ರಿಪ್ಪನ್‌ಪೇಟೆ : ದನದ ಕೊಟ್ಟಿಗೆಯ ಹಂಚು ಕಿತ್ತುಹಾಕಿದ್ದನ್ನ ಪ್ರಶ್ನಿಸಿದ್ದಕ್ಕೆ ಈ ಮನೆಯಲ್ಲಿ ಎರಡು ಕೊಲೆಯಾಗುತ್ತದೆ ಎಂದು ಜೀವ ಬೆದರಿಕೆ ಹಾಕಿದ ಘಟನೆ ಇಲ್ಲಿನ ಸಮೀಪದ ಬೆನವಳ್ಳಿ ಗ್ರಾಮದಲ್ಲಿ ನಡೆದಿದೆ.
ನಡೆದಿದ್ದೇನು?
ಬೆನವಳ್ಳಿ ಗ್ರಾಮದ ನಿವಾಸಿ ನಾಗರಾಜ್ ಎಂಬುವವರಿಗೆ ಸೇರಿದ ದನದ ಕೊಟ್ಟಿಗೆಯ ಹಂಚನ್ನು ಚಂದ್ರಪ್ರಸಾದ್ ಎಂಬವರು ಏಕಾಏಕಿ ಕಿತ್ತುಹಾಕಿದ್ದರು.
ಈ ಹಿನ್ನೆಲೆಯಲ್ಲಿ ಅದನ್ನು ಸಂತ್ರಸ್ತರು ಪ್ರಶ್ನಿಸಿದ್ದಾರೆ. ಈ ವೇಳೇ ಅವರನ್ನು ನಿಂದಿಸಿದ್ದಷ್ಟೆ ಅಲ್ಲದೆ, ಈ ಮನೆಯಲ್ಲಿ ಎರಡು ಕೊಲೆಯಾಗಲಿದೆ ಎಂದು ಜೀವ ಬೆದರಿಕೆ ಹಾಕಿದ್ದಾರೆ ಎಂದು ಸಂತ್ರಸ್ತರು ಆರೋಪಿಸಿದ್ದಾರೆ.
ಸದ್ಯ ಪ್ರಕರಣ ಸಂಬಂಧ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ IPC 1860 (U/s-448,427,504,506,34) ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್