ರಿಪ್ಪನ್‌ಪೇಟೆ : ಸಾಲ ಭಾದೆಗೆ ತತ್ತರಿಸಿದ ರೈತ ವಿಷ ಸೇವಿಸಿ ಅತ್ಮಹತ್ಯೆ|crime news

ರಿಪ್ಪನ್‌ಪೇಟೆ : ಸಾಲ ಭಾದೆಗೆ ತತ್ತರಿಸಿ ರೈತ ವಿಷ ಸೇವಿಸಿ ಅತ್ಮಹತ್ಯೆ
ರಿಪ್ಪನ್‌ಪೇಟೆ;-ಕೆನರಾ ಬ್ಯಾಂಕ್ ಮತ್ತು ಸಹಕಾರ ಸಂಘ ಹಾಗೂ ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಸುಮಾರು 8 ಲಕ್ಷ ರೂ ಸಾಲ ಮಾಡಿ ತಿರುವಳಿ ಮಾಡಲಾಗದೇ ಮನನೊಂದು ವಿಷ ಸೇವಿಸಿ ಆತ್ಯಹತ್ಯೆಗೆ ಶರಣಾದ ಘಟನೆ ರಿಪ್ಪನ್‌ಪೇಟೆ ಠಾಣಾ ವ್ಯಾಪ್ತಿಯ ಅರಸಾಳು ಗ್ರಾಮದಲ್ಲಿ ನಡೆದಿದೆ.

ಅರಸಾಳು ಗ್ರಾಮದ ಸುರೇಶ (55) ಎಂದು ಗುರುತಿಸಲಾಗಿದ್ದು ಮೃತನಿಗೆ ಪತ್ನಿ ಓರ್ವ ಗಂಡು ಮತ್ತು ಹೆಣ್ಣು ಮಕ್ಕಳಿದ್ದಾರೆನ್ನಲಾಗಿದೆ.

ಕೆನರಾಬ್ಯಾಂಕ್ ಸಾಲಕ್ಕೆ ರೈತ ಸುರೇಶನಿಗೆ ನೋಟಿಸ್ ನೀಡಲಾಗಿದ್ದು ಇದರಿಂದಾಗಿ ಬೇಸರಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.ರಿಪ್ಪನ್‌ಪೇಟೆ ಕೆನರಾಬ್ಯಾಂಕ್ ಮತ್ತು ಕೃಷಿ ಸೇವಾ ಸಹಕಾರ ಬ್ಯಾಂಕ್ ಮತ್ತು ಕೋಣಂದೂರು ಸೆಂಟ್ ಮಿಲಾಗ್ರೀಸ್ ಬ್ಯಾಂಕ್‌ಗಳಲ್ಲಿ ಬೆಳೆಯ ಮೇಲೆ ಸಾಲ ಮಾಡಿದ್ದರು ಎಂದು ಹೇಳಲಾಗಿದೆ.

ಮೃತರ ಪತ್ನಿ ನೀಡಿದ ದೂರಿನನ್ವಯ ರಿಪ್ಪನ್‌ಪೇಟೆ ಪೊಲೀಸ್ ಸಬ್‌ಇನ್ಸ್ಪೆಕ್ಟರ್ ಎಸ್.ಪಿ.ಪ್ರವೀಣ್ ಕೇಸ್ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಶಿವಮೊಗ್ಗದಲ್ಲಿ ರೌಡಿಶೀಟರ್ ‘ಕುಳ್ಳಿ ಕಿರಣ್’ ಬರ್ಬರ ಹತ್ಯೆ; ಪ್ರಮುಖ ಆರೋಪಿ ಉಮೇಶ್ ಮೇಲೆ ಪೊಲೀಸ್ ಫೈರಿಂಗ್

ಶಿವಮೊಗ್ಗದಲ್ಲಿ ರೌಡಿಶೀಟರ್ ‘ಕುಳ್ಳಿ ಕಿರಣ್’ ಬರ್ಬರ ಹತ್ಯೆ; ಪ್ರಮುಖ ಆರೋಪಿ ಉಮೇಶ್ ಮೇಲೆ ಪೊಲೀಸ್ ಫೈರಿಂಗ್ Shivamogga rowdy sheeter…

3 hours ago

ಜಂಬಳ್ಳಿ ಅರಣ್ಯದಲ್ಲಿ ಕಾರು ಬಿಟ್ಟು ನಾಪತ್ತೆಯಾಗಿದ್ದ ಕುಡುಮಲ್ಲಿಗೆ ಸೊಸೈಟಿ ಸಿಇಒ ಮದನ್ ಸುರಕ್ಷಿತ ಪತ್ತೆ

ಜಂಬಳ್ಳಿ ಅರಣ್ಯದಲ್ಲಿ ಕಾರು ಬಿಟ್ಟು ನಾಪತ್ತೆಯಾಗಿದ್ದ ಕುಡುಮಲ್ಲಿಗೆ ಸೊಸೈಟಿ ಸಿಇಒ ಮದನ್ ಸುರಕ್ಷಿತ ಪತ್ತೆ Kudumallige Society CEO Madan,…

3 hours ago

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…

18 hours ago

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…

18 hours ago

ಈದ್ ಮಿಲಾದ್ ಮೆರವಣಿಗೆಯಲ್ಲಿ ಮಾದಕ ವ್ಯಸನ ವಿರುದ್ಧ ಸಮರ: ‘ಗಾಂಜಾ ಬೇಡ ಬ್ರೋ’ ಅಭಿಯಾನಕ್ಕೆ ಭರ್ಜರಿ ಸ್ಪಂದನೆ

ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…

1 day ago

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…

2 days ago