POSTMAN NEWS

ನೈಜ ಸುದ್ದಿ ನೇರ ಬಿತ್ತರ..

ಸಂಸದರಿಗೆ ಸಹಕರಿಸುವ ಅಧಿಕಾರಿಗಳ ವರ್ಗಾವಣೆ – ಬಿಜೆಪಿ ಪರವಿರುವ ಅಧಿಕಾರಿಗಳೇ ನಮ್ಮ ಟಾರ್ಗೆಟ್ : ಶಾಸಕ ಬೇಳೂರು|smg

ಶಿವಮೊಗ್ಗ ನಗರದಲ್ಲಿ ನಡೆದ ನೂತನ ಸಚಿವ ಮಧು ಬಂಗಾರಪ್ಪರಿಗೆ ಸ್ವಾಗತ ಹಾಗೂ ಅಭಿನಂದನೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ರವರು ಜಿಲ್ಲೆಯಲ್ಲಿನ ಅಧಿಕಾರಿಗಳ ಪೈಕಿ ಕೆಲವರು ಬಿಜೆಪಿ ಮನಸ್ಥಿತಿಯವರು ಇದ್ದಾರೆ, ಅಂತವರನ್ನ ಕಿತ್ತುಹಾಕಬೇಕಿದೆ ಎಂದರು. 

ಅಲ್ಲದೆ, ಜಿಲ್ಲೆಯಲ್ಲಿ ಸಂಸದರು ಹೇಳಿದ ಹಾಗೆ ಕೇಳುವ ಅವರಿಗೆ ಸಹಕಾರ ನೀಡುವ ಅಧಿಕಾರಿಗಳಿದ್ದು, ಈ ಹಿಂದೆ ಹಲವರು ಅವರ ಚೇಲಾಗಳ ರೀತಿಯಲ್ಲಿ ಕೆಲಸ ಮಾಡಿದ ಉದಾಹರಣೆಯಿದೆ, ಅಂತಹವರನ್ನ ವರ್ಗಾವಣೆ ಮಾಡಬೇಕಿದೆ ಎಂದರು. 

ದರಿದ್ರ  ಬಿಜೆಪಿ ಸರ್ಕಾರವನ್ನು ಕಿತ್ತು ಬಿಸಾಕಿದ್ದಕ್ಕೆ ಸಂತಸವಾಗುತ್ತಿದೆ. ಜಿಲ್ಲೆಯಲ್ಲಿ ಸಾಕಷ್ಟು ಸವಾಲುಗಳಿವೆ. ಅವುಗಳನ್ನ ಸಮರ್ಥವಾಗಿ ಎದುರಿಸಲು,  ನಾವು ಮಧು ಬಂಗಾರಪ್ಪರವರ ಜೊತೆಗಿದ್ದೇವೆ ಎಂದು ಸಹಮತ ವ್ಯಕ್ತಪಡಿಸಿದರು. ಅಲ್ಲದೆ ಮಧು ಬಂಗಾರಪ್ಪನವರು ಮಂತ್ರಿಯಾಗಿರುವುದು ತಮಗೆ ಸಂತಸ ತಂದಿದೆ ಎಂದರು. 

ರಾಜ್ಯದ ಜನರು ಕಾಂಗ್ರೆಸ್ ಗೆ ಸ್ಪಷ್ಟ ಬಹುಮತವನ್ನು ನೀಡಿದ್ದಾರೆ,  136 ಸ್ಥಾನವನ್ನು ನೀಡಿದ್ದು ಯಡಿಯೂರಪ್ಪ ಮುಖ್ಯಮಂತ್ರಿ ಯಾಗುತ್ತಾರೆ ಎಂದರೂ ಸಹ ಇಷ್ಟೊಂದು ಬಹುಮತವನ್ನು ನೀಡುತ್ತಿರಲಿಲ್ಲ ಎಂದು ಪರೋಕ್ಷವಾಗಿ ಬಿಜೆಪಿಯನ್ನು ವ್ಯಂಗ್ಯವಾಡಿದ್ರಷ್ಟೆ ಅಲ್ಲದೆ, ಕಾಂಗ್ರೆಸ್​ನ ಸಾಮರ್ಥ್ಯವನ್ನು ಶ್ಲಾಘಿಸಿದರು.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.