ವಿವಿಧೆಡೆ ಸಂಭ್ರಮದ ಬಕ್ರೀದ್ ಹಬ್ಬ ಆ‍ಚರಣೆ|Bakrid

ಹೊಸನಗರ ತಾಲೂಕಿನ ವಿವಿಧೆಡೆ ಪವಿತ್ರ ಬಕ್ರೀದ್ ಹಬ್ಬವನ್ನು ಮುಸ್ಲಿಂ ಬಾಂಧವರು ಸಡಗರ ಸಂಭ್ರಮದಿಂದ ಆಚರಿಸಿದರು.

ರಿಪ್ಪನ್‌ಪೇಟೆ

ರಿಪ್ಪನ್ ಪೇಟೆ : ಪಟ್ಟಣದಲ್ಲಿ ಮುಸ್ಲಿಂ ಬಾಂಧವರು ಅತ್ಯಂತ  ಸಂಭ್ರಮದಿಂದ ಬಕ್ರಿದ್ ಹಬ್ಬವನ್ನು ಆಚರಿಸಿದರು.


ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ, ಮೆಕ್ಕಾ ಮಸೀದಿ, ಮದೀನಾ ಮಸೀದಿ ಗಳಲ್ಲಿ ಮುಸಲ್ಮಾನ ಭಾಂಧವರು ಬಕ್ರೀದ್ ಪ್ರಾರ್ಥನೆ ಸಲ್ಲಿಸಿದರು.

ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಧರ್ಮಗುರು ಮುನೀರ್  ಸಖಾಫೀ  ಮಾತನಾಡಿ,  ಪ್ರತಿಯೊಂದು ಧರ್ಮವನ್ನು ಗೌರವಿಸುವ ಮೂಲಕ  ಸಹೋದರತ್ವದಿಂದ ಬಾಳ್ವೆ ನಡೆಸಬೇಕು .ಯಾವುದೇ ಧರ್ಮವನ್ನು ಅವಹೇಳನ ಮಾಡುವುದನ್ನು ಇಸ್ಲಾಂ ಖಂಡಿಸುತ್ತದೆ ಎಂದರು.

ರಿಪ್ಪನ್ ಪೇಟೆಯಲ್ಲಿ ಮಳೆ ಹಿನ್ನಲೆಯಲ್ಲಿ  ಮೆರವಣಿಗೆಯನ್ನು ಸ್ಥಗಿತಗೊಳಿಸಿ ಗುಂಪು ಗುಂಪಾಗಿ ಈದ್ಗಾ  ಮೈದಾನಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿ,ಪರಸ್ಪರ ಶುಭಾಶಯಗಳು ಕೋರಿದರು.

ಈ ಸಂಧರ್ಭದಲ್ಲಿ ಮೊಹಿಯುದ್ದೀನ್ ಜುಮ್ಮಾ ಮಸೀದಿ ಅಧ್ಯಕ್ಷರಾದ ಮಹಮ್ಮದ್ ರಫ಼ಿ,ಕಾರ್ಯದರ್ಶಿ ಶಫ಼ಿವುಲ್ಲಾ ಮುಖಂಡರಾದ ಅರ್ ಎ ಚಾಬುಸಾಬ್, ಅಮೀರ್ ಹಂಜಾ,ಆರ್ ಎಸ್ ಶಂಶುದ್ದೀನ್,ಕೆಹೆಚ್ ಆರ್ ಮೋಣು,ಫ಼ಾಜಿಲ್,ಮುಸ್ತಫಾ, ವಾಹಿದ್ ಬಾಷಾ,ಅಬ್ದುಲ್‌ ಖುದ್ದೂಸ್, ಹಸನಬ್ಬ ,ಆರ್ ವೈ ಅಶ್ಪಕ್, ರೆಹಮಾನ್,ನದೀಮ್,ನಾಸೀರ್ , ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.


ಗಾಳಿಬೈಲ್ ಜುಮ್ಮಾ ಮಸೀದಿಯಲ್ಲಿ ಬಕ್ರೀದ್ ಪ್ರಾರ್ಥನೆ:

ರಿಪ್ಪನ್‌ಪೇಟೆ ಸಮೀಪದ ಗಾಳಿಬೈಲು ಗ್ರಾಮದ ಈದ್ಗಾ ಮೈದಾನದಲ್ಲಿ ಬಕ್ರೀದ್ ಸಂಭ್ರಮದಿಂದ ಆಚರಿಸಿದರು.ಗಾಳಿಬೈಲ್ ಜುಮ್ಮಾ ಮಸೀದಿ ಧರ್ಮಗುರುಗಳಾದ ಅಖಿಲ್ ಅಹಮದ್ ರಝಾ ರವರ ನೇತೃತ್ವದಲ್ಲಿ ಗಾಳಿಬೈಲ್ ಈದ್ಗಾ ಮೈದಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.



ಈ ಸಂಧರ್ಭದಲ್ಲಿ ಗಾಳಿಬೈಲ್ ಜುಮ್ಮಾ ಮಸೀದಿ ಅಧ್ಯಕ್ಷರಾದ ಜಿ‌ಕೆ ಜಾವೀದ್ ,ಮುಖಂಡರಾದ ಷರೀಫ್ ಸಾಬ್,ಘನಿಸಾಬ್,ವಜೀರ್ ಸಾಬ್,ಉಬೇದುಲ್ಲಾ ಷರೀಫ್, ಸೈಫ಼ುಲ್ಲಾ ,ಹಿದಾಯತ್,ಶಬ್ಬೀರ್ ಸಾಬ್ ,ಖಲೀಲ್ ಷರೀಫ್ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.


ಹೊಸನಗರದ ಕಳೂರು ಜಾಮೀಯಾ ಮಸೀದಿಯಲ್ಲಿ ಬಕ್ರೀದ್ ಪ್ರಾರ್ಥನೆ:

ಹೊಸನಗರದ ಕಳೂರು ಜಾಮಿಯಾ ಮಸೀದಿಯ ಖತೀಬರಾದ ಜನಾಬ್ ಹಾಫಿಝ್  ಅಬ್ದುಲ್ಲಾ ರವರ ನೇತೃತ್ವದಲ್ಲಿ ಈದ್ ಉಲ್ ಅಝಾ (ಬಕ್ರೀದ್) ಆಚರಿಸಲಾಯಿತು.


ಬಕ್ರೀದ್ ಹಿನ್ನಲೆಯಲ್ಲಿ ಕೆಂಚನಾಲ, ಗರ್ತಿಕೆರೆ, ಸುಣ್ಣದ ಬಸ್ತಿ ಗ್ರಾಮದಲ್ಲಿ ಮುಸ್ಲಿಂ ಬಾಂಧವರು ಈದ್ಗಾ ಮೈದಾನಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ

ರಿಪ್ಪನ್‌ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ “ಕೊಟ್ಟ ಮಾತಿನಂತೆ ವಿದ್ಯುತ್ ದೀಪ ಅಳವಡಿಸಿದ್ದೇನೆ” —…

17 hours ago

ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ

ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ Ripponpete celebrates the 59th annual Ganapati festival with…

19 hours ago

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

2 days ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

2 days ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

2 days ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

3 days ago