ಸಾಗರದಲ್ಲಿನ ಸರ್ಕಾರಿ ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಆಹ್ವಾನ|Application


ಸಾಗರ : 2023-24 ಸಾಲಿಗೆ ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಅರ್ಜಿ ಆಹ್ವಾನಿಸಿದೆ.

ಪಿ.ಯು.ಸಿ ಮತ್ತು ಪಿ.ಯು.ಸಿ ಸಮಾನಾಂತರ ಕೋರ್ಸಿನ ವಿದ್ಯಾರ್ಥಿಗಳು ಹೊಸದಾಗಿ ಪ್ರವೇಶ ಬಯಸುವ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಹಾಗೂ ಪ್ರವರ್ಗ-1, 2ಎ, 2ಬಿ, 3ಎ, 3ಬಿ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿನಿಲಯದ ತಂತ್ರಾಂಶ http://shp.karnataka.gov.in ರಲ್ಲಿ ಜು.16 ರೊಳಗಾಗಿ ಅರ್ಜಿಯನ್ನು ಸಲ್ಲಿಸಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಗೆ ಸಲ್ಲಿಸಬೇಕಾಗಿದೆ.

ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ : 08183-229402/ 9480843192/ 9900768986/ 9964749890 ಗಳನ್ನು ಸಂಪರ್ಕಿಸುವಂತೆ ಸಾಗರ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಹಿಂ.ವ.ಗಳ ವಿದ್ಯಾರ್ಥಿನಿಲಯಗಳಿಗೆ ಅರ್ಜಿ ಆಹ್ವಾನ

2023-24 ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಪ್ರವರ್ಗ-1, ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿನಿಲಯಗಳಲ್ಲಿ ಮೆಟ್ರಿಕ್ ನಂತರದ ಹಾಗೂ ಹೊಸದಾಗಿ ಪ್ರವೇಶ ಬಯಸುವ ಪಿ.ಯು.ಸಿ ಮತ್ತು ಪಿ.ಯು.ಸಿ ಸಮಾನಾಂತರ ಕೋರ್ಸಿನ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಅಸಕ್ತ ವಿದ್ಯಾರ್ಥಿಗಳು ವಿದ್ಯಾರ್ಥಿನಿಲಯದ ತಂತ್ರಾಂಶ http://shp.karnataka.gov.inರಲ್ಲಿ ಜು.15 ರೊಳಗಾಗಿ ಅರ್ಜಿಯನ್ನು ಸಲ್ಲಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ : 08183-222129/ 8050770005 ಅಥವಾ https://bcwd.karnataka.gov.in, email- bcwd.hostels@gmail.com ಗಳನ್ನು ಸಂಪರ್ಕಿಸುವುದು.





ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ

ರಿಪ್ಪನ್‌ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ “ಕೊಟ್ಟ ಮಾತಿನಂತೆ ವಿದ್ಯುತ್ ದೀಪ ಅಳವಡಿಸಿದ್ದೇನೆ” —…

15 hours ago

ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ

ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ Ripponpete celebrates the 59th annual Ganapati festival with…

17 hours ago

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

2 days ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

2 days ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

2 days ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

3 days ago