ಶಿಕ್ಷಣ ಸಚಿವ ಮಧುಬಂಗಾರಪ್ಪನವರಿಗೆ ರಿಪ್ಪನ್‌ಪೇಟೆಯಲ್ಲಿ ಅದ್ದೂರಿ ಸ್ವಾಗತ|education minister

“ಶಿಕ್ಷಣ ಸಚಿವ ಮಧುಬಂಗಾರಪ್ಪನರಿಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ’’

ರಿಪ್ಪನ್‌ಪೇಟೆ;-ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪನವರು ತೀರ್ಥಹಳ್ಳಿಗೆ ರಿಪ್ಪನ್‌ಪೇಟೆ ಮಾರ್ಗವಾಗಿ ತೆರಳುತ್ತಿದ್ದಾಗ ವಿನಾಯಕ ವೃತ್ತದಲ್ಲಿ ಕಾರ್ಯಕರ್ತರಿಂದ ಸಾರ್ವಜನಿಕರಿಂದ ಅದ್ದೂರಿಯಾಗಿ  ಸ್ವಾಗತಿಸುವ ಮೂಲಕ ಬರಮಾಡಿಕೊಂಡರು.


ಕಾರ್ಯಕರ್ತರ ಮತ್ತು ಸಾರ್ವಜನಿಕರ ಸ್ವಾಗತ ಸ್ವೀಕರಿಸಿದ ಸಚಿವ ಮಧು ಬಂಗಾರಪ್ಪನವರು ಇದೇ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳು ಶಿವಮೊಗ್ಗ-ಹೊಸನಗರ-ಸಾಗರ-ತೀರ್ಥಹಳ್ಳಿ ಶಕ್ತಿ ಗ್ಯಾರಂಟಿ ಯೋಜನೆಯಡಿ ಬಸ್ ಬಿಡುವಂತೆ ಸಚಿವರಿಗೆ ಮನವಿ ಮಾಡಿಕೊಂಡ ಮೇರಗೆ ಸಚಿವರು ಸ್ಪಂದಿಸಿ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ತಕ್ಷಣ ಬಸ್ ಓಡಿಸುವ ಭರವಸೆ ನೀಡುತ್ತಿದ್ದಂತೆ ಕಾರ್ಯನಿರತ ಪತ್ರಕರ್ತರಿಗೂ ರಾಜ್ಯ ವ್ಯಾಪಿ ಶಕ್ತಿ ಗ್ಯಾರಂಟಿ ಭರವಸೆಯಡಿ ಉಚಿತ ಸೇವೆ ಕಲ್ಪಿಸುವಂತೆ ಮನವಿ ಮಾಡಲಾಯಿತು.ಅಲ್ಲದೆ ಶಿಕ್ಷಣ ಕ್ಷೇತ್ರದ ಹೊಸ ಅನುಭವವಾಗುತ್ತಿದ್ದು ಸಮರ್ಥವಾಗಿ ನಿರ್ವಹಿಸುವುದಾಗಿ ಹೇಳಿದರು.


ರಿಪ್ಪನ್‌ಪೇಟೆಯ ಮೊಹಿಯುದ್ದೀನ್ ಜುಮ್ಮಾ ಮಸೀದಿ ಬಳಿ ಬಾರ್ ಅಂಡ್ ರೆಸ್ಟೋರೆಂಟ್ ಅರಂಭಿಸುತ್ತಾರೆಂಬ ಬಗ್ಗೆ ಸಾಕಷ್ಟು ಸಾರ್ವಜನಿಕರ ವಿರೋಧವಿದ್ದರೂ ಕೂಡಾ ಅಲ್ಲಿಯೇ ಅರಂಭಿಸಲು ಲೈಸನ್ಸ್ ನೀಡಿದ್ದಾರೆಂದು ಅಲ್ಲಿ ಬಾರ್ ಅಂಡ್ ರೆಸ್ಟೋರೆಂಟ್ ಆರಂಭಿಸಲು ಅವಕಾಶ ನೀಡಬಾರದು ಎಂದು ಜುಮ್ಮಾ ಮಸೀದಿ ಸಮಿತಿಯವರು ಸಚಿವರಿಗೆ ಮನವಿ ಮೂಲಕ ಆಗ್ರಹಿಸಿದರು. ಮನವಿ ಸ್ವೀಕರಿಸಿ ಮಾತನಾಡಿ ಆ ಸ್ಥಳದಲ್ಲಿ ಅಂಗಡಿ ಪ್ರಾರಂಭಿಸದಂತೆ ಕ್ರಮ ಕೈಗೊಳ್ಳಲು ಜಿಲ್ಲಾ ಅಬಕಾರಿ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಜಿ.ಪಂ.ಮಾ.ಸ.ರಾಮಚದ್ರ,ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಮೀರ್ ಹಂಜಾ,ಎಪಿಎಂಸಿ ಮಾಜಿ ಅಧ್ಯಕ್ಷ ಹೆಚ್.ವಿ.ಈಶ್ವರಪ್ಪಗೌಡ,ಕಾಂಗ್ರೆಸ್ ಮುಖಂಡರಾದ ಡಿ.ಈ.ಮಧುಸೂಧನ್,ಎಂ.ಎಂ.ಪರಮೇಶ,ಗಣಪತಿಗವಟೂರು,
ಜಿ.ಆರ್.ಗೋಪಾಕೃಷ್ಣ,ಮಂಜುನಾಥಮಳವಳ್ಳಿ,ರಮೇಶ್ ಫ್ಯಾನ್ಸಿ,ಶ್ರೀಧರ, ಕಲ್ಲೂರು ತೇಜಮೂರ್ತಿ, ಖಲೀಲ್,ಧನಲಕ್ಷ್ಮಿ,ಸಾಜೀದಾ ಹನೀಪ್ ಹಾಗೂ ಇನ್ನಿತರರು ಹಾಜರಿದ್ದರು. 
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್‌ಪೇಟೆಯ ಅಪೇಕ್ಷಾಗೆ ರನ್ನರ್‌ಅಪ್ ಸಾಧನೆ

ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್‌ಪೇಟೆಯ ಅಪೇಕ್ಷಾಗೆ ರನ್ನರ್‌ಅಪ್ ಸಾಧನೆ Ripponpete's Apeksha K. secured second place and runner-up…

1 hour ago

ಆಗುಂಬೆಯಲ್ಲಿ ಮಕ್ಕಳೊಂದಿಗೆ ಗದ್ದೆಗಿಳಿದ ಪೊಲೀಸ್‌ ಅಧಿಕಾರಿ; ಹೂಟಿ–ನಾಟಿ ಕಲಿಸಿದ PSI ಶಿವನಗೌಡ ಪಾಟೀಲ್

ಆಗುಂಬೆಯಲ್ಲಿ ಮಕ್ಕಳೊಂದಿಗೆ ಗದ್ದೆಗಿಳಿದ ಪೊಲೀಸ್‌ ಅಧಿಕಾರಿ; ಹೂಟಿ–ನಾಟಿ ಕಲಿಸಿದ PSI ಶಿವನಗೌಡ ಪಾಟೀಲ್ Agumbe PSI Shivanagowda Patil joined…

1 hour ago

ವಿದ್ಯಾರ್ಥಿನಿಯನ್ನು ಬೆದರಿಸಿ 15 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾದ ದುಷ್ಕರ್ಮಿ

ವಿದ್ಯಾರ್ಥಿನಿಯನ್ನು ಬೆದರಿಸಿ 15 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾದ ದುಷ್ಕರ್ಮಿ College student threatened and robbed of…

16 hours ago

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ A 9-foot-long python was safely rescued from behind a…

16 hours ago

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ – ಕೆರೆಗೆ ಹಾರಿ ಸಾಗರದ ಯುವತಿ

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…

22 hours ago

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಮೂವರು ಆರೋಪಿಗಳು ಪೊಲೀಸರ ಬಲೆಗೆ

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a…

2 days ago