹೆಚ್ಚಳ ಖಂಡಿಸಿ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಬಿಜೆಪಿಯ ಕೆಲ ಕಾರ್ಯಕರ್ತರು ಮೆಸ್ಕಾಂ ಕಚೇರಿಯ ಕಿಟಕಿ, ನೊಟೀಸ್ ಬೋರ್ಡ್ ಗಾಜುಗಳಿಗೆ ಕಲ್ಲು ತೂರಿದ್ದಾರೆ. ಇದೆ ವೇಳೆ ಪೊಲೀಸರು ಶಿವಮೊಗ್ಗ ಶಾಸಕ ಚನ್ನಬಸಪ್ಪ ಸೇರಿ ಹಲವರನ್ನು ವಶಕ್ಕೆ ಪಡೆದಿದ್ದಾರೆ.
ಶಿವಮೊಗ್ಗ ರೈಲ್ವೆ ನಿಲ್ದಾಣ ಬಳಿ ಇರುವ ಮೆಸ್ಕಾಂ ಕಚೇರಿಗೆ ಇವತ್ತು ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಿದ್ದರು. ಈ ವೇಳೆ ಕೆಲವು ಬಿಜೆಪಿ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದರು. ಇದರಿಂದ ಮೆಸ್ಕಾಂ ಕಚೇರಿ ಆವರಣದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.
ವಿದ್ಯುತ್ ದರ ಹೆಚ್ಚಳ ಖಂಡಿಸಿ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಬಿಜೆಪಿಯ ಕೆಲ ಕಾರ್ಯಕರ್ತರು ಮೆಸ್ಕಾಂ ಕಚೇರಿಯ ಕಿಟಕಿ, ನೊಟೀಸ್ ಬೋರ್ಡ್ ಗಾಜುಗಳಿಗೆ ಕಲ್ಲು ತೂರಿದ್ದಾರೆ. ಇದೆ ವೇಳೆ ಪೊಲೀಸರು ಶಿವಮೊಗ್ಗ ಶಾಸಕ ಚನ್ನಬಸಪ್ಪ ಸೇರಿ ಹಲವರನ್ನು ವಶಕ್ಕೆ ಪಡೆದಿದ್ದಾರೆ.
ಶಿವಮೊಗ್ಗ ರೈಲ್ವೆ ನಿಲ್ದಾಣ ಬಳಿ ಇರುವ ಮೆಸ್ಕಾಂ ಕಚೇರಿಗೆ ಇವತ್ತು ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಿದ್ದರು. ಈ ವೇಳೆ ಕೆಲವು ಬಿಜೆಪಿ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದರು. ಇದರಿಂದ ಮೆಸ್ಕಾಂ ಕಚೇರಿ ಆವರಣದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.
ದರ ಹೆಚ್ಚಳ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ನಗರ ಬಿಜೆಪಿ ಘಟಕದ ವತಿಯಿಂದ ಪ್ರತಿಭಟನೆ ಮತ್ತು ಮೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಲಾಯಿತು. ಮೆಸ್ಕಾಂ ಕಚೇರಿ ಮುಂಭಾಗ ಪ್ರತಿಭಟನಾ ಸಭೆ ನಡೆಸಿದ ಬಿಜೆಪಿ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಳಿ ಕಚೇರಿಗೆ ಮುತ್ತಿಗೆ ಹಾಕಲಾಯಿತು. ಈ ವೇಳೆ ಕೆಲವು ಬಿಜೆಪಿ ಕಾರ್ಯಕರ್ತರು ಮೆಸ್ಕಾಂ ಕಚೇರಿಯ ಕಿಟಕಿಗೆ ಕಲ್ಲು ತೂರಿದರು,ಇನ್ನು ಕೆಲವು ಕಾರ್ಯಕರ್ತರು ಕಚೇರಿ ಒಳಗೆ ನುಗ್ಗಿ ನೊಟೀಸ್ ಬೋರ್ಡ್‌ನ ಗಾಜು ಒಡೆದಿದ್ದಾರೆ
ಬಿಜೆಪಿ ಕಾರ್ಯಕರ್ತರ ಮುತ್ತಿಗೆ ಹಿನ್ನಲೆ ಪೊಲೀಸರು ಬ್ಯಾರಿಕೇಡ್ ಹಾಕಿ ಬಂದೋಬಸ್ತ್ ಮಾಡಿದ್ದರು. ಆದರೂ ಬಿಜೆಪಿ ಕಾರ್ಯಕರ್ತರು ಪೊಲೀಸರನ್ನು ತಳ್ಳಿ ಕಚೇರಿ ಅವರಣದೊಳಗೆ ನುಗ್ಗಿ, ಕಲ್ಲು ತೂರಾಟ ನಡೆಸಿದರು. ಈ ವೇಳೆ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆಯಲು ಮುಂದಾದರು. ಆಗ ನೂಕಾಟ, ತಳ್ಳಾಟ ಉಂಟಾಯಿತು. ಇದರಿಂದ ಮೆಸ್ಕಾಂ ಕಚೇರಿ ಆವರಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಯಿತು.
ಇದೆ ವೇಳೆ ಶಾಸಕ ಎಸ್.ಎನ್.ಚನ್ನಬಸಪ್ಪ, ಮೇಯರ್ ಶಿವಕುಮಾರ್ ಸೇರಿ ಹಲವರನ್ನು ಪೊಲೀಸರು ವಶಕ್ಕೆ ಪಡೆದರು. ಪೊಲೀಸ್ ವ್ಯಾನಿನಲ್ಲಿ ಎಲ್ಲರನ್ನು ಕರೆದೊಯ್ಯುವ ವೇಳೆ ಬಿಜೆಪಿ ಕಾರ್ಯಕರ್ತರು ಪೊಲೀಸ್ ವ್ಯಾನ್‌ಗೆ ಅಡ್ಡಲಾಗಿ ಕುಳಿತು ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತೆಯರು ರಸ್ತೆಯಲ್ಲಿ ಕೆಎಸ್‌ಅರ್‌ಟಿಸಿ ಬಸ್ ಅಡ್ಡಗಟ್ಟಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
