ಮೆಸ್ಕಾಂ ಕಛೇರಿ ಮೇಲೆ ಬಿಜೆಪಿ‌ ಕಾರ್ಯಕರ್ತರಿಂದ ಕಲ್ಲು ತೂರಾಟ- ಶಾಸಕ ಸೇರಿದಂತೆ ಹಲವರು ವಶಕ್ಕೆ|Mescom

ಶಿವಮೊಗ್ಗ : ವಿದ್ಯುತ್‌ ದರ ಹೆಚ್ಚಳ ಖಂಡಿಸಿ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಬಿಜೆಪಿಯ ಕೆಲ ಕಾರ್ಯಕರ್ತರು ಮೆಸ್ಕಾಂ ಕಚೇರಿಯ ಕಿಟಕಿ, ನೊಟೀಸ್‌ ಬೋರ್ಡ್‌ ಗಾಜುಗಳಿಗೆ ಕಲ್ಲು ತೂರಿದ್ದಾರೆ. ಇದೆ ವೇಳೆ ಪೊಲೀಸರು ಶಿವಮೊಗ್ಗ ಶಾಸಕ ಚನ್ನಬಸಪ್ಪ ಸೇರಿ ಹಲವರನ್ನು ವಶಕ್ಕೆ ಪಡೆದಿದ್ದಾರೆ.

ಶಿವಮೊಗ್ಗ ರೈಲ್ವೆ ನಿಲ್ದಾಣ ಬಳಿ ಇರುವ ಮೆಸ್ಕಾಂ ಕಚೇರಿಗೆ ಇವತ್ತು ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಿದ್ದರು. ಈ ವೇಳೆ ಕೆಲವು ಬಿಜೆಪಿ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದರು. ಇದರಿಂದ ಮೆಸ್ಕಾಂ ಕಚೇರಿ ಆವರಣದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.
ವಿದ್ಯುತ್‌ ದರ ಹೆಚ್ಚಳ ಖಂಡಿಸಿ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಬಿಜೆಪಿಯ ಕೆಲ ಕಾರ್ಯಕರ್ತರು ಮೆಸ್ಕಾಂ ಕಚೇರಿಯ ಕಿಟಕಿ, ನೊಟೀಸ್‌ ಬೋರ್ಡ್‌ ಗಾಜುಗಳಿಗೆ ಕಲ್ಲು ತೂರಿದ್ದಾರೆ. ಇದೆ ವೇಳೆ ಪೊಲೀಸರು ಶಿವಮೊಗ್ಗ ಶಾಸಕ ಚನ್ನಬಸಪ್ಪ ಸೇರಿ ಹಲವರನ್ನು ವಶಕ್ಕೆ ಪಡೆದಿದ್ದಾರೆ.

ಶಿವಮೊಗ್ಗ ರೈಲ್ವೆ ನಿಲ್ದಾಣ ಬಳಿ ಇರುವ ಮೆಸ್ಕಾಂ ಕಚೇರಿಗೆ ಇವತ್ತು ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಿದ್ದರು. ಈ ವೇಳೆ ಕೆಲವು ಬಿಜೆಪಿ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದರು. ಇದರಿಂದ ಮೆಸ್ಕಾಂ ಕಚೇರಿ ಆವರಣದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ದರ ಹೆಚ್ಚಳ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ನಗರ ಬಿಜೆಪಿ ಘಟಕದ ವತಿಯಿಂದ ಪ್ರತಿಭಟನೆ ಮತ್ತು ಮೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಲಾಯಿತು. ಮೆಸ್ಕಾಂ ಕಚೇರಿ ಮುಂಭಾಗ ಪ್ರತಿಭಟನಾ ಸಭೆ ನಡೆಸಿದ ಬಿಜೆಪಿ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಳಿ ಕಚೇರಿಗೆ ಮುತ್ತಿಗೆ ಹಾಕಲಾಯಿತು. ಈ ವೇಳೆ ಕೆಲವು ಬಿಜೆಪಿ ಕಾರ್ಯಕರ್ತರು ಮೆಸ್ಕಾಂ ಕಚೇರಿಯ ಕಿಟಕಿಗೆ ಕಲ್ಲು ತೂರಿದರು,ಇನ್ನು ಕೆಲವು ಕಾರ್ಯಕರ್ತರು ಕಚೇರಿ ಒಳಗೆ ನುಗ್ಗಿ ನೊಟೀಸ್‌ ಬೋರ್ಡ್‌ನ ಗಾಜು ಒಡೆದಿದ್ದಾರೆ

ಬಿಜೆಪಿ ಕಾರ್ಯಕರ್ತರ ಮುತ್ತಿಗೆ ಹಿನ್ನಲೆ ಪೊಲೀಸರು ಬ್ಯಾರಿಕೇಡ್‌ ಹಾಕಿ ಬಂದೋಬಸ್ತ್‌ ಮಾಡಿದ್ದರು. ಆದರೂ ಬಿಜೆಪಿ ಕಾರ್ಯಕರ್ತರು ಪೊಲೀಸರನ್ನು ತಳ್ಳಿ ಕಚೇರಿ ಅವರಣದೊಳಗೆ ನುಗ್ಗಿ, ಕಲ್ಲು ತೂರಾಟ ನಡೆಸಿದರು. ಈ ವೇಳೆ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆಯಲು ಮುಂದಾದರು. ಆಗ ನೂಕಾಟ, ತಳ್ಳಾಟ ಉಂಟಾಯಿತು. ಇದರಿಂದ ಮೆಸ್ಕಾಂ ಕಚೇರಿ ಆವರಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಯಿತು.

ಇದೆ ವೇಳೆ ಶಾಸಕ ಎಸ್.ಎನ್.ಚನ್ನಬಸಪ್ಪ, ಮೇಯರ್‌ ಶಿವಕುಮಾರ್‌ ಸೇರಿ ಹಲವರನ್ನು ಪೊಲೀಸರು ವಶಕ್ಕೆ ಪಡೆದರು. ಪೊಲೀಸ್‌ ವ್ಯಾನಿನಲ್ಲಿ ಎಲ್ಲರನ್ನು ಕರೆದೊಯ್ಯುವ ವೇಳೆ ಬಿಜೆಪಿ ಕಾರ್ಯಕರ್ತರು ಪೊಲೀಸ್‌ ವ್ಯಾನ್‌ಗೆ ಅಡ್ಡಲಾಗಿ ಕುಳಿತು ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತೆಯರು ರಸ್ತೆಯಲ್ಲಿ ಕೆಎಸ್‌ಅರ್‌ಟಿಸಿ ಬಸ್‌ ಅಡ್ಡಗಟ್ಟಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ವಿದ್ಯಾರ್ಥಿನಿಯನ್ನು ಬೆದರಿಸಿ 15 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾದ ದುಷ್ಕರ್ಮಿ

ವಿದ್ಯಾರ್ಥಿನಿಯನ್ನು ಬೆದರಿಸಿ 15 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾದ ದುಷ್ಕರ್ಮಿ College student threatened and robbed of…

15 hours ago

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ A 9-foot-long python was safely rescued from behind a…

15 hours ago

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ – ಕೆರೆಗೆ ಹಾರಿ ಸಾಗರದ ಯುವತಿ

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…

21 hours ago

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಮೂವರು ಆರೋಪಿಗಳು ಪೊಲೀಸರ ಬಲೆಗೆ

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a…

2 days ago

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ Six people were arrested for…

2 days ago

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ South Western Railway extends temporary stoppages…

2 days ago