Headlines

ರಿಪ್ಪನ್‌ಪೇಟೆಯ ನೂತನ ಪಿಎಸ್ ಐ ಆಗಿ ಪ್ರವೀಣ್ ಎಸ್ ಪಿ – ಭಾರತೀಯ ಸೇನೆಯಲ್ಲಿ 17 ವರ್ಷ ಸೇವೆ ಸಲ್ಲಿಸಿದ್ದ ಇವರು ಎಲ್ಲಿನವರೂ ಗೊತ್ತಾ…????

ರಿಪ್ಪನಪೇಟೆ : ರಾಜ್ಯ ಸರ್ಕಾರದ ಸಾಮಾನ್ಯ ವರ್ಗಾವಣೆ ಅನ್ವಯ ರಾಜ್ಯಾದ್ಯಂತ 50 ಪಿಎಸ್ಐ ಗಳನ್ನು ವರ್ಗಾವಣೆ ಗೊಳಿಸಿ ಆದೇಶ ಹೊರಡಿಸಿದೆ

ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ನೂತನವಾಗಿ ವರ್ಗಾವಣೆಯಾಗಿರುವ ಪ್ರವೀಣ್ ಎಸ್ ಪಿ ರವರು ಮೂಲತಃ ಶಿವಮೊಗ್ಗ ಜಿಲ್ಲೆಯ ಹೊಸನಗರ ಪಟ್ಟಣದ ಮಾರಿಗುಡ್ಡ ನಿವಾಸಿಯಾಗಿದ್ದಾರೆ.

.         -ಪ್ರವೀಣ್ ಎಸ್ ಪಿ


ಭಾರತೀಯ ಸೇನೆಯಲ್ಲಿ 17 ವರ್ಷಗಳ ಕಾಲ ಸುಧೀರ್ಘವಾಗಿ ಕಾರ್ಯನಿರ್ವಹಿಸಿ ಸ್ವಯಂ ನಿವೃತ್ತಿಗೊಂಡ ಇವರು ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಪಿಎಸ್ ಐ ಆಗಿ ಕಾರ್ಯ ನಿರ್ವಹಿಸುತಿದ್ದಾರೆ.

ಪ್ರಸ್ತುತ ದಾವಣಗೆರೆ ಜಿಲ್ಲೆಯ ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರವೀಣ್ ಎಸ್ ಪಿ ರವರು ಇದೀಗ ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದು ಇನ್ನೆರಡು ದಿನಗಳಲ್ಲಿ ಅಧಿಕಾರವನ್ನು ಸ್ವೀಕರಿಸಲಿದ್ದಾರೆ.

ರಿಪ್ಪನ್‌ಪೇಟೆಯಲ್ಲಿ ಕಾರ್ಯ ನಿರ್ವಹಿಸುತಿದ್ದ ಪಿಎಸ್ಐ ಶಿವಾನಂದ ಕೋಳಿ ರವರನ್ನು ಹೊಸನಗರ ಪೊಲೀಸ್ ಠಾಣೆಗೆ ಪಿಎಸ್ ಐ ಆಗಿ ವರ್ಗಾವಣೆಯಾಗಿದ್ದಾರೆ.

ರಿಪ್ಪನ್‌ಪೇಟೆಯಲ್ಲಿ ಸುಮಾರು ಎರಡು ವರ್ಷಗಳಿಂದ ಕಾರ್ಯ ನಿರ್ವಹಿಸಿರುವ ಪಿಎಸ್ ಐ ಶಿವಾನಂದ ಕೆ ರವರು ಪಟ್ಟಣದಲ್ಲಿ‌ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಹಾಗೂ ರಸ್ತೆ ಸುರಕ್ಷತೆಯಲ್ಲಿ ಯಶಸ್ವಿಯಾಗಿದ್ದರು. ಅದರಲ್ಲೂ ಕಳೆದ ಕೆಲವು ದಶಕಗಳಿಂದ ಪಟ್ಟಣದ ವಿನಾಯಕ ವೃತ್ತ ಹಾಗೂ ನಾಲ್ಕು ರಸ್ತೆಗಳಲ್ಲಿದ್ದ ಟ್ರಾಫಿಕ್ ಸಮಸ್ಯೆಯನ್ನು ಬಗೆಹರಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ.

ಸರಳ ಸಜ್ಜನಿಕೆಯ ಮೂಲಕ ತನ್ನ ಕಾರ್ಯಾವಧಿಯಲ್ಲಿ ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಿದ ಶಿವಾನಂದ್ ಕೆ ಜನಮಾನಸದಲ್ಲಿ ಉಳಿದುಕೊಂಡಿದ್ದಾರೆ.

Leave a Reply

Your email address will not be published. Required fields are marked *