ಸಾಹಿತ್ಯ ಲೋಕಕ್ಕೆ ಹೊಸನಗರ ತಾಲೂಕಿನ ಕೊಡುಗೆ ಅಪಾರ : ವೈ.ಎಸ್.ಪ್ರೇಮನಾಥ್

ಸಾಹಿತ್ಯ ಲೋಕಕ್ಕೆ ಹೊಸನಗರ ತಾಲೂಕಿನ ಕೊಡುಗೆ ಅಪಾರ
     – ವೈ.ಎಸ್.ಪ್ರೇಮನಾಥ್

ಕನ್ನಡ ಸಾಹಿತ್ಯ ಲೋಕಕ್ಕೆ ಹೊಸನಗರ ತಾಲೂಕಿನ ಸಾಹಿತಿಗಳು ಅಪಾರವಾದ ಕೊಡುಗೆ ನೀಡಿದ್ದಾರೆ ಎಂದು ನಿವೃತ್ತ ಪ್ರಾಂಶುಪಾಲ ವೈ ಎಸ್ ಪ್ರೇಮನಾಥ್ ಹೇಳಿದರು.

ಹೊಸನಗರ ತಾಲೂಕಿನಲ್ಲಿ 40 ಕ್ಕೂ ಹೆಚ್ಚು ಸಾಹಿತಿಗಳಿದ್ದು, ಸಾಹಿತ್ಯ ಲೋಕದ ಅನೇಕ ಕೃತಿಗಳನ್ನ ರಚನೆ ಮಾಡಿದ್ದಾರೆ ಎಂದು ತಾಲೂಕಿನ ಸಾಹಿತಿಗಳು ಮತ್ತು ಅವರ ಕೃತಿಗಳ ಬಗ್ಗೆ ವಿವರಿಸುತ್ತಾ ಹೇಳಿದರು.

ಬುಧವಾರ ಹೊಸನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಚಿಕ್ಕಜೇನಿ ಸರ್ಕಾರಿ ಪ್ರೌಢಶಾಲಾ  ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ದಾನಮ್ಮ ದಿ. ಬೊಮ್ಮನಾಯ್ಕ ಸೊನಲೆ ಇವರ ದತ್ತಿನಿಧಿ ಕಾರ್ಯಕ್ರಮದಲ್ಲಿ ” ಕನ್ನಡ ಸಾಹಿತ್ಯಕ್ಕೆ ಹೊಸನಗರ ತಾಲೂಕಿನ ಕೊಡುಗೆ ” ಎಂಬ ವಿಷಯ ಕುರಿತು ಮಾತನಾಡಿದರು.

ಕಾರ್ಯಕ್ರಮ ಉದ್ಘಾಟಿಸಿದ ತಾಲೂಕು ಕಸಾಪ ಅಧ್ಯಕ್ಷ ತ.ಮ. ನರಸಿಂಹ ಮಾತನಾಡಿ ಕನ್ನಡದ ಸ್ವಾವಲಂಬಿತನ ಇದ್ದರೆ ಕನ್ನಡದ ಉಳಿವು ಸಾಧ್ಯ. ಕನ್ನಡ ಭಾಷೆ ಹಾಗೂ ಕನ್ನಡವನ್ನು ಬೆಳೆಸುವ ಮನಸ್ಸು ಚಿಕ್ಕ ವಯಸ್ಸಿನಲ್ಲಿ ಮನಗಂಡಾಗ ಮಾತ್ರ ಸಾಧ್ಯ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ನಂತರ ” ಕಾರ್ಮಿನಾ ಶರಾವೋ ಮತ್ತು ಎಂ.ಲೂವಿಸ್ ನೆನಪಿನ ದತ್ತಿ ” ಕಾರ್ಯಕ್ರಮದಲ್ಲಿ ” ಕನ್ನಡದ ಭಾಷಾ ಪ್ರಾಮುಖ್ಯತೆ ” ವಿಷಯ ಕುರಿತು ಕಲಾ ಶಿಕ್ಷಕ ಡಾ.ಎನ್ ಡಿ ಹೆಗಡೆ ಉಪನ್ಯಾಸ ಮಾಲಿಕೆಯಲ್ಲಿ ಮಾತನಾಡಿ ಕನ್ನಡ ಶಾಸ್ತ್ರೀಯ ಭಾಷೆ ಕನ್ನಡದ ಅನೇಕ ಪದಗಳು ದೇಹದ ಅಂತರಾತ್ಮದ ಭಾಷೆಯಾಗಿದೆ. ಬೇರೆ ಯಾವ ಭಾಷೆಯಲ್ಲಿ ಈ ರೀತಿಯ ಹೋಲಿಕೆ ಮಾಡಲು ಸಾಧ್ಯವಿಲ್ಲ.  ಕನ್ನಡದ ಪ್ರತಿಯೊಂದು ಶಬ್ದಕ್ಕೂ ಆತ್ಮೀಯತೆ ಇದೆ. ಕನ್ನಡ ಭಾಷೆಗೆ ದೇಹದ ಅಂಗಾಂಗಗಳು ಸಹಕಾರಿಯಾಗಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೌಢಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಉಮೇಶ್ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪ್ರೌಢಶಾಲಾ  ಮುಖ್ಯ ಶಿಕ್ಷಕ ಶಿವಾಜಿ, ಗ್ರಾಮ ಪಂಚಾಯಿತಿ ಸದಸ್ಯ ಅಣ್ಣಪ್ಪ ಶೆಟ್ಟಿ . ಉಪಸ್ಥಿತರಿದ್ದು ಮಾತನಾಡಿದರು. ಕಾರ್ಯಕ್ರಮದ ಮೊದಲಲ್ಲಿ ಕಲಾ ಶಿಕ್ಷಕ ಶೇಖರಪ್ಪ ಸ್ವಾಗತಿಸಿದರು. ಕೊನೆಯಲ್ಲಿ ಸಹ ಶಿಕ್ಷಕಿ ಲತಾ ವಂದಿಸಿದರು. ಕಾರ್ಯಕ್ರಮದಲ್ಲಿ ಪ್ರೌಢಶಾಲಾ ಸಹ ಶಿಕ್ಷಕರಾದ ವಿಜಯಕುಮಾರಿ ಕಾರ್ಯಕ್ರಮ ನಿರೂಪಿಸಿದರು. ಸಹ ಶಿಕ್ಷಕರಾದ  ಸವಿತಾ ಹಾಗೂ ವೀರಣ್ಣಗೌಡ ಇನ್ನು ಮುಂತಾದವರು ಉಪಸಿದ್ಧರಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ

ರಿಪ್ಪನ್‌ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ “ಕೊಟ್ಟ ಮಾತಿನಂತೆ ವಿದ್ಯುತ್ ದೀಪ ಅಳವಡಿಸಿದ್ದೇನೆ” —…

15 hours ago

ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ

ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ Ripponpete celebrates the 59th annual Ganapati festival with…

16 hours ago

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

2 days ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

2 days ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

2 days ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

3 days ago