ರಿಪ್ಪನ್‌ಪೇಟೆ : ಜನಪ್ರತಿನಿಧಿ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಅನಾಥವಾಗಿರುವ ಕೈಗಾರಿಕಾ ವಸಾಹತು ಪ್ರದೇಶದ ಜಾಗ|RPT

ರಿಪ್ಪನ್‌ಪೇಟೆ : ಜನಪ್ರತಿನಿಧಿ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಅನಾಥವಾಗಿರುವ ಕೈಗಾರಿಕಾ ವಸಾಹತು ಪ್ರದೇಶದ ಜಾಗ


ರಿಪ್ಪನ್‌ಪೇಟೆ : 2013 ರಲ್ಲಿ ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಕಂದಾಯ ಸಚಿವರಾಗಿದ್ದ ಮಾಜಿ ಸಚಿವ ಕಾಗೋಡು ತಮ್ಮಪ್ಪನವರ ಕನಸಿನ ಹಲವು ಅಭಿವೃದ್ದಿ ಕಾರ್ಯಕ್ರಮಗಳಲ್ಲಿ ಒಂದಾಗಿದ್ದ ಸ್ವಾವಲಂಭಿ ಉದ್ಯೋಗಕ್ಕೆ ಉತ್ತೇಜನ ನೀಡುವ ಮಹಾತ್ವಾಕಾಂಕ್ಷಿ ಯೋಜನೆಯಡಿ ಸಾಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೆರೆಹಳ್ಳಿ ಹೋಬಳಿಯ ಕೆರೆಹಳ್ಳಿ ಗ್ರಾಮದ ಗ್ರಾಮ ಠಾಣಾದ 4 ಎಕರೆ ಜಾಗವನ್ನು ಮಂಜೂರು ಮಾಡಿಸುವ ಮೂಲಕ “ಕೈಗಾರಿಕಾ ವಸಾಹತು’’ಸ್ವಂತ ಸಣ್ಣ ಕೈಗಾರಿಕೆ ನಡೆಸುವವರಿಗೆ ಪ್ರತ್ಯೇಕ ಜಾಗ ಕೊಡುವ ವ್ಯವಸ್ಥೆ ಇದ್ದರೂ ಕೂಡಾ ಜನಪ್ರತಿನಿಧಿಗಳ ಮತ್ತು ಅಧಿಕಾರಿಗಳ ನಿರ್ಲಕ್ಷö್ಯದಿಂದಾಗಿ ಈ ಪ್ರದೇಶ ಅನಾಥವಾಗಿಯೇ ಉಳಿಯುವಂತಾಗಿದೆ.


ರಿಪ್ಪನ್‌ಪೇಟೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕೆರೆಹಳ್ಳಿ ಗ್ರಾಮದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ಬಳಿಯಲ್ಲಿರುವ ಈ ಜಾಗದಲ್ಲಿ ಕೈಗಾರಿಕೆ ಆರಂಭಿಸಲು ಎಲ್ಲ ಮೂಲಭೂತ ಸೌಲಭ್ಯಗಳಾದ ಸಿಮೆಂಟ್ ಕಾಂಕ್ರೇಟ್ ರಸ್ತೆ ಕಟ್ಟಡ ನಿವೇಶನದ ವಿನ್ಯಾಸದ ನೀಲ ನಕ್ಷೆಯೊಂದಿಗೆ ಕುಡಿಯವ ನೀರು ಮತ್ತು ಇತರ ಸೌಲಭ್ಯಗಳನ್ನು ನಿರ್ಮಿಸಲಾಗಿದ್ದರೂ ಕೂಡಾ ಈ ಜಾಗದಲ್ಲಿ ಕೈಗಾರಿಕೆ ಅರಂಭಿಸಲು ಹಿಂದೇಟು ಹಾಕುತ್ತಿರುವ ಮರ್ಮ ತಿಳಿಯದಾಗಿದೆ.

ಕೆ.ಎಸ್.ಎಸ್.ಐ.ಡಿ.ಸಿ.ಜಿಲ್ಲಾ ಸಣ್ಣ ಕೈಗಾರಿಕೆಗಳ ಅಭಿವೃದ್ದಿ ನಿಗಮ ನಿಯಮಿತದವರ ರಿಪ್ಪನ್‌ಪೇಟೆಯಲ್ಲಿ ಸಣ್ಣ ಕೈಗಾರಿಕೆ ಅರಂಭಿಸಲು ಬೇಕಾದ ಎಲ್ಲ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದರೂ ಕೂಡಾ ಇಲಾಖೆಯ ದುಬಾರಿ ಹಣ ಸಂದಾಯ ಮಾಡಿ ನಿವೇಶನವನ್ನು ಪಡೆಯಲು ಕಷ್ಟಕರವಾಗಿದೆ ಎಂಬ ಹಿನ್ನೆಲೆಯಲ್ಲಿ ಸ್ವಉದ್ಯೋಗಿಗಳು ನಿವೇಶನ ಮಂಜೂರಾತಿ ಟೆಂಡರ್‌ಗೆ ಅರ್ಜಿ ಸಲ್ಲಿಸಲು ಹಿಂದೆ ಮುಂದೆ ನೋಡುತ್ತಿದ್ದಾರೆ.ಒಟ್ಟಾರೆಯಾಗಿ ಸರ್ಕಾರದ ಅವೈಜ್ಞಾನಿಕ ನೀತಿಯಿಂದಾಗಿ ಗ್ರಾಮೀಣ ಪ್ರದೇಶದ ಸ್ವಉದ್ಯೋಗಿ ಕೈಗಾರಿಕೋದ್ಯಮಿಗಳು ಸರ್ಕಾರದ ಯೋಜನೆಯಿಂದ ದೂರ ಉಳಿಯುವಂತಾಗಿದೆ ಎಂದು ಹಲವರು ತಮ್ಮ ಅಸಮದಾನವನ್ನು ವ್ಯಕ್ತ ಪಡಿಸಿದರು.

ಈ ಸುಸಜ್ಜಿತ ಜಾಗದಲ್ಲಿನ ನಿವೇಶನ ವಿನ್ಯಾಸಕ್ಕೆ ರಸ್ತೆ ನೀರು ವಿದ್ಯುತ್ ಸೌಲಭ್ಯವನ್ನು ಕಲ್ಪಿಸಲಾಗಿದ್ದರೂ ಕೂಡಾ ಗಿಡಗಂಟಿ ಬೆಳದು ಈ ಜಾಗ ಗೊತ್ತಾಗದಂತಾಗಿದೆ.ಒಟ್ಟಾರೆ ಹೀಗೆ ಮುಂದುವರಿದರೆ ಒಂದಲ್ಲಾ ಒಂದು ದಿನ ಈ ಪ್ರದೇಶ ಖಾಸಗಿಯವರ ಪಾಲಾಗುವುದರಲ್ಲಿ ಯಾವುದೇ ಸಂಶಯವಿಲ್ಲ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

13 hours ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

13 hours ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

13 hours ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

18 hours ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

20 hours ago

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

2 days ago