ಸ್ಲೀಪರ್ ಬಸ್’ನಲ್ಲಿ ವಿಷ ಕುಡಿದು ಮಲಗಿದ ಪ್ರೇಮಿಗಳು: ಯುವತಿ ಮೃತ್ಯು
ಬಸ್ ನಲ್ಲಿ ವಿಷ ಕುಡಿದು ಪ್ರೇಮಿಗಳು ಮಲಗಿದ್ದು, ಯುವತಿ ಮೃತಪಟ್ಟ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಗರದ ಚಳಗೇರಿ ಟೋಲ್ ಬಳಿ ಇರುವ ಗ್ರೀನ್ ಪ್ಯಾಲೇಸ್ ಹೋಟೆಲ್ ಬಳಿ ನಡೆದಿದೆ.
ಹೇಮಾ (20) ಮೃತಪಟ್ಟ ಯುವತಿ. ಇತ್ತ ಯುವಕ ಚೇತರಿಸಿಕೊಂಡಿದ್ದಾನೆ.
ಘಟನೆಯ ಹಿನ್ನಲೆ:
ಬಿ.ಕಾಂ ಫೈನಲ್ ಇಯರ್ ವಿದ್ಯಾರ್ಥಿನಿಯಾಗಿದ್ದ ಬೆಂಗಳೂರು ಮೂಲದ ಹೇಮಾಳಿಗೆ ಬಾಗಲಕೋಟೆ ಮೂಲದ ಅಖಿಲ್ ಜೊತೆ ಪ್ರೇಮಾಂಕುರವಾಗಿತ್ತು. ಇಬ್ಬರೂ ಒಬ್ಬರನ್ನೊಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಇವರಿಬ್ಬರ ಮದುವೆಗೆ ಪೋಷಕರು ಗ್ರೀನ್ ಸಿಗ್ನಲ್ ಕೊಟ್ಟಿರಲಿಲ್ಲ. ಈ ಹಿನ್ನೆಲೆಯಲ್ಲಿ ಜೋಡಿ ಈ ತೀರ್ಮಾನಕ್ಕೆ ಬಂದಿದೆ.
ಸಾಯೋದಕ್ಕೂ ಮುನ್ನ ನಮಗೆ ಮದುವೆಗೆ ನೀವು ಒಪ್ಪಿಗೆ ಕೊಡಲ್ಲ ಅನ್ನೋದು ಗೊತ್ತಾಯ್ತು. ಹೀಗಾಗಿ ಬಾಂಬೆಗೆ ಹೋಗ್ತಾ ಇದ್ದೇವೆ ಎಂದು ಯುವತಿ ಫೋನ್ ಮಾಡಿ ಹೇಳಿದ್ದಳು. ಬಳಿಕ ಊಟಕ್ಕೆ ಬಸ್ ನಿಲ್ಲಿಸಿದಾಗ ಬಸ್ ನವರಿಗೆ ಅನುಮಾನ ಬಂದಿದೆ. ವಿಷದ ವಾಸನೆ ಬಂದ ಹಿನ್ನೆಲೆ ಕೂಡಲೇ ಸ್ಥಳೀಯರು ಆಸ್ಪತ್ರೆಗೆ ದಾಖಲಿಸೋ ಪ್ರಯತ್ನ ಮಾಡಿದ್ದಾರೆ. ಆದರೆ ಹುಡುಗಿ ಬದುಕಲಿಲ್ಲ. ಹುಡುಗ ಹುಷಾರಾಗಿದ್ದಾನೆ ಎಂದು ವರದಿಯಾಗಿದೆ.
ಇನ್ನು, ಈ ಸಂಬಂಧ ರಾಣೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್