ಶಿವಮೊಗ್ಗ-ಹೊಸನಗರ-ಸಾಗರ-ತೀರ್ಥಹಳ್ಳಿ ಮಾರ್ಗ ಸರ್ಕಾರಿ ಬಸ್ ಓಡಿಸುವಂತೆ ಆಗ್ರಹಿಸಿ ಮಹಿಳೆಯರಿಂದ ಶಾಸಕರಿಗೆ ಮತ್ತು ಜಿಲ್ಲಾಧಿಕಾರಿಗಳಿಗೆ ಮನವಿ|KSRTC

ಶಿವಮೊಗ್ಗ-ಹೊಸನಗರ-ಸಾಗರ-ತೀರ್ಥಹಳ್ಳಿ ಮಾರ್ಗ ಸರ್ಕಾರಿ ಬಸ್ ಓಡಿಸುವಂತೆ ಆಗ್ರಹಿಸಿ ಮಹಿಳೆಯರಿಂದ ಶಾಸಕರಿಗೆ ಮತ್ತು ಜಿಲ್ಲಾಧಿಕಾರಿಗಳಿಗೆ ಮನವಿ


ರಿಪ್ಪನ್‌ಪೇಟೆ;-ರಾಜ್ಯದ ಕಾಂಗ್ರೆಸ್ ಸರ್ಕಾರ ಅನುಷ್ಟಾನಗೊಳಿಸಿರುವ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆಯಡಿ ಹೊಸನಗರ ತಾಲ್ಲೂಕಿನ ಮಹಿಳೆಯರು ಶಾಲಾ ಕಾಲೇಜ್‌ಗಳಿಗೆ ತೆರಳುವ ವಿದ್ಯಾರ್ಥಿಗಳನ್ನು ವಂಚಿತರಾನ್ನಾಗಿಸಿದ್ದು ತಕ್ಷಣ ಸಾಗರ-ಹೊಸನಗರ  ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಮತ್ತು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಗಮನಹರಿಸಿ ಶಿವಮೊಗ್ಗ ಹೊಸನಗರ ಮತ್ತು ಸಾಗರ-ತೀರ್ಥಹಳ್ಳಿ ಮಾರ್ಗದಲ್ಲಿ ಸರ್ಕಾರಿ ಬಸ್ ಬಿಡುವಂತೆ ಅಗ್ರಹಿಸಿ ಇಂದು ಮಹಿಳೆಯರು ನಾಡಕಛೇರಿಯ ಅಧಿಕಾರಿಗಳ ಮೂಲಕ ಮನವಿ ಸಲ್ಲಿಸಿದರು.

ನಾಡಕಛೇರಿ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಮಹಿಳೆಯರಾದ ನಾಗರತ್ನದೇವರಾಜ್,ಪದ್ಮಸುರೇಶ್,ಲೀಲಾ ಉಮಾಶಂಕರ, ಮಂಜುಳಕೇತಾರ್ಜಿರಾವ್, ಮಹಾಲಕ್ಷಿ , ಸುಧಾ ನೇರಲಮನೆ, ಇನ್ನಿತರರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ರಾಜ್ಯ ಸರ್ಕಾರ ವಿಧಾನಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಘೋಷಿಸಲಾದ ಐದು ಗ್ಯಾರಂಟಿ ಯೋಜನೆಯಂತೆ ಈಗಾಗಲೇ ರಾಜ್ಯ ವ್ಯಾಪಿ ಸರ್ಕರಿ ಬಸ್‌ನಲ್ಲಿ ಪ್ರೀ ಯಾಗಿ ಮಹಿಳೆಯರು ಶಾಲಾ ಕಾಲೇಜ್ ವಿದ್ಯಾರ್ಥಿಗಳು ಓಡಾಡುವಂತಾಗಿದ್ದು ನಮ್ಮೂರಿಗೆ ಈ ಸಾರಿಗೆ ವ್ಯವಸ್ಥೆಯಿಲ್ಲದೆ ಖಾಸಗಿ ಬಸ್ ಮೂಲಕ ಪ್ರಯಾಣಿಸಬೇಕಾಗಿದ್ದು ತಕ್ಷಣ ಸರ್ಕಾರ ಇತ್ತ ಗಮನಹರಿಸಿ ಮಲೆನಾಡಿನ ಮಹಿಳೆಯರಿಗೂ ಪ್ರೀ ಬಸ್ ಸೌಲಭ್ಯ ಕಲ್ಪಿಸಿ ಎಂದು ಆಗ್ರಹಿಸಿದರು.

ಶಿವಮೊಗ್ಗ ಅಯನೂರು ಮಾರ್ಗದ ಮಂಡಘಟ್ಟ, ಚಿನ್ಮನೆ,ಐದನೇ ಮೈಲಿಕಲ್ಲು,ಸೂಡೂರು,9 ನೇ ಮೈಲಿಕಲ್ಲು,ಅರಸಾಳು,ಬೆನವಳ್ಳಿ, ದೂನ,ರಿಪ್ಪನ್‌ಪೇಟೆ,ಗವಟೂರು,ಬಿಳಕಿ,ಕೋಟೆತಾರಿಗ,ಜೇನಿ,ಶಾಂತಪುರ,
ಕೋಡೂರು,ಹುಂಚರೋಡ್,ಮುಂಬಾರು,ಕರಿಗೊಳ್ಳಿ,ಹೊಸನಗರ,ಜಯನಗರ,ಕಾರಣಗಿರಿ,ಹನಿಯಾ,ನಗರ,ಮಾಸ್ತಿಕಟ್ಟೆ,ಚಕ್ರಾನಗರ,ಕುಂದಾಪುರ, ಉಡುಪಿ, ಕೊಲ್ಲೂರು,ಸಾಗರ ಮಾರ್ಗದ ಅನಂದಪುರ ಅಂದಾಸುರ ನೆವಟೂರು ಬಾಳೂರು ರಿಪ್ಪನ್‌ಪೇಟೆ ಮೂಗುಡ್ತಿ ಹೆದ್ದಾರಿಪುರ ಜಂಬಳ್ಳಿ ಶಿವಪುರ ಅಮೃತ ಹುಂಚದಕಟ್ಟೆ ,ಹುಂಚ ಹಾದಿಗಲ್ಲು ಕೋಣಂದೂರು ಆರಗ ತೀರ್ಥಹಳ್ಳಿ ಅಗುಂಬೆ ಸಿದ್ದಾಪುರ ಹೆಬ್ರಿ ಮಾರ್ಗ ಓಡಾಡಲು ಖಾಸಗಿ ಬಸ್ ಬಿಟ್ಟರೇ ಸರ್ಕಾರಿ ಬಸ್ ಸೌಲಭ್ಯಗಳಲ್ಲಿ ಅದ್ದರಿಂದ ತಕ್ಷಣ ಈ ಮಾರ್ಗದಲ್ಲಿ ಎರಡು ಸರ್ಕಾರಿ ಬಸ್ ಬಿಡುವಂತೆ ಮನವಿ ಪತ್ರದಲ್ಲಿ ಆಗ್ರಹಿಸಿದ್ದಾರೆ.

ನಿಯೋಗದಲ್ಲಿ ಕಾಲೇಜ್ ವಿದ್ಯಾರ್ಥಿಗಳು ಹಾಗೂ ಇನ್ನಿತರರು ಹಾಜರಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ

ರಿಪ್ಪನ್‌ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ “ಕೊಟ್ಟ ಮಾತಿನಂತೆ ವಿದ್ಯುತ್ ದೀಪ ಅಳವಡಿಸಿದ್ದೇನೆ” —…

16 hours ago

ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ

ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ Ripponpete celebrates the 59th annual Ganapati festival with…

17 hours ago

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

2 days ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

2 days ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

2 days ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

3 days ago