Headlines

ಶಿವಮೊಗ್ಗ ಜಿಲ್ಲೆಯಲ್ಲಿ ಒಂದೇ ದಿನದಲ್ಲಿ 99 ವಾಹನಗಳು ಸೀಜ್ – ಕಾರಣವೇನು ಗೊತ್ತಾ???? ಈ ಸುದ್ದಿ ನೋಡಿ

ಸಂಚಾರ ನಿಯಮಗಳ ಉಲ್ಲಂಘನೆ ಮಾಡಿದ 99 ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಶಿವಮೊಗ್ಗ ಮತ್ತು ಸೊರಬದಲ್ಲಿ ಪ್ರತ್ಯೇಕವಾಗಿ ವಾಹನಗಳ ತಪಾಸಣೆ ನಡೆಸಲಾಯಿತು ಎಂದು ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕರ್ಕಶ ಶಬ್ದ ಮಾಡುವ ಹಾರನ್‌ ಬಳಸುತ್ತಿದ್ದವರ ವಿರುದ್ಧ ಶಿವಮೊಗ್ಗ ಸಂಚಾರ ಠಾಣೆ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದರು. ಇನ್ಸ್‌ಪೆಕ್ಟರ್‌ ಸಂತೋಷ್‌ ಕುಮಾರ್‌ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ 39 ವಾಹನಗಳನ್ನು ವಶಕ್ಕೆ  ಪಡೆಯಲಾಗಿದೆ. ವಾಹನಗಳ ಮಾಲೀಕರು, ಚಾಲಕರ ವಿರುದ್ಧ ಮೋಟರ್‌ ವೆಹಿಕಲ್‌ ಕಾಯ್ದೆ ಅಡಿಯ ಪ್ರಕರಣ ದಾಖಲು ಮಾಡಲಾಗಿದೆ.

ಶಿವಮೊಗ್ಗ ಸಂಚಾರಿ ವೃತ್ತಕ್ಕೆ ಸರ್ಕಲ್​ ಇನ್​ಸ್ಪೆಕ್ಟರ್ ಸಂತೋಷ್​ ಕುಮಾರ್ ವಾಪಸ್ ಆಗುತ್ತಿದ್ದಂತೆ ಸಾಲು ಸಾಲು ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದ್ಧಾರೆ. ಇದಕ್ಕೆ ಪೂರಕವಾಗಿ ನಿನ್ನೆ  ಶಿವಮೊಗ್ಗ ನಗರದಲ್ಲಿ ಕರ್ಕಶ ಶಬ್ದವನ್ನುಂಟು ಮಾಡುವ ಹಾರ್ನ್  (Shrill Horns) ವಿರುದ್ಧ ಕಾರ್ಯಾಚರಣೆ ಕೈಗೊಳ್ಳಲಾಗಿದೆ.

ಈ ಕಾರ್ಯಾಚರಣೆಯಲ್ಲಿ ಕರ್ಕಶ ಹಾರ್ನ್ ಗಳನ್ನು ಅಳವಡಿಸಿದ್ದ ಒಟ್ಟು 39 ವಾಹನಗಳನ್ನು ವಶಕ್ಕೆ ಪಡೆದು, ವಾಹನ ಚಾಲಕರು / ಮಾಲೀಕರ ವಿರುದ್ಧ ಐಎಂವಿ ಕಾಯ್ದೆಯಡಿಯಲ್ಲಿ 39 ಪ್ರಕರಣಗಳನ್ನು ದಾಖಲಿಸಲಾಗಿದೆ.

ಇನ್ನೂ ಸೊರಬ ತಾಲ್ಲೂಕಿನಲ್ಲಿ ಸರ್ಕಲ್​ ಇನ್​ಸ್ಪೆಕ್ಟರ್​ ರಾಜಶೇಖರ್​ ನೇತೃತ್ವದಲ್ಲಿ ಆನವಟ್ಟಿಯ ಜೂನಿಯರ್ ಕಾಲೇಜು ಮತ್ತು ಬಸ್ ನಿಲ್ದಾಣದ ಬಳಿ ಕರ್ಕಶ ಶಬ್ದವನ್ನುಂಟು ಮಾಡುವ ಹಾರ್ನ್ (Shrill Horns) ಗಳನ್ನು ಅಳವಡಿಸಿದ್ದ ವಾಹನಗಳನ್ನ ವಶಕ್ಕೆ ಪಡೆಯಲಾಗಿದೆ.

ಅಲ್ಲದೆ  ಚಾಲನಾ ಪರವಾನಿಗೆ ಇಲ್ಲದೇ, ಹೆಲ್ಮೆಟ್ ಧರಿಸದೇ ಮತ್ತು ಅತಿವೇಗ ಹಾಗೂ ಅಪಾಯಕಾರಿಯಾಗಿ ವಾಹನಗಳನ್ನು ಚಲಾಯಿಸುತ್ತಿದ್ದ ವಾಹನ ಸವಾರರ ವಿರುದ್ಧ ಕೇಸ್ ದಾಖಲಿಸಲಾಯ್ತು.

ಈ ಕಾರ್ಯಾಚರಣೆಯಲ್ಲಿ ಒಟ್ಟು 60 ವಾಹನಗಳನ್ನು ವಶಕ್ಕೆ ಪಡೆದು, ವಾಹನ ಚಾಲಕರು / ಮಾಲೀಕರ ವಿರುದ್ಧ ಐಎಂವಿ ಕಾಯ್ದೆಯಡಿಯಲ್ಲಿ ಒಟ್ಟು 60 ಪ್ರಕರಣಗಳನ್ನು ದಾಖಲಿಸಲಾಗಿದೆ. 

Leave a Reply

Your email address will not be published. Required fields are marked *