ಹೊಂಬುಜ ಸ್ವಸ್ತಿಶ್ರೀಗಳವರ ವಿದೇಶ ವಿಹಾರ|hombuja


ಹೊಂಬುಜ : ಅಮೇರಿಕಾದ ಕೆನಡಾದ ಟೊರಂಟೋ ನಗರದ ಜಿನಮಂದಿರದಲ್ಲಿ 24 ತೀರ್ಥಂಕರರ ಭವ್ಯ ಪಂಚಕಲ್ಯಾಣ ಪ್ರತಿಷ್ಠಾ ಮಹೋತ್ಸವದ ಧಾರ್ಮಿಕ ವಿಧಿ-ವಿಧಾನಗಳ ನೇತೃತ್ವ, ದಿವ್ಯ ಮಾರ್ಗದರ್ಶನ ನೀಡಲು ಹೊಂಬುಜ ಅತಿಶಯ ಶ್ರೀಕ್ಷೇತ್ರ ಜೈನ ಮಠದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಗಳವರು ವಿದೇಶ ವಿಹಾರಕ್ಕಾಗಿ ತೆರಳಿದರು.

ಪಟ್ಟಾಭಿಷಿಕ್ತರಾಗಿ 11 ವರ್ಷದ ಬಳಿಕ ಶ್ರೀಗಳವರು ಪ್ರಥಮ ಬಾರಿಗೆ ವಿದೇಶದಲ್ಲಿ ಜಿನಧರ್ಮ ಪ್ರಭಾವನೆಯ ಪ್ರವಚನಗಳನ್ನು ನೀಡಲಿರುವರು. ಜೂ. 24 ರಿಂದ 28ರವರೆಗೆ ಟೊರಂಟೋ ಜಿನಮಂದಿರದ ಪಂಚಕಲ್ಯಾಣ ವಿಧಾನಗಳಿವೆ.

ಹೊಂಬುಜ ಶ್ರೀಕ್ಷೇತ್ರದ ಭಗವಾನ್ ಶ್ರೀ ಪಾರ್ಶ್ವನಾಥ ಸ್ವಾಮಿ, ಜಗನ್ಮಾತೆ ಶ್ರೀ ಪದ್ಮಾವತಿ ದೇವಿ, ಶ್ರೀ ನೇಮಿನಾಥ ಸ್ವಾಮಿ, ಶ್ರೀ ಕೂಷ್ಮಾಂಡಿನಿ ದೇವಿ, ಶ್ರೀಕ್ಷೇತ್ರಪಾಲ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ, ಶ್ರೀಗಳವರಿಗೆ ಶ್ರೀಮಠದ ಭಕ್ತರಿಂದ, ಪುರೋಹಿತವರ್ಗ, ಸಿಬ್ಬಂದಿಯವರಿಂದ ಭಕ್ತಿಪೂರ್ವಕ ಪ್ರಣಾಮಗಳನ್ನು ಸಮರ್ಪಿಸಲಾಯಿತು.

ಜೈನ ಧರ್ಮದ ಧಾರ್ಮಿಕ ಪೂಜಾ ವಿಧಿ, ಧರ್ಮಸಿದ್ಧಾಂತ, ಆಚಾರ ವಿಚಾರ ಮತ್ತು ಆಹಾರವಿಧಿ-ಪರಿಸರ ರಕ್ಷಣೆಯೊಂದಿಗೆ ಶೈಕ್ಷಣಿಕ ಪ್ರಗತಿಗಾಗಿ ಪ್ರಭಾವನಾ ಪ್ರವಚನ ದಯಪಾಲಿಸಲಿದ್ದಾರೆ ಎಂದು ಶ್ರೀಮಠದ ಆಡಳಿತಾಧಿಕಾರಿ ಸಿ.ಡಿ. ಅಶೋಕ ಕುಮಾರ ತಿಳಿಸಿರುವರು.

ರಿಪ್ಪನ್‌ಪೇಟೆ : ತೀರ್ಥಹಳ್ಳಿಯ ಅಶ್ಲೀಲ ವೀಡಿಯೋ ವೈರಲ್ ಪ್ರಕರಣ – ಆರೋಪಿಯ ವಿರುದ್ದ ಸೂಕ್ತ ಕಠಿಣ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಮನವಿ



ರಿಪ್ಪನ್‌ಪೇಟೆ : 16-06-2023 ರಂದು ವಾಟ್ಸಪ್ ಗ್ರೂಫ್‌ಗಳಲ್ಲಿ ತೀರ್ಥಹಳ್ಳಿಯ ಪ್ರತಿಷ್ಠಿತ ಕಾಲೇಜು ಯುವತಿಯರ ಅಶ್ಲೀಲ ನಗ್ನ ಚಿತ್ರಗಳನ್ನು ಹರಿಬಿಡಲಾಗಿದ್ದು, ವಿಡಿಯೋದಲ್ಲಿ ABVP ವಿದ್ಯಾರ್ಥಿ ಸಂಘಟನೆಯ ತೀರ್ಥಹಳ್ಳಿ ಘಟಕದ ಅಧ್ಯಕ್ಷನೂ ಕೂಡ ಇದ್ದು ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೆ ಆತನ ವಿರುದ್ಧ ಕಾನೂನು ಕಠಿಣ ಕ್ರಮ ಜರುಗಿಸುವಂತೆ ರಿಪ್ಪನ್‌ಪೇಟೆ ಕಾಂಗ್ರೆಸ್ ಘಟಕದ ವತಿಯಿಂದ ನಾಡ ಕಛೇರಿಯಲ್ಲಿ ಉಪ ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.


ಸಂಘಟನೆಗೆ ಸದಸ್ಯತ್ವ ಆಮಿಷ ತೋರಿಸಿ, ವೀಡಿಯೋ ಮಾಡಿ ದೇಹದ ನಗ್ನ ದೃಶ್ಯಗಳನ್ನು ಅಶ್ಲೀಲವಾಗಿ ಚಿತ್ರಿಸಿ ವೈರಲ್ ಮಾಡುವ ಬೆದರಿಕೆ ಒಡ್ಡಿ ಬ್ಲಾಕ್‌ಮೇಲ್ ಮಾಡುತ್ತಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆತಂಕ
ಕಂಡುಬಂದಿದೆ. ಇದೊಂದು ಸಮಾಜ ತಲೆತಗ್ಗಿಸುವ ಪ್ರಕರಣವಾಗಿದ್ದು ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೆ ಸೂಕ್ತ ರೀತಿಯಲ್ಲಿ ತನಿಖೆ ನಡೆಸಿ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹ ಮಾಡಲಾಯಿತು.


ಈ ರೀತಿಯ ಪ್ರಕರಣ ಮುಂದುವರೆದರೆ ಮರ್ಯಾದಸ್ಥ ಕುಟುಂಬದ ಹೆಣ್ಣುಮಕ್ಕಳು ಶಾಲಾ ಕಾಲೇಜುಗಳಿಗೆ ಬರುವುದು ಕಷ್ಟ ಸಾಧ್ಯವಾಗಲಿದ್ದು ಪೋಲೀಸ್ ಇಲಾಖೆ ಪ್ರಭಾವಿಗಳ ಪ್ರಭಾವಕ್ಕೆ ಮಣಿಯದೇ ಸೂಕ್ತ ಕಾನೂನು ಕ್ರಮ ಜರುಗಿಸಬೇಕಾಗಿ ಕೋರಿಕೊಳ್ಳುತ್ತೇವೆ ಎಂದು ಮನವಿ ಸಲ್ಲಿಸಿದ್ದಾರೆ.

ಈ ಸಂಧರ್ಭದಲ್ಲಿ ಮುಖಂಡರಾದ ಈಶ್ವರಪ್ಪ ಗೌಡ ಹೆಚ್ ವಿ , ಆಸೀಫ಼್ ಭಾಷಾಸಾಬ್ ,ಮಧುಸೂಧನ್ ,ಮಹೇಂದ್ರ ಬುಕ್ಕಿವರೆ ,ಗಣಪತಿ ,ರವಿ ,ಶ್ರೀಧರ್ ಹಾಗೂ ಇನ್ನಿತರರಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ

ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ Ripponpete celebrates the 59th annual Ganapati festival with…

2 hours ago

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

1 day ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

1 day ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

1 day ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

2 days ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

3 days ago