ಶಿವಮೊಗ್ಗ ಜಿಲ್ಲೆಯ ಸೊರಬ ಪುರಸಭೆಯ ಮಹಿಳಾ ಸಿಬ್ಬಂದಿ ಖಾತೆ ಬದಲಾವಣೆಗೆ ವ್ಯಕ್ತಿಯೊಬ್ಬರಿಂದ 15 ಸಾವಿರ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಲೋಕಾಯುಕ್ತ ಬಲೆಗೆ ಬಿದ್ದವರು ಸೊರಬ ಪುರಸಭೆಯ ಕೇಸ್ ವರ್ಕರ್ ಚಂದ್ರಕಲಾ ಎಂದು ತಿಳಿದುಬಂದಿದೆ.
ಮಂಜುನಾಥ ಶೆಟ್ಟಿ ಎಂಬವರು ತಮ್ಮ ಖಾತೆ ಬದಲಾವಣೆಗಾಗಿ ಪುರಸಭೆಗೆ ಹೋದಾಗ ಸಿಬ್ಬಂದಿ ಖಾತೆ ಬದಲಾವಣೆ ಮಾಡಿಸದೆ ಸತಾಯಿಸಿದ್ದಾರೆ. ಅಲ್ಲದೇ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಿ ಮಂಜುನಾಥ್ ಶೆಟ್ಟಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.
ಸೊರಬ ಪುರಸಭೆಯಲ್ಲಿ ಚಂದ್ರಕಲಾ ಅವರು ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿ ಉಮೇಶ್ ಈಶ್ವರ ನಾಯಕ್ ಅವರು ತಮ್ಮ ಸಿಬ್ಬಂದಿಯೊಂದಿಗೆ ದಾಳಿ ನಡೆಸಿದ್ದಾರೆ.
ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ.