POSTMAN NEWS

ನೈಜ ಸುದ್ದಿ ನೇರ ಬಿತ್ತರ..

ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ಇಬ್ಬರು ಗಾಯಾಳು ಮೆಗ್ಗಾನ್ ಗೆ ರವಾನೆ|accident

ರಿಪ್ಪನ್‌ಪೇಟೆ : ಇಲ್ಲಿನ ತೀರ್ಥಹಳ್ಳಿ ರಸ್ತೆಯಲ್ಲಿರುವ ಗುಡ್ ಶೆಫರ್ಡ್ ಚರ್ಚ್ ಮುಂಭಾಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಕಾಂಪೌಂಡ್ ಗೆ ಡಿಕ್ಕಿಯಾಗಿ ಪಲ್ಟಿಯಾಗಿರುವ ಘಟನೆ ನಡೆದಿದೆ.


ರಿಪ್ಪನ್‌ಪೇಟೆ ಕಡೆಯಿಂದ ಕೋಣಂದೂರು ಕಡೆಗೆ ತೆರಳುತಿದ್ದ ಮಾರುತಿ ಜೆನ್ ಕಾರು ಸೋಮವಾರ ರಾತ್ರಿ 11.00 ಗಂಟೆಯ ಸಮಯದಲ್ಲಿ ಚರ್ಚ್ ಮುಂಭಾಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ಮರದ ದಿಬ್ಬಗಳಿಗೆ ಡಿಕ್ಕಿಯಾಗಿ ನಂತರ ಕಾಂಪೌಂಡ್ ಗೆ ಡಿಕ್ಕಿಯಾಗಿ ಮೂರು ಪಲ್ಟಿಯಾಗಿದೆ.ಘಟನೆಯಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.ಕಾರಿನಲ್ಲಿ ಇಬ್ಬರು ಪ್ರಯಾಣಿಸುತಿದ್ದರು ಎನ್ನಲಾಗುತ್ತಿದೆ.


ಪಟ್ಟಣದಲ್ಲಿ ಜೆಸಿಬಿ ಚಾಲಕನಾಗಿರುವ ಹಾಸನ ಮೂಲದ ವ್ಯಕ್ತಿ ಕಾರು ಚಲಾಯಿಸುತಿದ್ದರು ಎನ್ನಲಾಗುತಿದ್ದು, ಅವರಿಗೆ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ ಮೆಗ್ಗಾನ್ ಗೆ ರವಾನಿಸಲಾಗಿದೆ.


ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.