ರಿಪ್ಪನ್ಪೇಟೆ : ಸಿಇಟಿ ಪರೀಕ್ಷೆಯಲ್ಲಿ ಪಟ್ಟಣದ ಸಾಗರ ರಸ್ತೆಯ ಯುವಕ ಶಂಕರ್ ಪಟೇಲ್ 976 ನೇ ರ್ಯಾಂಕ್ ಉತ್ತಮ ಸಾಧನೆಗೈದಿದ್ದಾನೆ.
ವೃತ್ತಿಪರ ಕೋರ್ಸ್ಗಳ ಪ್ರವೇಶಾತಿಗಾಗಿ ಕರ್ನಾಟಕ ಪರೀಕ್ಷ ಪ್ರಾಧಿಕಾರ (ಕೆಇಎ) ನಡೆಸಿದ ʻಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆʼಯ (KCET 2023) ಫಲಿತಾಂಶ (KCET 2023 Result) ಪ್ರಕಟವಾಗಿದ್ದು ಕಾರ್ಕಳದ ಜ್ಞಾನ ಸುಧಾ ಕಾಲೇಜಿನ ಶಂಕರ್ ಪಟೇಲ್ 976ನೇ ರ್ಯಾಂಕ್ ಪಡೆದು ಉತ್ತಮ ಸಾಧನೆಗೈದಿದ್ದಾರೆ.
ಪಟ್ಟಣದ ಉದ್ಯಮಿ ಕೆ ಎಂ ಉಮೇಶ್ ಮತ್ತು ರಾಜೇಶ್ವರಿ ದಂಪತಿಗಳ ಪುತ್ರ ಶಂಕರ್ ಪಟೇಲ್ ಕಾರ್ಕಳದ ಜ್ಞಾನ ಸುಧಾ ಕಾಲೇಜಿನಲ್ಲಿ ದ್ವಿತೀಯ ಪಿಯು ವಿಜ್ಞಾನ ವಿಭಾಗದಲ್ಲಿ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದನು.ಪಿಯುಸಿ ಪರೀಕ್ಷೆಯಲ್ಲಿ ಗಣಿತ ಮತ್ತು ಕಂಪ್ಯೂಟರ್ ಸೈನ್ಸ್ ವಿಷಯದಲ್ಲಿ 100ಕ್ಕೆ 100 ಅಂಕ ಪಡೆದು ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದನು.
ಸಿಇಟಿ ಪರೀಕ್ಷೆಯಲ್ಲಿ ಅತ್ಯದ್ಭುತ ಸಾಧನೆಗೈದ ರಿಪ್ಪನ್ಪೇಟೆಯ ಯುವ ಪ್ರತಿಭೆ ಶಂಕರ್ ಪಟೇಲ್ ರವರಿಗೆ ಕೊಳವಳ್ಳಿ ಕೋಮಲಾಕ್ಷಮ್ಮ ಮುರಿಗಪ್ಪ ಗೌಡ ಮತ್ತು ಗೌರಿ ಪಟೇಲ್ ಶುಭ ಕೋರಿದ್ದಾರೆ.
ಶಂಕರ್ ಪಟೇಲ್ ಮುಂದಿನ ದಿನಗಳಲ್ಲಿ ಇನ್ನಷ್ಟು ಉತ್ತಮ ಸಾಧನೆಗೈದು ಯಸಸ್ಸಿನ ಉತ್ತುಂಗಕ್ಕೇರಲಿ ಎಂದು ಪೋಸ್ಟ್ ಮ್ಯಾನ್ ಸುದ್ದಿ ಬಳಗ ಆಶಿಸುತ್ತದೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್