POSTMAN NEWS

ನೈಜ ಸುದ್ದಿ ನೇರ ಬಿತ್ತರ..

ರಿಪ್ಪನ್‌ಪೇಟೆ : ನ್ಯೂ ಚಾಣಕ್ಯ ಬಾರ್ ಹಿಂಭಾಗದಲ್ಲಿ ವ್ಯಕ್ತಿಯ ಶವ ಪತ್ತೆ|crime news

ರಿಪ್ಪನ್‌ಪೇಟೆ : ಇಲ್ಲಿನ ತೀರ್ಥಹಳ್ಳಿ ರಸ್ತೆಯ ನ್ಯೂ ಚಾಣಕ್ಯ ಬಾರ್ ಹಿಂಬಾಗದಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ.

ತೀರ್ಥಹಳ್ಳಿ ರಸ್ತೆಯ ನಿವಾಸಿ ಓಂಕೇಶ್ (52) ಮೃತಪಟ್ಟ ವ್ಯಕ್ತಿಯಾಗಿದ್ದಾರೆ.

ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿರುವ ನ್ಯೂ ಚಾಣಕ್ಯ ಬಾರ್ ಹಿಂಬಾಗದಲ್ಲಿ ಮದ್ಯವ್ಯಸನಿಯಾಗಿದ್ದ ಓಂಕೇಶ್ ಮೃತದೇಹ ಪತ್ತೆಯಾಗಿದೆ.

ಸ್ಥಳಕ್ಕೆ ಪಿಎಸ್ ಐ ಎಸ್ ಪಿ ಪ್ರವೀಣ್ ಮತ್ತು ಸಿಬ್ಬಂದಿಗಳು ಸ್ಥಳ್ಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಬಾರ್ ಮಾಲೀಕರು ಸರ್ಕಾರದ ನಿಯಮಗಳನ್ನು ಸರಿಯಾಗಿ ಪಾಲಿಸದೇ ಬಾರ್ ಹಿಂಭಾಗದಲ್ಲಿ ಮದ್ಯ ಸೇವನೆಗೆ ಅನುವು ಮಾಡಿಕೊಟ್ಟಿದ್ದು ಕೆಲವೊಂದು ಕಿಂಡಿಗಳನ್ನು ಸೃಷ್ಟಿಸಿದ್ದಾರೆ.ಈ ಕಿಂಡಿಗಳು ಮುಂಜಾನೆಯ ಕುಡುಕರಿಗೆ ಸ್ವರ್ಗದ ಬಾಗಿಲಂತೆ ಕಂಡು ಬರುತ್ತಿದೆ.ಈ ಕುಡುಕರಿಂದ ಹಿಂಭಾಗದಲ್ಲಿರುವ ಸ್ಥಳೀಯರಿಗೆ ದಿನನಿತ್ಯ ಕಿರಿಕಿರಿಯಾಗುತ್ತಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತಿದ್ದಾರೆ.

ಪಟ್ಟಣದ ಬಸ್ ನಿಲ್ದಾಣದಲ್ಲಿ ಮದ್ಯವ್ಯಸನಿಯೊಬ್ಬ ಮೃತಪಟ್ಟು ಕೇವಲ ಎರಡೇ ದಿನಗಳಲ್ಲಿ ಮತ್ತೊಂದು ಹೆಣ ಬಿದ್ದಿದೆ.ಮದ್ಯದ ದೊರೆಗಳ ಹಣದಾಹಕ್ಕೆ ಇನ್ನೆಷ್ಟು ಹೆಣ ಬೀಳಬೇಕಾಗಿದೆಯೋ…..

ಒಟ್ಟಾರೆಯಾಗಿ ಇನ್ನಾದರು ಸಂಬಂಧಪಟ್ಟವರು ಈ ಬಗ್ಗೆ ಗಮನಹರಿಸುತ್ತಾರೋ ಕಾದು ನೋಡಬೇಕಾಗಿದೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.