ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ವ್ಯಕ್ತಿಯೊಬ್ಬರಿಗೆ ಗಂಭೀರ ಗಾಯವಾದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹುಂಚದಕಟ್ಟೆ ಗ್ರಾಮದಲ್ಲಿ ನಡೆದಿದೆ.
ಕೊಪ್ಪದಿಂದ ಸಾಗರಕ್ಕೆ ತೆರಳುತಿದ್ದ ಟಿವಿಎಸ್ ಜುಪಿಟರ್ ಸ್ಕೂಟಿ ಹಾಗೂ ಗರ್ತಿಕೆರೆಯಿಂದ ಕೋಣಂದೂರು ಕಡೆಗೆ ತೆರಳುತಿದ್ದ ಬಜಾಜ್ CT 100 ಬೈಕ್ ನಡುವೆ ಹುಂಚದಕಟ್ಟೆ ಸರ್ಕಲ್ ಬಳಿಯಲ್ಲಿ ಮುಖಾಮುಖಿ ಡಿಕ್ಕಿಯಾಗಿದೆ.
ಈ ಅಪಘಾತದಲ್ಲಿ ಸಾಗರ ನಿವಾಸಿ ಶ್ರೀನಿವಾಸ್(61) ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು ಕೈ ಮತ್ತು ಕಾಲು ಮುರಿತವಾಗಿದೆ.ಮತ್ತೊಂದು ಬೈಕ್ ನಲ್ಲಿದ್ದ ಗರ್ತಿಕೆರೆ ಮೂಲದ ಅಭಿ(23) ಎಂಬಾತನಿಗೂ ಪೆಟ್ಟಾಗಿದೆ.
ಗಾಯಾಳುಗಳನ್ನು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದು ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಗೆ ರವಾನಿಸಲಾಗಿದೆ.
ತೀರ್ಥಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.