ಸಾಗರ : 2023-24 ಸಾಲಿಗೆ ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಅರ್ಜಿ ಆಹ್ವಾನಿಸಿದೆ.
ಪಿ.ಯು.ಸಿ ಮತ್ತು ಪಿ.ಯು.ಸಿ ಸಮಾನಾಂತರ ಕೋರ್ಸಿನ ವಿದ್ಯಾರ್ಥಿಗಳು ಹೊಸದಾಗಿ ಪ್ರವೇಶ ಬಯಸುವ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಹಾಗೂ ಪ್ರವರ್ಗ-1, 2ಎ, 2ಬಿ, 3ಎ, 3ಬಿ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿನಿಲಯದ ತಂತ್ರಾಂಶ http://shp.karnataka.gov.in ರಲ್ಲಿ ಜು.16 ರೊಳಗಾಗಿ ಅರ್ಜಿಯನ್ನು ಸಲ್ಲಿಸಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಗೆ ಸಲ್ಲಿಸಬೇಕಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ : 08183-229402/ 9480843192/ 9900768986/ 9964749890 ಗಳನ್ನು ಸಂಪರ್ಕಿಸುವಂತೆ ಸಾಗರ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಹಿಂ.ವ.ಗಳ ವಿದ್ಯಾರ್ಥಿನಿಲಯಗಳಿಗೆ ಅರ್ಜಿ ಆಹ್ವಾನ
2023-24 ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಪ್ರವರ್ಗ-1, ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿನಿಲಯಗಳಲ್ಲಿ ಮೆಟ್ರಿಕ್ ನಂತರದ ಹಾಗೂ ಹೊಸದಾಗಿ ಪ್ರವೇಶ ಬಯಸುವ ಪಿ.ಯು.ಸಿ ಮತ್ತು ಪಿ.ಯು.ಸಿ ಸಮಾನಾಂತರ ಕೋರ್ಸಿನ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಅಸಕ್ತ ವಿದ್ಯಾರ್ಥಿಗಳು ವಿದ್ಯಾರ್ಥಿನಿಲಯದ ತಂತ್ರಾಂಶ http://shp.karnataka.gov.inರಲ್ಲಿ ಜು.15 ರೊಳಗಾಗಿ ಅರ್ಜಿಯನ್ನು ಸಲ್ಲಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ : 08183-222129/ 8050770005 ಅಥವಾ https://bcwd.karnataka.gov.in, email- bcwd.hostels@gmail.com ಗಳನ್ನು ಸಂಪರ್ಕಿಸುವುದು.