ಹುಂಚ ಸಹಕಾರ ಸಂಘದ ವಿಶೇಷ ಸರ್ವ ಸದಸ್ಯರ ಸಭೆ – ಸಾಬೀತಾಯ್ತು ಲಕ್ಷಾಂತರ ರೂ ಅವ್ಯವಹಾರ|hucha

ಹುಂಚ ಸಹಕಾರ ಸಂಘದ ವಿಶೇಷ ಸರ್ವ ಸದಸ್ಯರ ಸಭೆ – 


ರಿಪ್ಪನ್‌ಪೇಟೆ;- ಹುಂಚ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಯಧುಕುಮಾರ್ ಇವರ ಅಧ್ಯಕ್ಷತೆಯಲ್ಲಿ ಸಂಘದ ಸಭ ಭವನದಲ್ಲಿ ವಿಶೇಷ ಸರ್ವ ಸದಸ್ಯರ ಸಭೆ ಜರುಗಿತು.

ಈ ಸಭೆಯಲ್ಲಿ ವಜಾಗೊಂಡ ಹಿಂದಿನ ಕಾರ್ಯನಿರ್ವಹಣಾಧಿಕಾರಿ ಹೆಚ್.ಸರೋಜರವರ ಅವಧಿಯಲ್ಲಿ ನಡೆದ ಆವ್ಯವಹಾರ ಹಾಗೂ ದಾಖಲಾತಿಗಳ ದುರುಪಯೋಗದ ನಗದು ದುರ್ಬಳಕೆ ಕುರಿತು ಈ ಹಿಂದೆ ಸಂಘದವರು ಶಿಸ್ತು ಸಮಿತಿಯನ್ನು ನೇಮಿಸಿ ವಿಚಾರಣಾಧಿಕಾರಿಯಿಂದ ತನಿಖೆಯಿಂದ ಕಾರ್ಯ ನಿರ್ವಾಹಣಾಧಿಕಾರಿ ಸರೋಜರವರ ಅವ್ಯವಹಾರದ ಸಮಗ್ರ ವರದಿ ದೃಡಪಟ್ಟಿದ್ದು ಮತ್ತು 2020-21 ಮತ್ತು 2021-22 ಸಾಲಿನ ಲೆಕ್ಕ ಪರಿಶೋಧನಾ ವರದಿಯಲ್ಲೂ ಸಹ ಹಣ ದುರುಪಯೋಗ ಮತ್ತು  ಕರ್ತವ್ಯಲೋಪ ಎಸಗಿರುವುದು ಸಾಬೀತುಗೊಂಡಿರುತ್ತದೆ.

ವಿಶೇಷ ಸರ್ವ ಸದಸ್ಯರ ಸಭೆಯಲ್ಲಿ ಮೇಲ್ಕಂಡ ಕಾರ್ಯ
ನಿರ್ವಾಹಣಾಧಿಕಾರಿ ವಿರುದ್ದ ಕಾನೂನು ಕ್ರಮಕ್ಕಾಗಿ ಅಡಳಿತ ಮಂಡಳಿಗೆ ಅಧಿಕಾರ ನೀಡಲಾಯಿತು.

ಈ ಸಭೆಯಲ್ಲಿ ಸಂಘದ ಉಪಾಧ್ಯಕ್ಷ ಹೆಚ್.ಅರ್.ರಾಘವೇಂದ್ರ, ನಿರ್ದೇಶಕರಾದ ಓ.ಆರ್.ಮಂಜುಭಟ್,ಹೆಚ್.ಜಿ.ರಾಜಶೇಖರ್,ವಿನಾಯಕ,ನಾಗೇಶ್,ಸತೀಶ್‌ಭಟ್,ಯಶಸ್ವತಿವೃಷಭರಾಜ್ ಜೈನ್,ಚಂದ್ರಮ್ಮ,ಮಲ್ಲಿಕಾ ಜೀವನ್‌ಧರ್,ಪ್ರೇಮಸತೀಶ್,ಹಾಗೂ ಡಿಸಿಸಿ ಬ್ಯಾಂಕ್‌ನ ಕ್ಷೇತ್ರಾಧಿಕಾರಿಗಳಾದ ಇಂದ್ರಕುಮಾರ್,ಸಹಕಾರಿಯ ಕಾನೂನು ಸಲಹೆಗಾರರಾದ ಹೆಚ್.ಎಂ.ರಾಘವೇAದ್ರ,ಮತ್ತು ಸಹಕಾರಿ ಅಂತರಿಕಾ ಲೆಕ್ಕ ಪರಿಶೋಧಕರಾದ ಜೆ.ಪಿ.ಕಿರಣ್ ಹಾಜರಿದ್ದರು.

ಜಿ.ಎಸ್.ಸತೀಶ್ ಸ್ವಾಗತಿಸಿದರು,ರಾಜಶೇಖರ್ ನಿರೂಪಿಸಿ ವಂದಿಸಿದರು.

ಸಭೆಯಲ್ಲಿ ಸಂಘದ ಸುಮಾರು 250 ಕ್ಕೂ ಅಧಿಕ ಸದಸ್ಯರು ಭಾಗವಹಿಸಿ ಸಲಹೆ ಸೂಚನೆ ನೀಡಿದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

12 hours ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

12 hours ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

12 hours ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

18 hours ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

19 hours ago

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

2 days ago