ಹೆಣ್ಣು ಮಕ್ಕಳ ಮದುವೆ ಸಂಭ್ರಮದಲ್ಲಿದ್ದ ಅಪ್ಪ ವಿಧಿಯಾಟಕ್ಕೆ ಬಲಿ – ಆನಂದಪುರದಲ್ಲೊಂದು ಹೃದಯವಿದ್ರಾವಕ ಘಟನೆ|Accident

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಚೆನ್ನಕೊಪ್ಪದ ಬಳಿ  ಆನಂದಪುರದ ಕಡೆ ತೆರಳುತ್ತಿದ್ದ ಪಾದಾಚಾರಿಗೆ ಸ್ವಿಫ್ಟ್ ಕಾರ್ ಡಿಕ್ಕಿ ಹೊಡೆದ ಘಟನೆ ನಡೆದಿದೆ.

ಮೃತಪಟ್ಟವರು ಬನವಾಸಿ ನಿವಾಸಿ ಮಂಜುನಾಥ ಗೌಡ.

ಸಂಭ್ರಮದ ಮನೆಯಲ್ಲಿ ಸೂತಕದ ಛಾಯೆ

ಆ ಮನೆಯಲ್ಲಿ ನಾಳೆ ಇಬ್ಬರು ಹೆಣ್ಮಕ್ಕಳ ಮದುವೆ ಇತ್ತು. ಇಡೀ ಮನೆ ಬಂಧು ಮಿತ್ರರಿಂದ ಖುಷಿಖುಷಿಯಾಗಿ ನಲಿದಾಡುತ್ತಿತ್ತು. ಆದರೆ, ಒಮ್ಮಿಂದೊಮ್ಮೆಗೇ ಈ ಮನೆಯಲ್ಲಿ ಸೂತಕದ ಕಳೆ ಆವರಿಸಿದೆ. ಯಾಕೆಂದರೆ, ನಾಳೆ ಮದುವೆಯಾಗಬೇಕಾದ ಆ ಇಬ್ಬರು ಹೆಣ್ಣು ಮಕ್ಕಳ ತಂದೆ ಅಪಘಾತದಲ್ಲಿ ಪ್ರಾಣ ಕಳೆದುಕೊಂಡಿದ್ದರು.

ಇಂಥ ದುರದೃಷ್ಟಕರ ಘಟನೆ ನಡೆದಿರುವುದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಚೆನ್ನಕೊಪ್ಪದಲ್ಲಿ ನಡೆದಿದೆ. ಮಂಜುನಾಥ್‌ ಅವರು ಕಾರ್ಯ ನಿಮಿತ್ತ ಪೇಟೆಗೆ ಬಂದಿದ್ದರು. ಆಗ ಅಪರಿಚಿತ ವಾಹನವೊಂದು ಅವರಿಗೆ ಡಿಕ್ಕಿ ಹೊಡೆದು ಪರಾರಿಯಾಗಿದೆ. ಅವರು ಅಲ್ಲೇ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ.

ಮಂಜುನಾಥ ಗೌಡ ಅವರ ಇಬ್ಬರು ಮಕ್ಕಳ ಮದುವೆ ನಾಳೆ (ಜೂನ್‌ 28) ಕೆಂಜಗಾಪುರದಲ್ಲಿ ಆಯೋಜನೆಯಾಗಿದೆ. ಕಳೆದ ಹಲವು ಸಮಯದಿಂದ ಈ ಮದುವೆಗಾಗಿ ಮಂಜುನಾಥ್‌ ಓಡಾಟದಲ್ಲಿದ್ದರು. ಹೆಣ್ಣುಮಕ್ಕಳು ಅವರ ಅಜ್ಜ ರುದ್ರಪ್ಪ ಗೌಡ ಚನಕೊಪ್ಪ ಅವರ ಮನೆಯಲ್ಲಿದ್ದರು. ಅಲ್ಲಿಂದಲೇ ನಾಳೆ ದಿಬ್ಬಣ ಹೊರಡುವುದಕ್ಕಿತ್ತು.

ಹೀಗೆ ಅತ್ಯಂತ ಸಂಭ್ರಮದಲ್ಲಿದ್ದ ಮನೆಯಲ್ಲೀಗ ಒಮ್ಮಿಂದೊಮ್ಮೆಗೇ ಸೂತಕ ಆವರಿಸಿದೆ. ಆನಂದಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮಂಜುನಾಥ ಗೌಡ ಅವರಿಗೆ ಡಿಕ್ಕಿ ಹೊಡೆದ ವಾಹನದ ಪತ್ತೆಗಾಗಿ ಪ್ರಯತ್ನಿಸುತ್ತಿದ್ದಾರೆ.

ದುರ್ದೈವವೆಂದರೆ, ಮಂಜುನಾಥ್‌ ಅವರು ಕೆಲವು ಸಮಯದ ಹಿಂದೆ ತಮ್ಮ ಹೆಂಡತಿಯನ್ನು ಅಪಘಾತದಲ್ಲಿ ಕಳೆದುಕೊಂಡಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ

ರಿಪ್ಪನ್‌ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ “ಕೊಟ್ಟ ಮಾತಿನಂತೆ ವಿದ್ಯುತ್ ದೀಪ ಅಳವಡಿಸಿದ್ದೇನೆ” —…

17 hours ago

ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ

ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ Ripponpete celebrates the 59th annual Ganapati festival with…

19 hours ago

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

2 days ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

2 days ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

2 days ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

3 days ago